ಎಸ್.ಡಿ.ಎಂ.ಮಂಗಳಜ್ಯೋತಿ ಸಮಗ್ರ ಶಾಲೆಗೆ ರಾಷ್ಟ್ರಪ್ರಶಸ್ತಿ
ವಿಕಲಚೇತನರ ಸಬಲೀಕರಣಕ್ಕೆ ಶ್ರಮಿಸಿದ ಅತ್ಯುತ್ತಮ ಸಂಸ್ಥೆ

ಬೆಳ್ತಂಗಡಿ, ಡಿ. 3: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೆಂದ್ರ ಹೆಗ್ಗಡೆ ಅವರು ಅಧ್ಯಕ್ಷರಾಗಿರುವ ಅಂಗವಿಕಲ ರ ಕಲ್ಯಾಣ ಸಂಸ್ಥೆ ಎಸ್.ಡಿ.ಎಂ. ಮಂಗಳಜ್ಯೋತಿ ಸಮಗ್ರ ಶಾಲೆಗೆ ಕೇಂದ್ರ ಸರಕಾರವು ಸಮನ್ವಯ ಶಿಕ್ಷಣದ ಮೂಲಕ ವಿಕಲಚೇತನರ ಸಬಲೀಕರಣಕ್ಕೆ ಶ್ರಮಿಸಿದ ಅತ್ಯುತ್ತಮ ಸಂಸ್ಥೆ ಎಂದು ಗುರುತಿಸಿ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದೆ.
ಪ್ರಶಸ್ತಿಯನ್ನು ದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಶ್ವ ಅಂಗವಿಕಲರ ದಿನದಂದು ನಡೆದ ಸಮಾರಂಭದಲ್ಲಿ ನೀಡಿ ಸಮ್ಮಾನಿಸಿದರು.
ವಿಕಲಚೇತನರ ಅಭ್ಯುದಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತ ಸರಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯದ ವಿಕಲಚೇತನರ ಸಬಲೀಕರಣ ಇಲಾಖೆಯು ವಿಕಲಚೇತನರ ಸಬಲೀಕರಣ ಇಲಾಖೆಯ ಮೂಲಕ ಪ್ರಶಸ್ತಿಯನ್ನು ನೀಡಲಾಗಿದೆ.
ಹೆಗ್ಗಡೆಯವರ ಪರವಾಗಿ ಸಂಸ್ಥೆಯ ಕಾರ್ಯದರ್ಶಿ ಪ್ರೊ. ಎ. ರಾಜೇಂದ್ರ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿದರು. ವೇದಿಕೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯದ ಸಚಿವ ತಾವರ್‌ಚಂದ್ ಗೆಹ್ಲೋಟ್ ಹಾಗೂ ಇನ್ನಿತರ ಕೇಂದ್ರ ಸರಕಾರದ ರಾಜ್ಯ ಸಚಿವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.





