ಗೃಹರಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಉಡುಪಿ, ಡಿ.2: ಗೃಹರಕ್ಷಕರ ಜಿಲ್ಲಾ ಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ ಡಿ.4 ಮತ್ತು 5ರಂದು ನಡೆಯಲಿದ್ದು, ಡಿ.5ರ ಅಪರಾಹ್ನ 12:30ಕ್ಕೆ ಸಮಾರೋಪ ಸಮಾರಂಭ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ, ಅತಿಥಿಗಳಾಗಿ ಯುವ ಸಬಲೀಕರಣ ತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತಕುಮಾರ್ ಎಚ್.ಎಂ. ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಗೃಹರಕಷಕ ದಳದ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





