Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಗತಿಕ ಉದ್ಯೋಗಪತಿಗಳ ಸಮ್ಮೇಳನದ ನಂತರ...

ಜಾಗತಿಕ ಉದ್ಯೋಗಪತಿಗಳ ಸಮ್ಮೇಳನದ ನಂತರ ಮತ್ತೆ ಹೈದರಾಬಾದ್‌ನಲ್ಲಿ ಭಿಕ್ಷುಕರ ಹಾವಳಿ

ವಾರ್ತಾಭಾರತಿವಾರ್ತಾಭಾರತಿ5 Dec 2017 8:01 PM IST
share
ಜಾಗತಿಕ ಉದ್ಯೋಗಪತಿಗಳ ಸಮ್ಮೇಳನದ ನಂತರ ಮತ್ತೆ ಹೈದರಾಬಾದ್‌ನಲ್ಲಿ ಭಿಕ್ಷುಕರ ಹಾವಳಿ

ಹೈದರಾಬಾದ್, ಡಿ.5: ಹೈದರಾಬಾದ್‌ನಲ್ಲಿ ನಡೆದ ಜಾಗತಿಕ ಉದ್ಯೋಗಪತಿಗಳ ಸಮ್ಮೇಳನ ಮುಗಿಯುತ್ತಿದ್ದಂತೆ ನಗರದಾದ್ಯಂತ ಮತ್ತೆ ಭಿಕ್ಷುಕರು ಕಾಣಿಸಿಕೊಳ್ಳಲು ಆರಂಭಿಸಿದ್ದಾರೆ. ಭಿಕ್ಷುಕರು ಮತ್ತೆ ನಗರದಲ್ಲಿ ಕಾಣಿಸಿಕೊಂಡಿರುವುದರಿಂದ ಅಂತಾರಾಷ್ಟ್ರೀಯ ಸಮ್ಮೇಳನದ ನಂತರವೂ ನಗರವನ್ನು ಭಿಕ್ಷುಕರಿಂದ ಮುಕ್ತವಾಗಿರುವಂತೆ ನೋಡಿಕೊಳ್ಳಲಾಗುವುದು ಎಂಬ ಅಧಿಕಾರಿಗಳ ಮಾತನ್ನು ನಂಬಿದ್ದ ಸ್ಥಳೀಯರಿಗೆ ಭ್ರಮನಿರಸನವಾಗಿದೆ.

ಅಕ್ಟೋಬರ್ 20ರಂದು ತೆಲಂಗಾಣ ರಾಜ್ಯ ಕಾರಾಗೃಹ ಇಲಾಖೆಯು ಆಪರೇಶನ್ ಭಿಕ್ಷುಕರು ಅಭಿಯಾನವನ್ನು ಆರಂಭಿಸಿದ ನಂತರ ಹೈದರಾಬಾದ್ ನಗರವನ್ನು ಭಿಕ್ಷುಕ ಮುಕ್ತಗೊಳಿಸುವ ಬಗ್ಗೆ ಭರವಸೆ ಮೂಡಿತ್ತು. ಸಮ್ಮೇಳನ ಆರಂಭಕ್ಕೆ ಹತ್ತು ದಿನಗಳು ಬಾಕಿಯಿರುವಾಗ ಗ್ರೇಟರ್ ಹೈದರಾಬಾದ್ ನಗರಪಾಲಿಕೆ ಮತ್ತು ಪೊಲೀಸ್ ಇಲಾಖೆ ಕೂಡಾ ಈ ಅಭಿಯಾನದೊಂದಿಗೆ ಕೈಜೋಡಿಸಿದ್ದವು.

ಈ ಕಾರ್ಯಾಚರಣೆಯು ಬಹಳ ಜನಪ್ರಿಯತೆಯನ್ನು ಪಡೆದುಕೊಂಡಿತ್ತು ಮತ್ತು ನಗರವನ್ನು ಭಿಕ್ಷುಕ ಮುಕ್ತಗೊಳಿಸುವಲ್ಲಿ ಯಶಸ್ವಿಯೂ ಆಗಿತ್ತು. 300ಕ್ಕೂ ಅಧಿಕ ಭಿಕ್ಷುಕರನ್ನು ಆನಂದ ಆಶ್ರಮ ಮತ್ತು ಇತರ ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲಾಗಿತ್ತು. ಅಂತಾರಾಷ್ಟ್ರೀಯ ಸಮ್ಮೇಳನ ನಡೆಯುವ ವೇಳೆ ನಗರವನ್ನು ಭಿಕ್ಷುಕ ಮುಕ್ತ ವಲಯವಾಗಿ ಮಾರ್ಪಡಿಸಲಾಗಿತ್ತು.

ಸಮ್ಮೇಳನದ ನಂತರವೂ ಅಧಿಕಾರಿಗಳು ಭಿಕ್ಷುಕರ ವಿರುದ್ಧ ಕಾರ್ಯಾಚರಣೆ ಮುಂದುವರಿಸುತ್ತಾರೆ ಎಂದು ಸ್ಥಳೀಯರು ಭಾವಿಸಿದ್ದರು. ಆದರೆ ಡಿಸೆಂಬರ್ 1ರ ನಂತರ ಮತ್ತೆ ಆಪರೇಶನ್ ಭಿಕ್ಷುಕ ವನ್ನು ಪುನರ್ ಆರಂಭಿಸುವುದರ ಬಗ್ಗೆ ಅಧಿಕಾರಿಗಳು ತಿಳಿಸಿದ್ದರೂ ಬಹುತೇಕ ಎಲ್ಲಾ ಭಿಕ್ಷುಕರು ಮರಳಿ ಬೀದಿಗಿಳಿದಿದ್ದಾರೆ.

ಭಿಕ್ಷುಕರು ಮುಖ್ಯವಾಗಿ ಧಾರ್ಮಿಕ ಪ್ರದೇಶಗಳು ಮತ್ತು ಪ್ರಮುಖ ಜಂಕ್ಷನ್‌ಗಳಲ್ಲಿ ವಾಪಸ್ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ರವಿವಾರದಿಂದ ಭಿಕ್ಷುಕರು ನಗರದ ಪ್ರಮುಖ ಪ್ರದೇಶಗಳಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಸಮ್ಮೇಳನದ ಹಿನ್ನೆಲೆಯಲ್ಲಿ ನಗರವನ್ನು ಭಿಕ್ಷುಕ ಮುಕ್ತಗೊಳಿಸಿದ್ದ ಅಧಿಕಾರಿಗಳು ಈಗ ಆ ಬಗ್ಗೆ ಯಾವುದೇ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

 ಈ ಕುರಿತು ಮಾತನಾಡಿರುವ ಅಧಿಕಾರಿಗಳು, ಮತ್ತೆ ಕಾರ್ಯಾಚರಣೆ ನಡೆಸಿ ನಗರವನ್ನು ಭಿಕ್ಷುಕ ಮುಕ್ತ ಗೊಳಿಸುವುದಾಗಿ ತಿಳಿಸಿದ್ದಾರೆ. ಡಿಸೆಂಬರ್ 25ರ ನಂತರ ನಗರದಲ್ಲಿ ಭಿಕ್ಷುಕರಿರುವ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಗಳಿಗೆ ರೂ. 500 ಬಹಮಾನ ನೀಡುವ ಭರವಸೆಗೆ ನಾವು ಈಗಲೂ ಬದ್ಧರಾಗಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X