ಮಹಿಳಾ ಪೊಲೀಸ್ ಸಿಬ್ಬಂದಿಗೆ ಕಿರುಕುಳ: ಇಬ್ಬರ ಬಂಧನ

ಬೆಂಗಳೂರು, ಡಿ.5: ಮದ್ಯದ ಅಮಲಿನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯ ಮೈಕೈ ಮುಟ್ಟಿ ಕಿರುಕುಳ ನೀಡಿರುವ ಆರೋಪದ ಮೇಲೆ ಇಬ್ಬರು ಯುವಕರನ್ನು ನಗರದ ವೈಯ್ಯಿಲಿಕಾವಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ನಗರದ ಮತ್ತಿಕೆರೆ ನಿವಾಸಿಗಳಾದ ರೋಹಿತ್, ವೈಭವ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ವಿವರ: ಸೋಮವಾರ ತಡರಾತ್ರಿ 1 ಗಂಟೆ ಸುಮಾರಿಗೆ ನಗರದ ವಿನಾಯಕ ವೃತ್ತದ ಬಳಿ ಮದ್ಯದ ಸೇವನೆ ಮಾಡಿದ ಆರೋಪಿಗಳಿಬ್ಬರು, ಪಿಂಕ್ ಹೊಯ್ಸಳ ವಾಹನದಲ್ಲಿದ್ದ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಅವರ ಮೈಕೈ ಮುಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬಗ್ಗೆ ಪೊಲೀಸ್ ಪೇದೆ ಮಂಜಣ್ಣ ಎಂಬುವರು ಆರೋಪಿಗಳಿಬ್ಬರಿಗೆ ಎಚ್ಚರಿಕೆ ನೀಡಿದರೂ, ಅವರಿಗೂ ಬೆದರಿಕೆ ಹಾಕಿದ್ದಾರೆ. ಬಳಿಕ ಈ ಕುರಿತು ಮಂಜಣ್ಣ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Next Story





