ಮೀನುಗಾರಿಕೆ ದೋಣಿಗಳಿಗೆ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ: ಪ್ರಮೋದ್
ಉಡುಪಿ, ಡಿ.4: ಮೀನುಗಾರಿಕೆ ದೋಣಿಗಳಿಗೆ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ ಯೋಜನೆಯಡಿ 2017-18ನೇ ಸಾಲಿನಲ್ಲಿ 157.80 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ ಸಾಲಿನಲ್ಲಿ ಇದುವರೆಗೂ ಒಟ್ಟು 118.35 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಕಳೆದ ಅಕ್ಟೋಬರ್ ಅಂತ್ಯದವರೆಗೆ ಮೀನುಗಾರಿಕೆ ದೋಣಿಗಳು ಬಳಸಿದ 93,890 ಕಿ.ಲೀಟರ್ ಡೀಸೆಲ್ ಮೇಲಿನ ರಾಜ್ಯ ಮಾರಾಟ ಕರದ ಮೊತ್ತ 98.56 ಕೋಟಿ ರೂ. ಗಳನ್ನು ದೋಣಿ ಮಾಲಕರ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ. ನವೆಂಬರ್ ತಿಂಗಳ ಸಹಾಯಧನವನ್ನು ಶೀಘ್ರವಾಗಿ ದೋಣಿ ಮಾಲಕರಿಗೆ ಪಾವತಿಸಲು ಕ್ರಮ ವಹಿಸಲಾಗುತ್ತಿದೆ ಪ್ರಮೋದ್ ಮಧ್ವರಾ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





