ಬಿಎಸ್‌ವೈ ವಿರುದ್ಧ ಮೊಕದ್ದಮೆ ದಾಖಲಿಸುವೆ: ಸಚಿವ ಪಾಟೀಲ್
ಬೆಂಗಳೂರು, ಡಿ.1: ತಮ್ಮನ್ನು ‘ಸಿದ್ದರಾಮಯ್ಯ ಸರಕಾರದ ಕಮಿಷನ್ ಏಜೆಂಟ್’ ಎಂದು ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಮೊಕದ್ದಮೆ ದಾಖಲಿಸುವೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.
ಯಡಿಯೂರಪ್ಪನವರ ಹೇಳಿಕೆಯನ್ನು ತಾನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದು, ಶೀಘ್ರದಲ್ ಅವರ ವಿರುದ್ಧ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಪಾಟೀಲ್ ಹೇಳಿದ್ದಾರೆ.
ಪರಿವರ್ತನೆ ಯಾತ್ರೆಯಲ್ಲಿ ಸತತವಾಗಿ ಕಾಂಗ್ರೆಸ್ ನೇತೃತ್ವದ ಸರಕಾರ ಮತ್ತು ನನ್ನ ವಿರುದ್ಧ ಯಡಿಯೂರಪ್ಪ ಮಾಡುತ್ತಿರುವ ಎಲ್ಲ ಆರೋಪಗಳಿಗೆ ಡಿ.4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರಕ್ಕೆ ಭೇಟಿ ನೀಡುವ ಸಂದರ್ಭದಲ್ಲೆ ಬಿಎಸ್‌ವೈಗೆ ಪ್ರತ್ಯುತ್ತರ ನೀಡಲಿದ್ದೇನೆ ಎಂದು ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





