Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವಿಎಂ ಅಕ್ರಮದಿಂದ ಬಿಜೆಪಿಗೆ ಗೆಲುವು:...

ಇವಿಎಂ ಅಕ್ರಮದಿಂದ ಬಿಜೆಪಿಗೆ ಗೆಲುವು: ಮಾಯಾ, ಅಖಿಲೇಶ್ ಆರೋಪ

ಉ.ಪ್ರ. ಪೌರಸಂಸ್ಥೆಗಳ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ2 Dec 2017 8:51 PM IST
share
ಇವಿಎಂ ಅಕ್ರಮದಿಂದ ಬಿಜೆಪಿಗೆ ಗೆಲುವು: ಮಾಯಾ, ಅಖಿಲೇಶ್ ಆರೋಪ

ಲಕ್ನೋ,ಡಿ.2: ಇಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಅಕ್ರಮಗಳನ್ನು ನಡೆಸಿದ ಪರಿಣಾಮವಾಗಿ ಆಡಳಿತಾರೂಢ ಬಿಜೆಪಿಯು ಉತ್ತರಪ್ರದೇಶ ಪೌರಾಡಳಿತ ಚುನಾವಣೆಯಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದೆಯೆಂದು ಬಿಎಸ್‌ಪಿ ನಾಯಕಿ ಮಾಯಾವತಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ಆರೋಪಿಸಿದ್ದಾರೆ.

‘‘ಒಂದು ವೇಳೆ ಬಿಜೆಪಿ ಪ್ರಾಮಾಣಿಕವಾಗಿದ್ದರೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದರೆ, ಅದು ಮತಯಂತ್ರಗಳನ್ನು ಕೈಬಿಟ್ಟು, ಬ್ಯಾಲೆಟ್ ಪೇಪರ್‌ಗಳ ಮೂಲಕ ಮತದಾನ ನಡೆಸಬೇಕು. ಜನತೆ ನಮ್ಮಾಂದಿಗಿದ್ದಾರೆಂದು ಬಿಜೆಪಿ ನಂಬಿದ್ದೇ ಆದಲ್ಲಿ ಅದನ್ನು ಜಾರಿಗೊಳಿಸಬೇಕಿದೆ. ಒಂದು ವೇಳೆ ಬ್ಯಾಲೆಟ್‌ಪೇಪರ್‌ಗಳನ್ನು ಚುನಾವಣೆಗೆ ಬಳಸಿದಲ್ಲಿ, ಬಿಜೆಪಿ ಅಧಿಕಾರಕ್ಕೆ ಬರಲಾರದೆಂದು ನಾನು ಖಾತರಿ ನೀಡುತ್ತೇನೆ’’ ಎಂದು ಮಾಯಾವತಿ ಲಕ್ನೋದಲ್ಲಿ ತಿಳಿಸಿದ್ದಾರೆ.

 ಮತದಾನಕ್ಕೆ ಇವಿಎಂಗಳು ಬಳಕೆಯಾದ ದೊಡ್ಡ ನಗರಗಳಲ್ಲಿ ಬಿಜೆಪಿ ಉತ್ತಮ ಸಾಧನೆಯನ್ನು ಪ್ರದರ್ಶಿಸಿದರೆ, ಬ್ಯಾಲೆಟ್‌ಪೇಪರ್‌ಗಳು ಬಳಕೆಯಾಗಿರುವ ಸಣ್ಣ ಪಟ್ಟಣಗಳಲ್ಲಿ ಬಿಜೆಪಿಯು ದೊಡ್ಡ ಮಟ್ಟದ ಯಶಸ್ಸನ್ನು ಕಂಡಿಲ್ಲ ಎಂದು ಬಿಎಸ್‌ಪಿ ಹೇಳಿದೆ. ಸಣ್ಣ ಪಟ್ಟಣಗಳ ಪೌರಾಡಳಿತ ಚುನಾವಣೆಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವ ಬಗ್ಗೆ ಅವರು ಗಮನಸೆಳೆದಿದ್ದಾರೆ.

    ಮಾಯಾವತಿಯವರ ಆರೋಪಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಧ್ವನಿಗೂಡಿಸಿದ್ದಾರೆ. ಮತಯಂತ್ರಗಳು ಬಳಕೆಯಾದ ಕಡೆಗಳಲ್ಲಿ ಬಿಜೆಪಿ ಶೇ.46 ಸ್ಥಾನಗಳನ್ನು ಗೆದ್ದಿದ್ದರೆ, ಬ್ಯಾಲೆಟ್ ಪೇಪರ್ ಬಳಕೆಯಾದ ಕಡೆಗಳಲ್ಲಿ ಅದು ಕೇವಲ ಶೇ.15 ಸ್ಥಾನಗಳನ್ನು ಗೆದ್ದಿದೆ’’ ಎಂದವರು ಹೇಳಿದ್ದಾರೆ.

   ಉತ್ತರಪ್ರದೇಶದಲ್ಲಿ 16 ನಗರಪಾಲಿಕೆ ಗಳಿಗೆ ನಡೆದ ಚುನಾವಣೆಗಳಲ್ಲಿ 14ರಲ್ಲಿ ಬಿಜೆಪಿ ಜಯಿಸಿದ್ದು, ಎರಡನ್ನು ಬಿಎಸ್‌ಪಿ ಗೆದ್ದುಕೊಂಡಿದೆ. ಕಾಂಗ್ರೆಸ್ ಮತ್ತು ಎಸ್ಪಿ ಪಕ್ಷಗಳು ಒಂದೇ ಒಂದು ಪಾಲಿಕೆಯಲ್ಲೂ ಅಧಿಕಾರ ಹಿಡಿಯಲು ವಿಫಲವಾಗಿವೆ. ಆದಾಗ್ಯೂ ಚುನಾವಣೆಗೆ ಮತಪತ್ರಗಳು ಬಳಕೆಯಾದ ಸಣ್ಣ ಪಟ್ಟಣಗಳಲ್ಲಿ 198 ಪುರಸಭಾಧ್ಯಕ್ಷರ ಹುದ್ದೆಗಳಲ್ಲಿ ಕೇವಲ 70 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದ್ದರೆ, ಪಕ್ಷೇತರ ಅಭ್ಯರ್ಥಿಗಳು 43ರಲ್ಲಿ ಗೆಲುವಿನ ನಗೆಬೀರಿದ್ದಾರೆ. 5261 ಪುರಸಭಾ ಸದಸ್ಯ ಸ್ಥಾನಗಳಲ್ಲಿ ಬಿಜೆಪಿ ಕೇವಲ 922 ಸ್ಥಾನಗಳಲ್ಲಿ ವಿಜಯಗಳಿಸಿದ್ದರೆ, ಪಕ್ಷೇತರರು 3380 ಸ್ಥಾನಗಳನ್ನು ಗೆದ್ದಿದ್ದಾರೆ. 438 ನಗರಪಂಚಾಯತ್ ವರಿಷ್ಠ ಹುದ್ದೆಗಳಲ್ಲಿ ಬಿಜೆಪಿಯು 100ಹಾಗೂ ಪಕ್ಷೇತರರು 182 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

ಪ್ರತಿಪಕ್ಷಗಳ ಆರೋಪವನ್ನು ಬಿಜೆಪಿ ತಳ್ಳಿಹಾಕಿದ್ದು, ಅವು ಚುನಾವಣಾ ಸೋಲಿನಿಂದ ಹತಾಶಗೊಂಡಿವೆಯೆಂದು ಟೀಕಿಸಿದೆ. ಮಾಯಾವತಿಯವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, 2019ರ ಚುನಾವಣೆಗೆ ಸಿದ್ಧತೆ ಇನ್ನೂ ಆರಂಭಗೊಂಡಿಲ್ಲ. ಈಗಾಗಲೇ ಪ್ರತಿಪಕ್ಷಗಳು ತಮ್ಮ ಸೋಲಿಗೆ ನೆಪಗಳನ್ನು ಹುಡುಕಲಾರಂಭಿಸಿವೆ’’ ಎಂದು ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X