Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಲಿನ್ಯನಿಯಂತ್ರಿಸಲು ವಿಫಲ: ಆಪ್...

ಮಾಲಿನ್ಯನಿಯಂತ್ರಿಸಲು ವಿಫಲ: ಆಪ್ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹಸಿರು ಪೀಠ

ವಾರ್ತಾಭಾರತಿವಾರ್ತಾಭಾರತಿ4 Dec 2017 9:10 PM IST
share
ಮಾಲಿನ್ಯನಿಯಂತ್ರಿಸಲು ವಿಫಲ: ಆಪ್ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹಸಿರು ಪೀಠ

ಹೊಸದಿಲ್ಲಿ, ಡಿ.4: ರಾಜ್ಯದ ಉಸಿರುಗಟ್ಟಿಸಿರುವ ವಾಯುಮಾಲಿನ್ಯವನ್ನು ತಡೆಯಲು ಸಮಗ್ರ ಯೋಜನೆಯನ್ನು ರೂಪಿಸದ ದಿಲ್ಲಿ ಸರಕಾರದ ವಿರುದ್ಧ ಹರಿಹಾಯ್ದ ರಾಷ್ಟ್ರೀಯ ಹಸಿರುಪೀಠ ಕೆಟ್ಟ ಹವಾಗುಣದ ಹೊರತಾಗಿಯೂ ಭಾರತ-ಶ್ರೀಲಂಕಾ ಕ್ರಿಕೆಟ್ ಪಂದ್ಯಾಟವನ್ನು ರಾಜಧಾನಿಯಲ್ಲಿ ಆಯೋಜಿಸಿದ ಮಂಡಳಿಯನ್ನೂ ತರಾಟೆಗೆ ತೆಗೆದುಕೊಂಡಿದೆ.

ತನ್ನ ಆದೇಶದ ಹೊರತಾಗಿಯೂ ವಾಯುಮಾಲಿನ್ಯದ ಬಗ್ಗೆ ವರದಿಯನ್ನು ನೀಡಲು ವಿಫಲವಾದ ಆಪ್ ಸರಕಾರದ ವಿರುದ್ಧ ಎನ್‌ಜಿಟಿ ಮುಖ್ಯಸ್ಥ ನ್ಯಾಯಾಧೀಶ ಸ್ವತಂತ್ರ ಕುಮಾರ್ ನೇತೃತ್ವದ ಪೀಠವು ಆಕ್ರೋಶ ವ್ಯಕ್ತಪಡಿಸಿದೆ.

ಪರಿಸರ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿಗಳು ಇತ್ತೀಚೆಗಷ್ಟೇ ಬದಲಾಗಿರುವ ಕಾರಣ ಮಾಲಿನ್ಯ ತಡೆಯಲು ಯೋಜನೆಗಳ ವರದಿಯನ್ನು ನೀಡಲು ಇನ್ನಷ್ಟು ಕಾಲಾವಕಾಶದ ಅಗತ್ಯವಿದೆ ಎಂದು ದಿಲ್ಲಿ ಸರಕಾರ ತಿಳಿಸಿದೆ. ಆದರೆ 48 ಗಂಟೆಗಳ ಒಳಗೆ ವರದಿಯನ್ನು ನೀಡುವಂತೆ ಪೀಠ ಸರಕಾರಕ್ಕೆ ಸೂಚಿಸಿದೆ.

ರಾಜ್ಯದಲ್ಲಿ ಮಾಲಿನ್ಯ ಮಟ್ಟವು ಅಪಾಯಕಾರಿ ಹಂತವನ್ನು ತಲುಪಿದ್ದರೂ ಆಪ್ ಸರಕಾರ ಮಾತ್ರ ನಿರ್ಲಕ್ಷ್ಯ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಪೀಠ ಆರೋಪಿಸಿದೆ. ತೀವ್ರ ಉಸಿರುಗಟ್ಟಿಸುವ ವಾತಾವರಣದಿಂದಾಗಿ ಅಡಚಣೆಗೀಡಾದ ಭಾರತ-ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯವನ್ನು ದಿಲ್ಲಿಯಲ್ಲಿ ಆಯೋಜಿಸಿದ ವಿರುದ್ಧವೂ ಪೀಠವು ಕಿಡಿಕಾರಿದೆ. ಶ್ರೀಲಂಕಾ ತಂಡವು ಕಳಪೆ ವಾಯುಗುಣಮಟ್ಟದ ಬಗ್ಗೆ ದೂರು ನೀಡಿದ ಕಾರಣ ಭಾರತವು ತನ್ನ ಇನ್ನಿಂಗ್ಸನ್ನು ಘೋಷಿಸಬೇಕಾಗಿ ಬಂದಿತ್ತು.

ಈ ವಾರ ವಾಯುಮಾಲಿನ್ಯವು ಅತ್ಯಂತ ಹೆಚ್ಚಾಗಿರಲಿದೆ ಎಂದು ಪ್ರತಿಯೊಂದು ಪತ್ರಿಕೆಯೂ ಮುಖ್ಯಪುಟದಲ್ಲಿ ವರದಿ ಮಾಡಿದೆ. ಆದರೂ ನೀವು ಕ್ರಮವನ್ನು ಕೈಗೊಂಡಿಲ್ಲ. ಇನ್ನು ಆಟಗಾರರೂ ಕೂಡಾ ಮಾಸ್ಕ್ ಧರಿಸಿಕೊಂಡು ಆಡಿದ್ದಾರೆ. ಇಂತಹ ಕೆಟ್ಟ ವಾತಾವರಣದಲ್ಲಿ ನೀವು ಪಂದ್ಯವನ್ನು ಆಯೋಜಿಸಬಾರದಿತ್ತು. ದಿಲ್ಲಿಯ ಜನರು ಈ ಕಷ್ಟವನ್ನು ಅನುಭವಿಸಬೇಕೇ? ಎಂದು ಪೀಠವು ಸರಕಾರವನ್ನು ಪ್ರಶ್ನಿಸಿದೆ.

ಸಮ-ಬೆಸ ಕಾರು ಸಂಚಾರ ವ್ಯವಸ್ಥೆಯನ್ನು ಪ್ರತಿಪಾದಿಸುವ ನೀವು ದ್ವಿಚಕ್ರ ವಾಹನಗಳನ್ನು ಇದರಿಂದ ಹೊರಗಿಡಬೇಕು ಎಂದು ಹೇಳುತ್ತೀರಿ. ಆದರೆ 60 ಲಕ್ಷ ದ್ವಿಚಕ್ರ ವಾಹಗಳಿಂದಲೇ ಅತೀಹೆಚ್ಚು ವಾಯುಮಾಲಿನ್ಯ ಸಂಭವಿಸುತ್ತಿದೆ ಎಂಬುದು ನಿಮ್ಮ ತಲೆಗೆ ಯಾಕೆ ಹೋಗುತ್ತಿಲ್ಲ ಎಂದು ಪೀಠವು ಪ್ರಶ್ನಿಸಿದೆ. ನಗರದ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು 4000 ಬಸ್‌ಗಳನ್ನು ಪರಿಚಯಿಸುವುದಾಗಿ ಮೂರು ವರ್ಷಗಳ ಹಿಂದೆ ತಿಳಿಸಿದ್ದೀರಿ. ಆದರೆ ಕೇವಲ ಒಂದು ಹೊಸ ಬಸ್ ಕೂಡಾ ಇನ್ನೂ ರಸ್ತೆಗಿಳಿದಿಲ್ಲ ಎಂದು ಪೀಠ ಕಿಡಿಕಾರಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X