ಉಳ್ಳಾಲದಲ್ಲಿ ಸಮುದ್ರದ ಅಬ್ಬರ: ಪ್ರವಾಸ ಮೊಟಕುಗೊಳಿಸಿದ ಸಚಿವ ಖಾದರ್

ಮಂಗಳೂರು, ಡಿ. 2: ಎರಡು ದಿನಗಳ ಪ್ರವಾಸದಲ್ಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿದ್ದು, ರವಿವಾರ ಬೆಳಗ್ಗೆ ಕ್ಷೇತ್ರಕ್ಕೆ ಹಿಂದಿರುಗಲಿದ್ದಾರೆ.
ಈ ಬಗ್ಗೆ ‘ವಾರ್ತಾಭಾರತಿ’ಗೆ ಮಾಹಿತಿ ನೀಡಿದ ಸಚಿವರು, ಓಖಿ ಚಂಡಮಾರುತದ ಪ್ರಭಾವದಿಂದಾಗಿ ಉಳ್ಳಾಲ, ಸೋಮೇಶ್ವರ ಸಹಿತ ಕೆಲವೆಡೆಗಳಲ್ಲಿ ಸಮುದ್ರದ ಅಲೆಗಳು ಬಿರುಸುಗೊಂಡಿದೆ. ಜಿಲ್ಲಾಧಿಕಾರಿ, ತಹಶೀಲ್ದಾರ್, ಬಂದರು ಇಲಾಖಾ ಅಧಿಕಾರಿ, ಹೋಂ ಗಾರ್ಡ್ ಮೊದಲಾದ ಇಲಾಖೆಯ ಅಧಿಕಾರಿಗಳೊಂದಿಗೆ ಈಗಾಗಾಲೇ ಮಾತುಕತೆ ನಡೆಸಿದ್ದು, ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
Next Story





