ಬುಡೋಳಿಯಲ್ಲಿ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರರಿಗೆ ಗಾಯ

ಬಂಟ್ವಾಳ, ಡಿ.1: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.
ಬೈಕ್ ಸವಾರ ಉಪ್ಪಿನಂಗಡಿ ನಿವಾಸಿ ಮುಸ್ತಫಾ (20) ಹಾಗೂ ಟಿವಿಎಸ್ ಜುಪಿಟರ್ ಸವಾರ ಗಡಿಯಾರ ನಿವಾಸಿ ಝುಬೈರ್ (18) ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಟಿವಿಎಸ್ ಜುಪಿಟರ್ ವಾಹನಕ್ಕೆ ಬುಡೋಳಿ ಎಂಬಲ್ಲಿ ಎದುರಿನಿಂದ ಬಂದ ಬೈಕ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿ ಸಿದೆ. ಇಬ್ಬರು ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಈ ಪೈಕಿ ಮುಸ್ತಫಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಈ ಸಂಬಂಧ ವಿಟ್ಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





