Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಸಿಯೂಟ ಕೊಡದಿದ್ದರೆ ‘ತಟ್ಟೆ...

ಬಿಸಿಯೂಟ ಕೊಡದಿದ್ದರೆ ‘ತಟ್ಟೆ ಚಳವಳಿ’ನಡೆಸುವೆ: ಶಿಕ್ಷಕ ಎಚ್ಚರಿಕೆ

ವಿಶ್ವ ವಿಕಲಚೇತನರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ2 Dec 2017 5:27 PM IST
share
ಬಿಸಿಯೂಟ ಕೊಡದಿದ್ದರೆ ‘ತಟ್ಟೆ ಚಳವಳಿ’ನಡೆಸುವೆ: ಶಿಕ್ಷಕ ಎಚ್ಚರಿಕೆ

ಮಂಗಳೂರು, ಡಿ.2: ರಾಜ್ಯ ಸರಕಾರ ವಿಶೇಷ ಚೇತನ ಮಕ್ಕಳಿಗೆ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ನಿಲ್ಲಿಸಿದೆ. ಇದರ ವಿರುದ್ಧ ಧ್ವನಿ ಎತ್ತುವ ಸಾಮರ್ಥ್ಯ ಈ ಮಕ್ಕಳಿಗೆ ಇಲ್ಲ. ಹಾಗಾಗಿ ಜನಪ್ರತಿನಿಧಿಗಳು ಅತಿ ಶೀಘ್ರ ಸರಕಾರದ ಮೇಲೆ ಒತ್ತಡ ಹಾಕಿ ಬಿಸಿಯೂಟ ಆರಂಭಿಸಬೇಕು. ಇಲ್ಲದಿದ್ದರೆ ತಾನು ‘ತಟ್ಟೆ ಚಳವಳಿ’ ನಡೆಸುವೆ ಎಂದು ವಿಕಲಚೇತನ ವಿದ್ಯಾರ್ಥಿಗಳ ಶಿಕ್ಷಕ ನಾರಾಯಣ ಶೇರಿಗಾರ ಎಚ್ಚರಿಸಿದರು.

ದ.ಕ.ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ ಮತ್ತು ವಿಕಲ ಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಶನಿವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ರಾಜಕಾರಣಿಗಳು ವಿಕಲಚೇತನರ ನೋವು-ನಲಿವು ಆಲಿಸಲು ಸಮಯ ಮೀಸಲಿಡಬೇಕು. ತರಾತುರಿಯಲ್ಲಿ ಆಗಮಿಸಿ ಸಭೆಯಿಂದ ಹೊರ ನಡೆಯುವ ಪರಿಪಾಠ ನಿಲ್ಲಿಸಬೇಕು. ವಿಕಲಚೇತನರ ಕಲ್ಯಾಣಕ್ಕೆ ಶ್ರಮಿಸಬೇಕು. ಸರಕಾರ ನಿಲ್ಲಿಸಿದ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಪುನರಾರಂಭಿಸ ಬೇಕು ಎಂದು ನಾರಾಯಣ ಶೇರಿಗಾರ ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಸರಕಾರ ವಿಕಲಚೇತನ ಕಲ್ಯಾಣಕ್ಕೆ ಶ್ರಮಿಸಲಿದೆ. ವಿಕಲಚೇತನರ ಸೇವೆಗೈಯುವ ಜಿಲ್ಲೆಯ ಸಂಘ ಸಂಸ್ಥೆಗಳು ನಿರೀಕ್ಷೆಗೂ ಮೀರಿದ ಕೆಲಸ ಮಾಡುತ್ತಿದೆ. ಈ ಸಂಸ್ಥೆಯೊಂದಿಗೆ ಕೈ ಜೋಡಿಸಲು ಸರಕಾರ ಬದ್ಧವಾಗಿದೆ. ಬಿಸಿಯೂಟ ಪುನರಾರಂಭಿಸುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲಾಗುವುದು ಎಂದರು.

ವೇದಿಕೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮಲ್ಲನ ಗೌಡ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮೇಯರ್ ಕವಿತಾ ಸನಿಲ್, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷ ಕಸ್ತೂರಿ ಪಂಜ, ಉದ್ಯಮಿಗಳಾದ ಎಂ. ಗಣೇಶ್ ಶೆಟ್ಟಿ, ಅಶೋಕ್ ಮೊಯ್ಲಿ, ಗಾಂಧಿನಗರ ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಸುಧಾಕರ ಶೆಟ್ಟಿ, ವಿಕಲ ಚೇತನರ ಕಲ್ಯಾಣಕ್ಕೆ ಶ್ರಮಿಸುವ ಸಂಘಟನೆಗಳ ಪದಾಧಿಕಾರಿಗಳಾದ ದಿನೇಶ್ ಶೆಟ್ಟಿ, ಮುರಳೀಧರ ನಾಯಕ್, ಸರಕಾರಿ ಅಧಿಕಾರಿಗಳಾದ ದೀಪು ಎಚ್. ಎನ್., ಉಸ್ಮಾನ್ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ ಸ್ವಾಗತಿಸಿದರು. ವಸಂತ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಕಲಚೇತನ ಮಕ್ಕಳ ಶಿಕ್ಷಕರಾದ ನಾರಾಯಣ ಶೇರಿಗಾರ, ಹಂಸ ಕುಮಾರಿ, ಮೇರಿ ಲೂಸಿ, ಧನಂಜಯ ವರ್ಮ, ಸಂತೋಷ್ ಕುಮಾರ್ ಟಿ.ಡಿ., ಸಂಜಯ ಪ್ರಸಾದ್, ಶೈಲಾ ಪಿ.ಜಿ., ಹರಿಣಾಕ್ಷಿ, ಅನಿತಾ ಅರ್ಜುನ್ ರಾಡ್ರಿಗಸ್, ಅಧಿಕಾರಿಗಳಾದ ಕುಮಾರಿ, ಪ್ರವೀಣ್ ನಾಯ್ಕಿ,ಬಿ. ಮುತ್ತಪ್ಪ, ವಿಕಲಚೇತನ ವಿದ್ಯಾರ್ಥಿಗಳಾದ ಪ್ರಜ್ವಲ್, ಪ್ರಜ್ಞಾ ಸಿ., ಅಸ್ಲಿ ಎ.ಜೆ. ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಕ್ರೀಡಾಸ್ಪರ್ಧೆಯಲ್ಲಿ ವಿಜೇತರಾದ ವಿಕಲಚೇತನ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಮುನ್ನ ಮಂಗಳೂರು ವಿವಿ ಕಾಲೇಜಿನಿಂದ ಪುರಭವನಕ್ಕೆ ಸಾಮಾಜಿಕ ಅರಿವಿಗಾಗಿ ಜಾಥಾ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X