Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ಪುರಸಭೆಗೆ ಅಮ್ಟೂರು ಸೇರ್ಪಡೆಗೆ...

ಬಂಟ್ವಾಳ ಪುರಸಭೆಗೆ ಅಮ್ಟೂರು ಸೇರ್ಪಡೆಗೆ ಗ್ರಾಮಸ್ಥರ ವಿರೋಧ

ವಾರ್ತಾಭಾರತಿವಾರ್ತಾಭಾರತಿ4 Dec 2017 6:41 PM IST
share
ಬಂಟ್ವಾಳ ಪುರಸಭೆಗೆ ಅಮ್ಟೂರು ಸೇರ್ಪಡೆಗೆ ಗ್ರಾಮಸ್ಥರ ವಿರೋಧ

ಬಂಟ್ವಾಳ, ಡಿ. 4: ಪುರಸಭೆಗೆ ತಾಗಿಕೊಂಡಿರುವ ಗ್ರಾಮ ಪಂಚಾಯತ್‌ಗಳ ಆಂಶಿಕ ಭಾಗವನ್ನು ಪುರಸಭೆಗೆ ಸೇರ್ಪಡೆಗೊಳಿಸುವ ವಿಚಾರಕ್ಕೆ ಈಗಾಗಲೇ ಹಲವು ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಇದೀಗ ಗೋಳ್ತಮಜಲು ಗ್ರಾಮ ಪಂಚಾಯತ್ ಕೂಡ ವಿರೋಧ ವ್ಯಕ್ತಪಡಿಸಿದೆ.

ಪಂಚಾಯತ್‌ನ ಭಾಗವನ್ನು ಪುರಸಭೆಗೆ ಸೇರ್ಪಡೆಗೊಳಿಸುವುದಕ್ಕೆ ಆಕ್ಷೇಪವನ್ನೂ ಸಲ್ಲಿಸಿದೆ. ಆದರೂ ಮತ್ತೆ ಅಮ್ಟೂರು ಮತ್ತಿತರ ಪ್ರದೇಶಗಳನ್ನು ಪುರಸಭೆಗೆ ಸೇರ್ಪಡೆಗೊಳಿಸುವ ಕುರಿತು ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ತೀವ್ರ ಪ್ರತಿರೋಧವನ್ನು ವ್ಯಕ್ತಪಡಿಸಲಾಗಿದೆ.

ಈ ಕುರಿತು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ನೇತೃತ್ವದಲ್ಲಿ ಗ್ರಾಪಂ ಸದಸ್ಯರಾದ ಗುರುವಪ್ಪ ಗೌಡ ಮತ್ತು ಮೋನಪ್ಪ ದೇವಸ್ಯ ಒಳಗೊಂಡ ತಂಡ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತು ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಅವರಿಗೆ ಮನವಿ ಸಲ್ಲಿಸಿತು.

ಈಗಿರುವ ಪುರಸಭಾ ವ್ಯಾಪ್ತಿಯನ್ನೇ ಸರಿಯಾಗಿ ನಿರ್ವಹಿಸಲು ಕಷ್ಟಸಾಧ್ಯವಾಗುತ್ತಿರುವ ಪೌರಾಡಳಿತಕ್ಕೆ ತಾಗಿಕೊಂಡಿರುವ ಗ್ರಾಮಗಳನ್ನು ಸೇರ್ಪಡೆಗೊಳಿಸಿ, ನಗರಸಭೆಯನ್ನಾಗಿಸುವ ಅವಶ್ಯಕತೆ ಏನಿದೆ ಎಂದು ದಿನೇಶ್ ಅಮ್ಟೂರು ಪ್ರಶ್ನಿಸಿದ್ದಾರೆ.

ಗ್ರಾಮೀಣ ಭಾಗಗಳಲ್ಲಿ ವಾಸಿಸುವವರ ಆದಾಯ ನಗರವಾಸಿಗಳಿಗೆ ಹೋಲಿಸಿದರೆ ಕಡಿಮೆ. ಅಮ್ಟೂರು ಪರಿಸರದಲ್ಲಿರುವವರಲ್ಲಿ ಬಹುತೇಕ ಮಂದಿ ಬಡವರಾಗಿದ್ದು, ದೈನಂದಿನ ಆದಾಯವನ್ನು ಕಷ್ಟಪಟ್ಟು ದುಡಿಯುತ್ತಿದ್ದಾರೆ.

ಹೀಗಿದ್ದಾಗ ಬಂಟ್ವಾಳದ ಪ್ರಸ್ತಾವಿತ ನಗರಸಭೆಗೆ ಅಮ್ಟೂರು ಪರಿಸರವನ್ನು ಸೇರಿಸಿದರೆ, ನಗರಾಡಳಿತಕ್ಕೆ ಸಂಬಂಧಿಸಿ ತೆರಿಗೆಗಳ ಭಾರವನ್ನು ಹೊರಬೇಕಾಗುತ್ತದೆ. ಈಗಾಗಲೇ ಸಂಕಷ್ಟದಲ್ಲಿರುವ ನಾಗರಿಕರಿಗೆ ಇದೊಂದು ದೊಡ್ಡ ಹೊರೆಯಾಗಲಿದ್ದು, ಗ್ರಾಮ ಪಂಚಾಯತ್ ಆಡಳಿತಕ್ಕೂ ಅನುದಾನವನ್ನು ತರಿಸಲು ಹಾಗೂ ಅಭಿವೃದ್ಧಿಪಡಿಸಲು ಸಾಧ್ಯವಿದೆ. ಅದಕ್ಕೆ ನಗರಸಭೆಯೊಳಗೇ ಇರಬೇಕು ಎಂದೇನಿಲ್ಲ ಎಂಬುದು ಸ್ಥಳೀಯರ ಆಕ್ಷೇಪ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X