Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 10 ತಳಸಮುದಾಯಗಳ ಅಧ್ಯಯನ ಡಿಸೆಂಬರ್...

10 ತಳಸಮುದಾಯಗಳ ಅಧ್ಯಯನ ಡಿಸೆಂಬರ್ ಅಂತ್ಯಕ್ಕೆ ಪೂರ್ಣ

ಮಲೆಕುಡಿಯ ಸಂಶೋಧನಾ ಸಮಾಲೋಚನಾ ಸಭೆಯಲ್ಲಿ ಪ್ರೊ.ಜಾಫೆಟ್

ವಾರ್ತಾಭಾರತಿವಾರ್ತಾಭಾರತಿ3 Dec 2017 8:48 PM IST
share
10 ತಳಸಮುದಾಯಗಳ ಅಧ್ಯಯನ ಡಿಸೆಂಬರ್ ಅಂತ್ಯಕ್ಕೆ ಪೂರ್ಣ

ಉಡುಪಿ, ಡಿ.3: ರಾಜ್ಯದಲ್ಲಿ ಮಲೆಕುಡಿಯ ಸೇರಿದಂತೆ ಒಟ್ಟು 10 ತಳ ಸಮುದಾಯಗಳ ಅಧ್ಯಯನ ನಡೆಸಲಾಗುತ್ತಿದ್ದು, ಇದನ್ನು ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಶ್ವವಿದ್ಯಾ ಲಯದ ಕುಲಪತಿ ಪ್ರೊ.ಎಸ್.ಜಾಫೆಟ್ ತಿಳಿಸಿದ್ದಾರೆ.

ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯ ತಳ ಸಮುದಾಯಗಳ ಅಧ್ಯಯನ ಕೇಂದ್ರ ಮತ್ತು ರಾಜ್ಯ ಮಲೆಕುಡಿಯ ಸಂಘದ ಜಂಟಿ ಆಶ್ರಯದಲ್ಲಿ ರವಿವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ಮಲೆಕುಡಿಯ ಸಮುದಾಯ- ರಾಜ್ಯ ಮಟ್ಟದ ಸಂಶೋಧನಾ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಅರಣ್ಯ ಬುಡಕಟ್ಟು ಸಮುದಾಯಗಳು ಅತ್ಯಂತ ನಿರ್ಲಕ್ಷ್ಯಕ್ಕೆ ಒಳಗಾದ ಸಮು ದಾಯಗಳು. ಇವುಗಳ ಅಧ್ಯಯನ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾ ಗಿತ್ತು. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡುವ ಕಾಯಿದೆ ಜಾರಿಗೆ ತರುವಂತೆ ಕಾನೂನು ಶಾಲೆ ಕೆಲಸ ಮಾಡುತ್ತಿದೆ. ಈ ವರ್ಷ 25 ಸಾವಿರ ಕೋಟಿ ಅನುದಾನವನ್ನು ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ. ಈ ಹಣ ನೇರವಾಗಿ ಸಮುದಾಯಗಳಿಗೆ ತಲುಪಿಸುವ ಮತ್ತು ಈ ಕಾಯಿದೆಯನ್ನು ಉಲ್ಲಂಘನೆ ಮಾಡುವವರನ್ನು ಬಂಧಿಸಿ ಕ್ರಮ ತೆಗೆದುಕೊಳ್ಳುವ ನಿಯಾಮಾ ವಳಿಗಳನ್ನು ರೂಪಿಸ ಸರಕಾರಕ್ಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಈ ದೇಶದ ಸಂಪತ್ತು ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಿಲ್ಲ. ನಮ್ಮಲ್ಲಿರುವಂತಹ ಸಂಪತ್ತನ್ನು ಕೇವಲ ಶೇ.20ರಷ್ಟಿರುವ ಶ್ರೀಮಂತರು ಕಬಳಿಸಿ ಕೊಂಡಿದ್ದಾರೆ. ತಳ ಸಮುದಾಯಗಳು ಈ ದೇಶದ ತಳಪಾಯ. ಆದರೆ ಅವು ಗಳು ತಳಕ್ಕೆ ತಳ್ಳಲ್ಪಟ್ಟಿವೆ. ಶ್ರೀಮಂತರು ಮತ್ತು ಬಡವರ ಅಂತರ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ನಮ್ಮ ಸಮಸ್ಯೆಗಳಿಗೆ ನಾವೆ ಪರಿಹಾರ ಕಂಡುಕೊಳ್ಳಬೇಕು. ಅದು ಅಂಬೇಡ್ಕರ್ ಹೇಳಿದ ಶಿಕ್ಷಣ ಸಂಘಟನೆ ಹೋರಾಟದಿಂದ ಮಾತ್ರ ಸಾಧ್ಯ. ಪ್ರಜಾಪ್ರಭುತ್ವದ ಚೌಕಟ್ಟಿನಲ್ಲೇ ನಮ್ಮ ಹೋರಾಟಗಳು ಆಗಬೇಕು. ಅರಣ್ಯ ಮೂಲ ಬುಡಕಟ್ಟು ಸಮುದಾಯಗಳೆಲ್ಲವೂ ಒಗ್ಗಟ್ಟಾಗಬೇಕು. ಆಗ ಮಾತ್ರ ಈ ಸಮಾಜವನ್ನು ಮುಂದಿನ ತಲೆಮಾರಿನವರೆಗೆ ಕಟ್ಟಿ ಹೋಗಬಹುದು ಎಂದರು.

ಸಭೆಯನ್ನು ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಅನುರಾಧ ಮಾತನಾಡಿ, ಮಲೆಕುಡಿಯ ಸಮುದಾಯದ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ರಾಜ್ಯಮಟ್ಟದ ಸಮಸ್ಯೆಗಳನ್ನು ಸರಕಾರ ಪ್ರಸ್ತಾವನೆ ಕಳುಹಿಸಿ ಪರಿಹರಿಸಲು ಪ್ರಯತ್ನಿಸಲಾಗುವುದು. ತಳ ಸಮುದಾಯಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡ ಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ. ಮಲೆ ಕುಡಿಯ ಸಮುದಾಯದ ಜನಸಂಖ್ಯೆ ಇಳಿಮುಖ ಆಗುತ್ತಿರುವ ಬಗ್ಗೆ ಸಂಶೋಧನೆ ನಡೆಯಬೇಕು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಅಣ್ಣಪ್ಪ ಎನ್ ವಹಿಸಿ ದ್ದರು. ತಳಸಮುದಾಯಗಳ ಅಧ್ಯಯನ ಕೇಂದ್ರದ ಸಂಶೋಧನಾ ಸಲಹೆಗಾರ ಡಾ.ಆರ್.ವಿ.ಚಂದ್ರಶೇಖರ್, ಉಡುಪಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎನ್.ರಮೇಶ್, ಉಡುಪಿ ವಾಲ್ಮೀಕಿ ಮಹರ್ಷಿ ನಿಗಮದ ಜಿಲ್ಲಾ ವ್ಯವಸ್ಥಾಪಕ ದೇವರಾಜ್, ಉಡುಪಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ವ್ಯವಸ್ಥಾಪಕ ವಿಶ್ವನಾಥ್, ಉಡುಪಿ ಸಮಗ್ರ ಗ್ರಾಮೀಣ ಆಶ್ರಮದ ಸಂಯೋಜಕ ಅಶೋಕ್, ದ.ಕ. ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಸಂಜೀವ ಕುಲ್ಲಾಜೆ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಗೋಪಾಲ, ಕೊಡಗು ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಲೆಕುಡಿಯರ ವಿವಿಧ ಬೇಡಿಕೆಗಳ ಕುರಿತ ಮನವಿ ಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು. ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಣ್ಣ ವಲಿಕಜೆ ಸ್ವಾದತಿಸಿದರು. ಉಡುಪಿ ಜಿಲ್ಲಾಧ್ಯಕ್ಷ ಸುಧಾಕರ ಗೌಡ ನಾಡ್ಪಾಲು ವಂದಿಸಿದರು. ಗಂಗಾಧರ ಈದು ಕಾರ್ಯಕ್ರಮ ನಿರೂಪಿಸಿದರು.

‘ಕೃಷಿಗೆ ಮಾಡಲು ಹಣದ ಮೂಲನೇ ಇಲ್ಲ’
ಸಭೆಯಲ್ಲಿ ನೋವು ತೋಡಿಕೊಂಡ ಮಲೆಕುಡಿಯರು

ಹಕ್ಕುಪತ್ರ ಇದ್ದರೂ ನಮಗೆ ಕೃಷಿ ಇದ್ದರೂ ಯಾವುದೇ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ನೀಡುತ್ತಿಲ್ಲ. ಕೃಷಿಗಾಗಿ ಮರಗಳ ರೆಂಬೆ ಕತ್ತರಿಸಿದರೆ ಅರಣ್ಯ ಇಲಾಖೆ ಯವರು 80ಸಾವಿರ ರೂ.ನಿಂದ 1ಲಕ್ಷ ರೂ.ವರೆಗೆ ದಂಡ ವಿಧಿಸುತ್ತಾರೆ. ರಸ್ತೆ ಇಲ್ಲ ಎಂಬ ಕಾರಣಕ್ಕೆ ಕೃಷಿಗೆ ಅನುದಾನ ಕೂಡ ಸಿಗುತ್ತಿಲ್ಲ. ಶಿಕ್ಷಣವನ್ನು ಅರ್ಧ ದಲ್ಲೇ ನಿಲ್ಲಿಸಿದ್ದೇವೆ. ಕೃಷಿ ಮಾಡಲು ಹಣದ ಮೂಲವೇ ಇಲ್ಲ. ಆದುದರಿಂದ ಸರಕಾರ ಶೂನ್ಯ ಬಡ್ಡಿದರದಲ್ಲಿ ನಮಗೆ ಸಾಲ ನೀಡಬೇಕು ಎಂದು ಕಾರ್ಕಳ ಈದು ವಿಶ್ವನಾಥ್ ಒತ್ತಾಯಿಸಿದರು.

ಹೀಗೆ ಈ ಸಮಾಲೋಚನಾ ಸಭೆಯಲ್ಲಿ ಮಲೆಕುಡಿಯರು ತಮ್ಮ ಸಮಸ್ಯೆ ಹಾಗೂ ನೋವುಗಳನ್ನು ತೋಡಿಕೊಂಡರು. ರತ್ನಾಕರ್ ಸಂಪಾಜೆ ಮಾತನಾಡಿ, ಮಲೆಕುಡಿಯ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಸಿಗುತ್ತಿಲ್ಲ. ಇದನ್ನು ಎಲ್ಲರಿಗೂ ಸಿಗುವಂತೆ ಮಾಡಬೇಕು. ನಮ್ಮಲ್ಲಿ ಒಗ್ಗಟ್ಟು ಇಲ್ಲ. ಕೆಲವರು ಸ್ವಾರ್ಥಕ್ಕಾಗಿ ಇಡೀ ಸಮುದಾಯವನ್ನು ಬಲಿ ಪಶು ಮಾಡುತ್ತಿದ್ದಾರೆ ಎಂದು ದೂರಿದರು.

‘ನಮ್ಮ ಕೆಲಸಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಅವರು ವೌನ ವಹಿಸಿದರೆ ನಾವು ಪ್ರಗತಿ ಸಾಧಿಸಲು ಆಗಲ್ಲ. ಈ ಹಿಂದೆ ನಮ್ಮ ಬಗ್ಗೆ ಅಧ್ಯಯನ ಮಾಡಿ ದವರು ಹಣ ಮಾಡಿದರು. ಆದರೆ ನಾವು ಇನ್ನೂ ಅದೇ ಸ್ಥಿತಿಯಲ್ಲಿ ಇದ್ದೇವೆ. ಇನ್ನು ಹಾಗೆ ಆಗಬಾರದು’ ಎಂದು ಮಂಗಳೂರು ನೆಲ್ಲಿಕಾರಿನ ವಸಂತಿ ಸಭೆ ಯಲ್ಲಿ ಹೇಳಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X