ಪ್ರತಾಪ್ ಸಿಂಹಗೆ ಸಭ್ಯತೆ ಇಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು, ಡಿ. 4: ಸಂಸದ ಪ್ರತಾಪ್ ಸಿಂಹ ಅವರಿಗೆ ಸಭ್ಯತೆ, ಘನತೆ ಯಾವುದು ಇಲ್ಲ. ಇಂತಹವರ ಮಾತಿಗೆ ಏನು ಉತ್ತರ ಕೊಡುವುದು? ಕೀಳುಮಟ್ಟದ ಹೇಳಿಕೆಗೆ ತಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದನ್ನು ಜನತೆ ಗಮನಿಸುತ್ತಿದ್ದು, ಸೂಕ್ತ ಸಂದರ್ಭದಲ್ಲಿ ಅವರೇ ಉತ್ತರ ಕೊಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದ ಮೇಲೆ ಬಿಜೆಪಿ ಮುಖಂಡರಿಗೆ ಪ್ರೀತಿ ಜಾಸ್ತಿ. ಹೀಗಾಗಿ ನಮ್ಮ ಕುಟುಂಬದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಲೇವಡಿ ಮಾಡಿದರು.
ಈ ಹಿಂದೆ ಸಂಸದೆ ಶೋಭಾ ಕರಂದ್ಲಾಜೆ ಅವರು ನನ್ನ ಪತ್ನಿಯ ಬಗ್ಗೆ ಮಾತನಾಡುತ್ತಿದ್ದರು. ಇದೀಗ ಮತ್ತೊರ್ವ ಸಂಸದ ಪ್ರತಾಪ ಸಿಂಹ ನನ್ನ ತಂದೆಯವರ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಈ ಬಗ್ಗೆ ತಾವು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಅದಕ್ಕೆ ಜನತೆ ತೀರ್ಮಾನ ಮಾಡಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Next Story





