ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಮಾಲಾರ್ಪಣೆ
ಬೆಂಗಳೂರು, ಡಿ.1: ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ 37ನೆ ವರ್ಷದ ಪುಣ್ಯದಿನದ ಅಂಗವಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಹಾಗೂ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸೇರಿದಂತೆ ಸರಕಾರಿ ಅಧಿಕಾರಿಗಳು ಮತ್ತು ಕೆಂಗಲ್ ಹನುಮಂತಯ್ಯನವರ ಕುಟುಂಬಸ್ಥರು ಉಪಸ್ಥಿತರಿದ್ದರು.
Next Story





