Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಾವಿದೆಯ ವೈದ್ಯಕೀಯ ವೆಚ್ಚ ಮರು...

ಕಲಾವಿದೆಯ ವೈದ್ಯಕೀಯ ವೆಚ್ಚ ಮರು ಪಾವತಿಸಲು ಮೀಣಮೇಷ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಜವಾಬ್ದಾರಿ

ವಾರ್ತಾಭಾರತಿವಾರ್ತಾಭಾರತಿ1 Dec 2017 10:33 PM IST
share

ಗದಗ, ಡಿ.1: ರಂಗಭೂಮಿ ಕಲಾವಿದೆಯ ವೈದ್ಯಕೀಯ ವೆಚ್ಚ ಮರು ಪಾವತಿಸಬೇಕಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೇಜವಾಬ್ದಾರಿ ತೋರಿಸಿದ್ದಲ್ಲದೆ, ತಾನೇ ವಿತರಿಸಿದ್ದ ವೈದ್ಯಕೀಯ ಸೌಲಭ್ಯದ ಗುರುತಿನ ಚೀಟಿಯನ್ನೆ ಅವರು ಪಡೆದಿಲ್ಲ ಎಂಬ ಶರಾ ಬರೆಯುವ ಮೂಲಕ ಕಲಾವಿದೆ ಆತ್ಮಕ್ಕೆ ಅಗೌರವ ತೋರಿದೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ವೃತ್ತಿ ರಂಗಭೂಮಿ ಕಲಾವಿದೆ ಎಚ್.ಪ್ಲೋರಿನಾಬಾಯಿ ಕೊಟ್ರಪ್ಪ ಲಕ್ಕುಂಡಿ ಕುಟುಂಬಕ್ಕೆ ವೈದ್ಯಕೀಯ ವೆಚ್ಚ ಮರುಪಾವತಿಸಲು ಇಲಾಖೆಯು ಅನಾದರ ಮಾಡುತ್ತಿದೆ. ಅವರ ಪತಿ, ಕಲಾವಿದ ಕೊಟ್ರಪ್ಪ ಎರಡು ವರ್ಷಗಳಿಂದ ಪುಡಿಗಾಸಿನ ಸೌಲಭ್ಯಕ್ಕಾಗಿ ಅಲೆದಾಡಿ ಹಾಸಿಗೆ ಹಿಡಿದಿದ್ದಾರೆ.

ಕಲಾವಿದೆ ಕುಟುಂಬಕ್ಕೆ ಮರು ಪಾವತಿಸಬೇಕಿರುವ ವೈದ್ಯಕೀಯ ವೆಚ್ಚದ ಮೊತ್ತವೂ ದೊಡ್ಡದಿಲ್ಲ. ಕೇವಲ 18,250 ರೂ.ಪಾವತಿಸಲು ಇಲಾಖೆ ಹಿಂದೆಮುಂದೆ ನೋಡುತ್ತಿದೆ. ನಿಯಮಾವಳಿ ಪ್ರಕಾರವೇ ಅರ್ಜಿ ಸಲ್ಲಿಸಿದ್ದರೂ ಪರಿಶೀಲಿಸಿ, ಪರಿಗಣಿಸಲು ಮನಸ್ಸು ಮಾಡುತ್ತಿಲ್ಲ. ಇದರಿಂದ, ಕುಟುಂಬ ತೊಂದರೆಗೆ ಸಿಲುಕಿದೆ.

ಸಮಸ್ಯೆ ಏನು: ಗದಗನ ಗುರು ಕೊಟ್ಟೂರೇಶ್ವರ ನಾಟಕ ಸಂಘದಲ್ಲಿ ಪ್ಲೋರಿನಾಬಾಯಿ 57 ವರ್ಷ ವೃತ್ತಿ ರಂಗಭೂಮಿ ಕಲಾವಿದೆಯಾಗಿ ಸೇವೆ ಸಲ್ಲಿಸಿದ್ದರು. ಅವರ ಸುದೀರ್ಘ ರಂಗ ಸೇವೆಗೆ 2013ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿತ್ತು. ಅಷ್ಟರಲ್ಲಿ ವಯೋಸಹಜ ಸಮಸ್ಯೆಯಿಂದ ಅವರು ಅಸಕ್ತರಾಗಿದ್ದರು.

ಸರಕಾರದ ಪರವಾಗಿ ಎಚ್.ಕೆ.ಪಾಟೀಲ್, ಉಮಾಶ್ರೀ ಅವರು ಪ್ಲೋರಿನಾಬಾಯಿ ಅವರ ಮನೆಗೆ ಭೇಟಿ ನೀಡಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ್ದರು. ಸಂಕಷ್ಟದಲ್ಲಿನ ಆಕೆ ಕಣ್ಣೀರು ಒರೆಸಿದ್ದರು. ಈಗ ಅವರ ಪತಿಯೇ ಕಣ್ಣೀರು ಹಾಕುತ್ತಿದ್ದರೂ ಗಮನಿಸುತ್ತಿಲ್ಲ.

ಪ್ಲೋರಿನಾಬಾಯಿ ಅವರು ಅನಾರೋಗ್ಯದಿಂದ ಸೆ.17ರಂದು ಗದಗ ಬೆಟಗೇರಿಯ ಸಿಎಸ್‌ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪ್ಲೋರಿನಾಬಾಯಿ ಅವರ ಚಿಕಿತ್ಸೆಗಾಗಿ ಪತಿಯೇ ಹಣವನ್ನು ಖರ್ಚು ಮಾಡಿದ್ದರು. ಆದರೆ, ಸರಕಾರ ಈವರೆಗೂ ಚಿಕಿತ್ಸಾ ವೆಚ್ಚದ ಬಿಲ್ ಅನ್ನು ಮರು ಪಾವತಿ ಮಾಡುತ್ತಿಲ್ಲ ಎಂದು ಪ್ಲೋರಿನಾ ಅವರ ಪತಿ ಕೊಟ್ರಪ್ಪ ನೋವು ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X