ಉಡುಪಿ: ಚಿಣ್ಣರ ಮಾಸೋತ್ಸವ ಉದ್ಘಾಟನೆ

ಉಡುಪಿ, ಡಿ.2: ಶ್ರೀಕೃಷ್ಣ ಮಠದ ಚಿಣ್ಣರ ಸಂತರ್ಪಣೆಯಲ್ಲಿ ಪಾಲ್ಗೊಳ್ಳುವ ಶಾಲೆಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗುವ ‘ಚಿಣ್ಣರ ಮಾಸೋತ್ಸವ’ ಕ್ಕೆ ಮಧ್ವ ಮಂಟಪದಲ್ಲಿ ಇಂದು ಚಾಲನೆ ನೀಡಲಾಯಿತು.
ಚಿಣ್ಣರ ಮಾಸೋತ್ಸವವನ್ನು ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಚಿಣ್ಣರ ಸಂತರ್ಪಣೆಯು ಸರಕಾರದ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದ್ದು ಇದರ ಜೊತೆಗೆ ಚಿಣ್ಣರ ವಿಶಿಷ್ಟ ಪ್ರತಿಭೆಗಳನ್ನು ಬೆಳೆಸುವ ಸಲುವಾಗಿ ಚಿಣ್ಣರ ಮಾಸೋತ್ಸವ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಉಡುಪಿ ಜಿಪಂನ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕೋಟ್ಯಾನ್, ಚಿಣ್ಣರ ಸಂತರ್ಪಣೆಯ ಅನುದಾನಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಅಶೋಕ್ ಮಾಡ ಹಾಗೂ ಚಿಣ್ಣರ ಸಂತರ್ಪಣೆಯ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.
Next Story





