ಮಂಗಳೂರು: ಬಿಜೆಪಿ ಯುವಮೋರ್ಚಾ ಧರಣಿ
ಮಂಗಳೂರು, ಡಿ.4: ಮೈಸೂರು ಸಂಸದ ಪ್ರತಾಪ್‌ಸಿಂಹ ಅವರನ್ನು ಬಂಧಿಸಿದ ಸರಕಾರದ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೋಮವಾರ ಜಿಲ್ಲಾ ಎಸ್ಪಿ ಕಚೇರಿ ಮುಂದೆ ಧರಣಿ ನಡೆಯಿತು.
ಯುವಮೋರ್ಚಾ ಅಧ್ಯಕ್ಷ ಹರೀಶ್ ಪೂಂಜಾ, ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲ ಅಧ್ಯಕ್ಷ ಸಂದೀಪ್ ಶೆಟ್ಟಿ, ಉತ್ತರ ಮಂಡಲ ಅಧ್ಯಕ್ಷ ಯಶ್‌ಪಾಲ್, ಮಂಗಳೂರು ಮಂಡಲ ಅಧ್ಯಕ್ಷ ಸುಜಿತ್ ಮಾಡೂರ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಮೂಡುಶೆಡ್ಡೆ ಉಪಸ್ಥಿತರಿದ್ದರು.
Next Story





