ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ತಂದೆಯ ಬಂಧನ

ಮೈಸೂರು,ಡಿ.3: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಕಾಮುಕ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಗರದಲ್ಲಿ ನಡೆದಿದೆ.
ಭರತ್ ನಗರದ ನಿವಾಸಿ ಸೈಯದ್ ಆರೀಫ್ ಬಂಧಿತ ಆರೋಪಿ. ಈತ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಲು ಮುಂದಾಗಿದ್ದಾನೆ ಎನ್ನಲಾಗಿದ್ದು, ಈತನಿಂದ ತಪ್ಪಿಸಿಕೊಂಡ ಅಪ್ರಾಪ್ತೆ ತನ್ನ ತಾಯಿಗೆ ವಿಷಯ ತಿಳಿಸುತ್ತಿದ್ದಂತೆ ಕಾಮುಕ ತಂದೆ ಪರಾರಿಯಾಗಿದ್ದ ಎನ್ನಲಾಗಿದೆ.
ಈ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರ್ಯಾಚರಣೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





