Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರತೀ ತಿಂಗಳ ಎರಡನೆ ರವಿವಾರ ‘ವಿರಳ...

ಪ್ರತೀ ತಿಂಗಳ ಎರಡನೆ ರವಿವಾರ ‘ವಿರಳ ಸಂಚಾರ ದಿನ’:ಸಚಿವ ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ1 Dec 2017 7:40 PM IST
share

ಬೆಂಗಳೂರು, ಡಿ.1: ಬೆಂಗಳೂರಿಗರು ತಮ್ಮ ಪರಿಸರದ ಉಳಿವಿಗಾಗಿ ತಿಂಗಳಲ್ಲಿ ಒಂದು ದಿನ ಸ್ವಂತ ವಾಹನಗಳ ಬಳಕೆಯನ್ನು ಸ್ಥಗಿತಗೊಳಿಸುವ ದಿಟ್ಟ ನಿರ್ಧಾರ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ವತಿಯಿಂದ ಪ್ರತಿ ತಿಂಗಳ ಎರಡನೆ ರವಿವಾರ ‘ವಿರಳ ಸಂಚಾರ ದಿನ’(ಲೆಸ್ ಟ್ರಾಫಿಕ್ ಡೇ) ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2018ನೆ ಸಾಲಿನ ಜನವರಿ 14(ಎರಡನೆ ರವಿವಾರ)ರಂದು ಸಂಕ್ರಾಂತಿ ಹಬ್ಬ ಇರುವುದರಿಂದ, ಫೆಬ್ರವರಿ ತಿಂಗಳಿನಿಂದ ಈ ಅಭಿಯಾನವನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದರು.

ಈ ಸಂಬಂಧ ಶೀಘ್ರದಲ್ಲೇ ಬೆಂಗಳೂರು ನಗರದ ವಿವಿಧ ನಾಗರಿಕ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಮಾಲಿನ್ಯ ನಿಯಂತ್ರಣ ಮಂಡಲಿ ಅಧ್ಯಕ್ಷರು, ಬಿಬಿಎಂಪಿ ಮೇಯರ್ ಹಾಗೂ ಆಯುಕ್ತರೊಂದಿಗೆ ಸಭೆ ನಡೆಸಲಾಗುವುದು ಎಂದವರು,
ಪ್ರತಿತಿಂಗಳ ಎರಡನೆ ರವಿವಾರ ಸ್ವಂತ ವಾಹನವನ್ನು ಬಳಸದೆ ಸಮೂಹ ಸಾರಿಗೆ ಬಳಸಲು ಪ್ರತಿಯೊಬ್ಬರೂ ಪಣತೊಟ್ಟು, ಬೆಂಗಳೂರಿನ ಪರಿಸರ ಮಾಲಿನ್ಯ ತಡೆಗಟ್ಟುವ ಜತೆಗೆ ಸಂಚಾರ ನಿಯಂತ್ರಣಕ್ಕೂ ಮುಂದಾಗಬೇಕು ಎಂದು ಮನವಿ ಮಾಡಿದರು.

ವಾಯುಮಾಲಿನ್ಯ ಹೆಚ್ಚುತ್ತಿರುವ ಪ್ರಮುಖ ನಗರಗಳಲ್ಲಿ ಬೆಂಗಳೂರು ಸೇರಿದೆ. ಭವಿಷ್ಯದಲ್ಲಿ ದಿಲ್ಲಿಯ ವಿಷಮಯ ವಾತಾವರಣ ಮೀರಿಸುವ ಅಪಾಯವನ್ನು ನಮ್ಮ ನಗರ ಎದುರಿಸುತ್ತಿದೆ. ಲಕ್ಷಾಂತರ ವಾಹನಗಳು ಉಗುಳುತ್ತಿರುವ ಹೊಗೆಯಿಂದಾಗಿ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಆತಂಕವ್ಯಕ್ತಪಡಿಸಿದರು.

ವಿರಳ ಸಂಚಾರ ದಿನದಂದು ಬೆಂಗಳೂರಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸುಗಳು, ಬಾಡಿಗೆ ವಾಹನಗಳು, ಆಟೊರಿಕ್ಷಾಗಳು ಹಾಗೂ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಯಾವುದೆ ನಿರ್ಬಂಧ ಇರುವುದಿಲ್ಲ. ಈ ವಾಹನಗಳನ್ನು ಸ್ವಂತ ವಾಹನಗಳ ಮಾಲಕರು ತಮ್ಮ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಬೆಂಗಳೂರಿನೆಲ್ಲೆಡೆ ಇರುವ ಜಾಹೀರಾತು ಫಲಕಗಳಲ್ಲಿ ಲೆಸ್ ಟ್ರಾಫಿಕ್ ಡೇ ಅಭಿಯಾನದ ಮಹತ್ವವನ್ನು ಸಾರಲಾಗುವುದು. ವಿರಳ ಸಂಚಾರ ದಿನದ ಪರಿಕಲ್ಪನೆಯು ಇಡೀ ವಿಶ್ವದಲ್ಲೆ ಪ್ರಥಮವಾದದ್ದು. ಬೆಂಗಳೂರಿನಲ್ಲಿ ಸುಮಾರು 64,36,813 ವಾಹನಗಳು ಕಳೆದ ಸೆಪ್ಟಂಬರ್ ಅಂತ್ಯಕ್ಕೆ ನೋಂದಣಿಯಾಗಿವೆ. ಇದರಲ್ಲಿ 49,42,170 ದ್ವಿಚಕ್ರ ವಾಹನಗಳಿವೆ ಎಂದು ಅವರು ವಿವರಣೆ ನೀಡಿದರು.

ಹಳದಿ ನೋಂದಣಿ ಫಲಕ ಹೊಂದಿರುವ ಸಾರಿಗೆ ವಾಹನಗಳ ಸಂಖ್ಯೆ 6,95,582. ಒಟ್ಟು ಬೆಂಗಳೂರಿನಲ್ಲಿ 71,31,392 ವಾಹನಗಳು ನೋಂದಣಿಯಾಗಿವೆ. ವಿರಳ ಸಂಚಾರ ದಿನದಂದು ಸಂಪೂರ್ಣವಾಗಿ ವಾಹನಗಳ ಬಳಕೆ ನಿಲ್ಲಿಸಿದರೆ ಪರಿಸರಕ್ಕೆ ಹಾಗೂ ಸುಂದರ ಬೆಂಗಳೂರಿಗೆ ಕೊಡುಗೆ ನೀಡಿದಂತಾಗುತ್ತದೆ ಎಂದು  ಅಭಿಪ್ರಾಯಪಟ್ಟರು.

ಕರ್ಕಶ ಹಾರನ್‌ಗಳಿಗೆ ಕಡಿವಾಣ: ಖಾಸಗಿ ಬಸ್ ಹಾಗೂ ಲಾರಿಗಳಲ್ಲಿ ಬಳಸುತ್ತಿರುವ ಕರ್ಕಶವಾದ ಶಬ್ದವನ್ನು ಹೊಂದಿರುವ ಹಾರನ್‌ಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ 2 ಸ್ಟ್ರೋಕ್ ಆಟೊಗಳನ್ನು 4 ಸ್ಟ್ರೋಕ್‌ಗೆ ಪರಿವರ್ತಿಸಿಕೊಳ್ಳಲು 30 ಸಾವಿರ ರೂ.ವರೆಗೆ ಸಹಾಯಧನವನ್ನು ಸರಕಾರದ ವತಿಯಿಂದ ನೀಡಲಾಗುತ್ತಿದೆ ಎಂದು ನುಡಿದರು.

ಇಂದಿರಾ ಸಾರಿಗೆ-ಬಸ್‌ಪಾಸ್: ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಸುಮಾರು 2 ಲಕ್ಷ ಮಹಿಳಾ ಕಾರ್ಮಿಕರಿಗಾಗಿ ಇಂದಿರಾ ಸಾರಿಗೆ ಆರಂಭಿಸಲು ಸರಕಾರ ನಿರ್ಧರಿಸಿದೆ. ಇದರ ಜತೆಗೆ ಅಸಂಘಟಿತ ವಲಯದ ಮಹಿಳಾ ಕಾರ್ಮಿಕರಿಗಾಗಿ ಇಂದಿರಾ ಬಸ್‌ಪಾಸ್‌ಗಳನ್ನು ಪರಿಚಯಿಸಲಾಗುತ್ತಿದೆ ಎಂದು ರೇವಣ್ಣ ತಿಳಿಸಿದರು.

'ರಸ್ತೆಗಿಳಿಯಲಿವೆ ಇಲೆಕ್ಟ್ರಿಕ್ ಬಸ್ಸುಗಳು'
ಬೆಂಗಳೂರಿನಲ್ಲಿ ಇಲೆಕ್ಟ್ರಿಕ್ ಬಸ್ಸುಗಳ ಸಂಚಾರವನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಕೇಂದ್ರ ಸರಕಾರದ ಜತೆ ಮಾತುಕತೆ ನಡೆಯುತ್ತಿದೆ.
-ಎಚ್.ಎಂ.ರೇವಣ್ಣ, ಸಾರಿಗೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X