Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಚ್‌ಐವಿ ಸೋಂಕಿತರ ಆತ್ಮವಿಶ್ವಾಸ...

ಎಚ್‌ಐವಿ ಸೋಂಕಿತರ ಆತ್ಮವಿಶ್ವಾಸ ವೃದ್ಧಿಗೆ ಪ್ರಯತ್ನ: ಸೊರಕೆ

ವಾರ್ತಾಭಾರತಿವಾರ್ತಾಭಾರತಿ1 Dec 2017 8:26 PM IST
share
ಎಚ್‌ಐವಿ ಸೋಂಕಿತರ ಆತ್ಮವಿಶ್ವಾಸ ವೃದ್ಧಿಗೆ ಪ್ರಯತ್ನ: ಸೊರಕೆ

ಉದ್ಯಾವರ, ಡಿ.1: ರಾಜ್ಯ ಸರಕಾರ ಏಡ್ಸ್/ಎಚ್‌ಐವಿ ಸೋಂಕಿತರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು, ಈ ಮೂಲಕ ಅವರ ಆತ್ಮವಿಶ್ವಾಸ ವೃದ್ಧಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕಾಪು ಶಾಸಕ ವಿಯ ಕುಮಾರ್ ಸೊರಕೆ ಹೇಳಿದ್ದಾರೆ.

 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯದ ರೆಡ್‌ಕ್ರಾಸ್ ಘಟಕ ಹಾಗೂ ಎನ್ನೆಸ್ಸೆಸ್ ಘಟಕ ಉದ್ಯಾವರ, ನಾಗರಿಕ ಸಹಾಯವಾಣಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ ಇವುಗಳ ಸಹಯೋಗದಲ್ಲಿ ‘ಆರೋಗ್ಯ ಎಲ್ಲರ ಹಕ್ಕು-ನನ್ನ ಆರೋಗ್ಯ ನನ್ನ ಹಕ್ಕು’ ಘೋಷಣೆಯಡಿ ಉದ್ಯಾವರ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆದ ‘ವಿಶ್ವ ಏಡ್ಸ್ ದಿನಾಚರಣೆ’ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಎಚ್‌ಐವಿ ಪೀಡಿತರನ್ನು ಸಮಾಜ ವಕ್ರದೃಷ್ಟಿಯಿಂದ ನೋಡುವ ಕಾಲ ಕೆಲ ಸಮಯದ ಹಿಂದೆ ಇತ್ತು. ಆದರೆ ಈಗ ವ್ಯವಸ್ಥಿತ ಚಿಕಿತ್ಸೆ, ಮುಂಜಾಗ್ರತಾ ಕ್ರಮದಿಂದ ಏಡ್ಸ್/ಎಚ್‌ಐವಿ ಸೋಂಕು ತಡೆಯುವಲ್ಲಿ ರಾಜ್ಯ ಪರಿಣಾಮಕಾರಿ ಘಟ್ಟಕ್ಕೆ ತಲುಪಿದೆ. ಇನ್ನಷ್ಟು ಉತ್ತಮ ರೀತಿಯಲ್ಲಿ ಕೆಲಸ ಮಾಡಿ ಎಚ್‌ಐವಿ ಯನ್ನು ಶೂನ್ಯಕ್ಕಿಳಿಸಲು ಶ್ರಮ ವಹಿಸಬೇಕಿದೆ ಎಂದು ಸೊರಕೆ ಹೇಳಿದರು.

ವಿಶ್ವ ಏಡ್ಸ್ ದಿನದ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ಜಿಪಂ ಅಧ್ಯಕ್ಷ ದಿನಕರ ಬಾಬು, ಸಮಾಜದ ಎಲ್ಲರ ಸಹಕಾರದಿಂದ ಸೋಂಕು ತಡೆ ಗಟ್ಟಲು ಸಾಧ್ಯವಿದೆ. ಬದ್ಧತೆಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದರು.

ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉದ್ಯಾವರ ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಲತಾ, ಕಾಲೇಜಿನ ಡಾ. ಪ್ರಭಾಕರ ಉಪಾಧ್ಯಾಯ ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಪ್ರಸ್ತಾವಿಕವಾಗಿ ಮಾತನಾಡಿದರೆ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ ಚಿದಾನಂದ ಸಂಜು ಎಸ್.ವಿ. ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X