ಬ್ಯಾರಿಕೇಡ್ ಹಾಕಿದ್ದೇ ತಪ್ಪು ಎಂದ ಯಡಿಯೂರಪ್ಪ

ಕಲಬುರಗಿ, ಡಿ. 4: ಹುಣಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗೆ ವಾಹನವನ್ನು ಗುದ್ದಿಸಿಲ್ಲ. ಅಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದೆ ತಪ್ಪು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹನುಮ, ದತ್ತ ಜಯಂತಿ ಸೇರಿದಂತೆ ಯಾವುದೇ ಜಯಂತಿಗಳನ್ನು ಆಚರಿಸಲು ಯಾರ ಅಪ್ಪಣೆಯೂ ಬೇಕಿಲ್ಲ. ಬಂಧಿತ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉಗ್ರ ಸ್ವರೂಪದ ಪ್ರತಿಭಟನೆ ನಡೆಸುವಂತೆ ಸೂಚಿಸಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿದ ವೀಡಿಯೊ ವೈರಲ್ ಆಗಿದೆ ಎಂಬುದು ಅರ್ಥಹೀನ. ಇದು ಶುದ್ಧ ಸುಳ್ಳು ಮಾಹಿತಿ. ಅನಗತ್ಯವಾಗಿ ಅಮಿತ್ ಶಾ ಅವರ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಯಡಿಯೂರಪ್ಪ ತಿಳಿಸಿದರು.
Next Story





