Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಪಟ್ಟಾಭಿಷೇಕವನ್ನು ಔರಂಗಝೇಬ್...

ರಾಹುಲ್ ಪಟ್ಟಾಭಿಷೇಕವನ್ನು ಔರಂಗಝೇಬ್ ಪಟ್ಟಾಭಿಷೇಕಕ್ಕೆ ಸಮೀಕರಿಸಿದ ಮೋದಿ

ವಾರ್ತಾಭಾರತಿವಾರ್ತಾಭಾರತಿ4 Dec 2017 7:58 PM IST
share
ರಾಹುಲ್ ಪಟ್ಟಾಭಿಷೇಕವನ್ನು  ಔರಂಗಝೇಬ್ ಪಟ್ಟಾಭಿಷೇಕಕ್ಕೆ ಸಮೀಕರಿಸಿದ ಮೋದಿ

 ಅಹ್ಮದಾಬಾದ್, ಡಿ.4: ಕಾಂಗ್ರೆಸ್ ಪಕ್ಷದೊಳಗಿನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮೊಘಲರ ವಂಶಾಡಳಿತ ಕ್ರಮಕ್ಕೆ ಹೋಲಿಸಿದ ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಕೌಟುಂಬಿಕ ಆಡಳಿತ ಹೊಂದಿರುವ ಪಕ್ಷವೆಂದು ಈಗ ಕಾಂಗ್ರೆಸ್ ಮುಖಂಡರೇ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

  ಧರಮ್‌ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಹಿರಿಯ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಈ ಹಿಂದೆ ನನ್ನ ವಿರುದ್ಧ ಬಹಳಷ್ಟು ಹೇಳಿಕೆ ನೀಡಿದ್ದರು. ಈಗ ಅವರು - ಶಹಜಹಾನ್ ಜಹಾಂಗೀರ್‌ನ ಸ್ಥಾನಕ್ಕೆ ಆಯ್ಕೆಯಾದಾಗ ಅಥವಾ ಔರಂಗಝೇಬ್ ಶಹಜಹಾನ್‌ನ ಸ್ಥಾನಕ್ಕೆ ಆಯ್ಕೆಯಾದಾಗ ಚುನಾವಣೆ ನಡೆದಿತ್ತೇ. ಸಿಂಹಾಸನಕ್ಕೆ ಮಗನೇ ಉತ್ತರಾಧಿಕಾರಿ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ - ಎಂಬ ಹೇಳಿಕೆಯನ್ನು ನೀಡಿದ್ದಾರೆ. ಅಂದರೆ ವಂಶಪಾರಂಪರ್ಯ ಆಡಳಿತವನ್ನು ಕಾಂಗ್ರೆಸ್ ಮುಖಂಡರೇ ಒಪ್ಪಿಕೊಂಡಂತಾಯಿತು . ಔರಂಗಝೇಬ್ ಆಡಳಿತಶೈಲಿಯನ್ನು ಒಪ್ಪಿಕೊಂಡಿರುವ ಕಾಂಗ್ರೆಸ್‌ಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಮೋದಿ ಹೇಳಿದರು. ಕಾಂಗ್ರೆಸ್ ವಿನಾಶದಂಚಿಗೆ ಸಾಗುತ್ತಿದೆ ಎಂದ ಮೋದಿ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಾಗೂ ಇದೀಗ ಜಾಮೀನು ಪಡೆದಿರುವ ವ್ಯಕ್ತಿ ಪಕ್ಷದ ಅಧ್ಯಕ್ಷರಾಗಲು ಹೊರಟಿರುವುದು ಕಾಂಗ್ರೆಸ್‌ನ ಸಂಸ್ಕೃತಿಯನ್ನು ತೋರಿಸುತ್ತಿದೆ ಎಂದು ಟೀಕಿಸಿದರು.

  ರಾಹುಲ್ ಸತತವಾಗಿ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವುದನ್ನು ಉಲ್ಲೇಖಿಸಿದ ಮೋದಿ, ಒಂದು ಕಾಲದಲ್ಲಿ ಕೆಲವರು ತಮ್ಮ ‘ಜಾತ್ಯಾತೀತ’ತೆಯನ್ನು ರುಜುವಾತು ಪಡಿಸಲು ಸ್ಪರ್ಧೆ ನಡೆಸುತ್ತಿದ್ದರು ಎಂದು ಟಾಂಗ್ ನೀಡಿದರು. ಕಾಂಗ್ರೆಸ್‌ನವರು ಕಳೆದ ಹಲವು ವರ್ಷಗಳಿಂದ ಬಿಜೆಪಿ ಮುಸ್ಲಿಂ ವಿರೋಧಿ ಎಂದು ಆರೋಪಿಸುತ್ತಾ ಬಂದರು. ಆದರೆ ಈ ಬಾರಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಒಮ್ಮೆಯೂ ಈ ಆರೋಪವನ್ನು ಮಾಡಿಲ್ಲ. ಅಂದರೆ ತಾವು ಮುಸ್ಲಿಂ ಓಟುಗಳ ಧ್ರುವೀಕರಣಕ್ಕಾಗಿ ಈ ರೀತಿ ಮಾಡುತ್ತಿದ್ದೆವು ಎಂದು ಕಾಂಗ್ರೆಸ್‌ನವರೇ ಒಪ್ಪಿಕೊಂಡಂತಾಗಿದೆ. ಈಗ ಮುಸ್ಲಿಮರಿಗೂ ಕಾಂಗ್ರೆಸ್‌ನ ನಿಜಬಣ್ಣ ತಿಳಿದಿದೆ ಎಂದು ಮೋದಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X