Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ ಬಂದರಿನಲ್ಲಿ 200 ಹೊರರಾಜ್ಯಗಳ...

ಮಲ್ಪೆ ಬಂದರಿನಲ್ಲಿ 200 ಹೊರರಾಜ್ಯಗಳ ಬೋಟುಗಳು ಠಿಕಾಣಿ

ವಾರ್ತಾಭಾರತಿವಾರ್ತಾಭಾರತಿ3 Dec 2017 8:36 PM IST
share
ಮಲ್ಪೆ ಬಂದರಿನಲ್ಲಿ 200 ಹೊರರಾಜ್ಯಗಳ ಬೋಟುಗಳು ಠಿಕಾಣಿ

ಮಲ್ಪೆ, ಡಿ.3: ಓಖಿ ಚಂಡಮಾರುತದ ಪ್ರಭಾವದಿಂದ ಬೋಟುಗಳು ಕಳೆದ ಮೂರು ದಿನಗಳಿಂದ ಸಮುದ್ರಕ್ಕೆ ಇಳಿಯದೆ ಮಲ್ಪೆ ಬಂದರಿನಲ್ಲಿಯೇ ಲಂಗಾರು ಹಾಕಿದ್ದು, ಸುಮಾರು 200 ತಮಿಳುನಾಡು ಹಾಗೂ ಕೇರಳ ರಾಜ್ಯದ ಬೋಟುಗಳು ಇಲ್ಲಿಯೇ ಠಿಕಾಣಿ ಹೂಡಿವೆ.

ಮೂರು ದಿನಗಳಿಂದ ಸಮುದ್ರದಲ್ಲಿ ಅಬ್ಬರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಒಂದು ಸಾವಿರಕ್ಕೂ ಅಧಿಕ ಆಳ ಸಮುದ್ರ ಮೀನುಗಾರಿಕೆಯ ಬೋಟುಗಳು ಬಂದರಿನಲ್ಲಿಯೇ ಉಳಿದುಕೊಂಡಿವೆ. ಅಲ್ಲದೆ ಚಂಡಮಾರುತದ ಅಪಾಯವನ್ನು ಅರಿತ ತಮಿಳುನಾಡು ಹಾಗೂ ಕೇರಳ ರಾಜ್ಯದ 200ಕ್ಕೂ ಅಧಿಕ ಬೋಟುಗಳಿಗೆ ಮಲ್ಪೆ ಬಂದರು ಸೇರಿಕೊಂಡಿವೆ. ಈ ಬೋಟುಗಳಲ್ಲಿರುವ ಮೀನುಗಳನ್ನು ಖಾಲಿ ಮಾಡಲು ಸ್ಥಳೀಯ ಮೀನುಗಾರರು ಅವಕಾಶ ಮಾಡಿಕೊಟ್ಟಿದ್ದಾರೆ.

ಕೇರಳದ ಕೊಚ್ಚಿ ಬಂದರಿನಲ್ಲಿರುವ ತಮಿಳುನಾಡಿನ 60 ಬೋಟುಗಳಲ್ಲಿ ಕೆಲವು ಮಲ್ಪೆ ಬೀಚ್‌ನ ತೀರದಲ್ಲಿದ್ದರೆ, ಕೆಲವು ಬೋಟುಗಳು ಬಂದರಿನಲ್ಲಿವೆ. ಇದರಲ್ಲಿ ಸುಮಾರು 1000 ಮೀನುಗಾರರು ಮಲ್ಪೆಯಲ್ಲಿ ನೆಲೆ ನಿಂತಿದ್ದಾರೆ. ಇದರಲ್ಲಿ ಬಹುತೇಕ ಆಂಧ್ರಪ್ರದೇಶದ ಮೀನುಗಾರರಿದ್ದಾರೆ. ‘ನಾವು ಕೇರಳ ದಿಂದ ಮೀನುಗಾರಿಕೆ ಮಾಡಲು ಬಂದಿದ್ದು, ಆದರೆ ಇಲಾಖೆಯ ಸೂಚನೆ ಯಂತೆ ಸದ್ಯಕ್ಕೆ ಮಲ್ಪೆಯಲ್ಲಿ ಬೋಟುಗಳನ್ನು ನಿಲ್ಲಿಸಿದ್ದೇವೆ. ಇನ್ನು ಎಷ್ಟು ದಿನ ಇಲ್ಲಿ ಇರಬೇಕಾಗುತ್ತದೆ ಎಂಬುದು ಗೊತ್ತಿಲ್ಲ’ ಎನ್ನುತ್ತಾರೆ ಆಂಧ್ರಪ್ರದೇಶದ ಮೀನುಗಾರ ಬಿ.ನರಸಿಂಹರಾವ್.

‘ಜಿಲ್ಲಾಡಳಿತದ ಸೂಚನೆಯಂತೆ ಕಳೆದ ಮೂರು ದಿನಗಳಿಂದ ಮೀನುಗಾರಿಕೆ ತೆರಳದಂತೆ ಬಂದರಿನಲ್ಲಿ ಮೈಕ್ ಮೂಲಕ ಹೇಳಲಾಗುತ್ತಿದೆ. ಹುಣ್ಣಿಮೆ ಮತ್ತು ಚಂಡಮಾರುತ ಒಂದೇ ಸಮಯಕ್ಕೆ ಬಂದಿರುವುದರಿಂದ ಅಲೆಗಳ ಅಬ್ಬರ ಹೆಚ್ಚಾಗಿದೆ. ಆದರೆ ಮಲ್ಪೆ ಜನ ನಿರಾಳರಾಗಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ. ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ 200-250 ಬೋಟುಗಳು ಮಹಾರಾಷ್ಟ್ರದ ರತ್ನಗಿರಿಯಲ್ಲಿವೆ. ಆದರೆ ಅಲ್ಲಿ ಯಾವುದೇ ಅಪಾಯ ಇಲ್ಲ. ವಯರ್‌ಲೆಸ್ ಮೂಲಕ ಅವರೊಂದಿಗೆ ಸಂಪರ್ಕ ದಲ್ಲಿವೆ’ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿದ್ದಾರೆ.

ಕಡಲು ಪ್ರಕ್ಷುಬ್ದಗೊಂಡಿರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳವುದನ್ನು ನಿಷೇಧಿಸಲಾಗಿದೆ. ಟಿಕೇಟ್ ಕೌಂಟರ್‌ನಲ್ಲಿ ‘ಚಂಡಮಾರುತದ ಎಚ್ಚರಿಕೆ- ನಿಷೇಧ’ ಎಂಬ ನೋಟೀಸ್‌ನ್ನು ಹಾಕಲಾಗಿದೆ. ಸೈಂಟ್ ಮೇರಿಸ್‌ಗೆ ತೆರಳಲು ಬಂದಿದ್ದ ಹೊರ ರಾಜ್ಯದ ಯುವಕರು ನಿರಾಸೆಯಿಂದ ಮರಳುತ್ತಿರುವುದು ಕಂಡುಬಂದವು. ಅದೇ ರೀತಿ ಮಲ್ಪೆ ತೀರದಲ್ಲಿದ್ದ ಬೋಟುಗಳನ್ನು ಸುರಕ್ಷಿತ ಜಾಗಗಳಿಗೆ ಕೊಂಡೊಯ್ಯಲಾಗುತ್ತಿತ್ತು.
 

ಮಲ್ಪೆ ಬೀಚ್: ಪ್ರವಾಸಿಗರಿಗೆ ಪೊಲೀಸರ ಎಚ್ಚರಿಕೆ
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಮಲ್ಪೆ ಬೀಚ್‌ನಲ್ಲಿ ರಜೆ ದಿನ ವಾದ ಇಂದು ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಪೊಲೀಸರು ನೀರಿಗಿಳಿಯದಂತೆ ಪ್ರವಾಸಿಗರಿಗೆ ಎಚ್ಚರಿಕೆಯನ್ನು ನೀಡಿದರು.

 

ಜಿಲ್ಲಾಡಳಿತದ ಸೂಚನೆಯಂತೆ ಮಲ್ಪೆ ಠಾಣಾಧಿಕಾರಿ ಮಧು ಬಿ.ಇ. ನೇತೃತ್ವ ದಲ್ಲಿ ಪೊಲೀಸರು ಮಧ್ಯಾಹ್ನ  ನೀರಿನಲ್ಲಿ ಆಡುತ್ತಿದ್ದ ಪ್ರವಾಸಿಗರನ್ನು ಮೇಲಕ್ಕೆ ಕಳುಹಿಸಿದರು. ಬೀಚ್‌ನಲ್ಲಿ ಉದ್ದಕ್ಕೆ ಹಗ್ಗ ಹಾಕಿ ದೂರದಲ್ಲೇ ಸಮುದ್ರವನ್ನು ವೀಕ್ಷಿಸುವಂತೆ ಪೊಲೀಸರು ಸೂಚಿಸಿದರು. ಸಂಜೆವರೆಗೂ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು. ಆದರೂ ಪ್ರವಾಸಿಗರು ಯಾವುದೇ ಭಯ ಇಲ್ಲದೆ ನೀರಿಗೆ ಇಳಿದು ಆಟ ಆಡುತ್ತಿರುವುದು ಕಂಡುಬಂತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X