ಸಫ್ವಾನ್ ಕೊಲೆ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಮನವಿ

ಕಾಟಿಪಳ್ಳ, ಡಿ. 1: ಸಫ್ವಾನ್ ಅಪಹರಣ, ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಪ್ರಕರಣದ ಪ್ರಮುಖ ಆರೋಪಿಗಳಾದ ಎಲ್ಲಾ ಕುಖ್ಯಾತ ಕ್ರಿಮಿನಲ್ ಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಗಾಂಜಾ, ಮಾದಕ ಪದಾರ್ಥ ಮಾರಾಟ ಜಾಲವನ್ನು ಬುಡ ಸಮೇತ ಕಿತ್ತು ಹಾಕುವಂತೆ ಒತ್ತಾಯಿಸಿ ಕಾಟಿಪಳ್ಳ, ಕೃಷ್ಣಾಪುರ, ಚೊಕ್ಕಬೆಟ್ಟು ನಾಗರಿಕರ ಪರವಾಗಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ವಿವಿಧ ಸಂಘ ಸಂಸ್ಥೆಗಳ, ಕ್ರೀಡಾ ತಂಡಗಳನ್ನು ಪ್ರತಿನಿಧಿಸಿ ನೂರಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು.
Next Story





