Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.6: ಭಟ್ಕಳಕ್ಕೆ ಸಿಎಂ ಸಿದ್ದರಾಮಯ್ಯ...

ಡಿ.6: ಭಟ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೆಟಿ; 1200 ಕೋ.ರೂ. ಕಾಮಗಾರಿ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ5 Dec 2017 8:04 PM IST
share
ಡಿ.6: ಭಟ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೆಟಿ; 1200 ಕೋ.ರೂ. ಕಾಮಗಾರಿ ಶಂಕುಸ್ಥಾಪನೆ

ಭಟ್ಕಳ, ಡಿ. 5: ಮುಖ್ಯಂತ್ರಿ ಸಿದ್ದರಾಮಯ್ಯ ಅವರು ಡಿ.6 ರಂದು ಭಟ್ಕಳಕ್ಕೆ ಆಗಮಿಸುತ್ತಿದ್ದು, 1200ಕೋ. ರೂ. ವೆಚ್ಚದ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದು 131 ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಮಾಂಕಾಳ್ ವೈದ್ಯ ಹೇಳಿದರು.

ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತಕನ್ನಡ ಜಿಲ್ಲಾ ಭೇಟಿ ಕಾರ್ಯಕ್ರಮದ ವಿವರಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸುತ್ತ ಈ ವಿಷಯ ತಿಳಿಸಿದರು.

ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಹರಿದು ಬಂದ ಅನುದಾನದ ಲೆಕ್ಕ ಮಾಡುವ ಅವಕಾಶವನ್ನು ವಿರೋಧಿಗಳು ಮಾಡಿಕೊಟ್ಟಿದ್ದು, ಲೆಕ್ಕದ ಪ್ರಕಾರ 1200ಕೋ. ರೂ. ಅಧಿಕ ಅನುದಾನ ಕ್ಷೇತ್ರಕ್ಕೆ ಸಿಕ್ಕಿರುವುದು ತೃಪ್ತಿ ತಂದಿದೆ ಎಂದು ಶಾಸಕರು, ಕ್ಷೇತ್ರಕ್ಕೆ ಲಭಿಸಿರುವ ಅನುದಾನದಲ್ಲಿ  100ಕೋ. ಅಧಿಕ ಮೊತ್ತದ ವಸತಿ ಯೋಜನೆಗಳಿವೆ. ಭಟ್ಕಳ ಹೊನ್ನಾವರದ 1000 ಅನಾರೋಗ್ಯಪೀಡಿತರಿಗೆ ಸರಿಸುಮಾರು  3ಕೋ. ರೂ. ನೆರವು ಲಭಿಸಿದೆ. ಕೆಲವೇ ದಿನಗಳಲ್ಲಿ ಅನುದಾನದ ಮೊತ್ತ  1500 ಕೋಟಿ ತಲುಪುವ ನಿರೀಕ್ಷೆ ಇದೆ. ಇದೆಲ್ಲದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪೂರ್ಣ ಸಹಕಾರವೇ ಕಾರಣವಾಗಿದೆ. ನನ್ನ ಯಾವುದೇ ಮನವಿ ಪತ್ರವನ್ನೂ ಅವರು ತಿರಸ್ಕರಿಸದೇ ಜನರ ಬೇಡಿಕೆಗಳಿಗೆ ಸ್ಪಂದನೆ ನೀಡಿದ್ದಾರೆ.

ಡಿ.6ರಂದು ನಮ್ಮೆಲ್ಲರ ಒತ್ತಾಸೆಯ ಮೇರೆಗೆ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಲಿದ್ದು, ಭಟ್ಕಳದಲ್ಲಿ ಬೆಳಗ್ಗೆ 11 ಗಂಟೆಗೆ 131 ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ನೂರಾರು ಕಾಮಗಾರಿಗಳಿಗೆ ಶಂಕುಸ್ಥಾಪನೆಯ ಕೆಲಸವನ್ನೂ ಅವರೇ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿಗಳ ಜೊತೆಗೆ ಸಚಿವರಾದ ಆರ್.ವಿ.ದೇಶಪಾಂಡೆ, ಮಹಾದೇವಪ್ಪ, ಹೆಚ್.ಕೆ.ಪಾಟೀಲ್ ಸೇರಿದಂತೆ 10 ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 1200ಕೋ. ರೂ. ಅನುದಾನದ ಚಿತ್ರಣ ಭಟ್ಕಳ ಹೊನ್ನಾವರದ ಜನತೆಗೆ ಸಿಗಲಿದೆ. ಮುಂದಿನ 5-6 ತಿಂಗಳ ಒಳಗೆ ಶಂಕುಸ್ಥಾಪನೆಗೊಂಡ 75% ಕಾಮಗಾರಿಗಳು ಮುಗಿಯುವ ವಿಶ್ವಾಸ ಇದೆ ಎಂದು ವಿವರಿಸಿದರು.

ನಾನು ಶಾಸಕನಾಗುವ ಮೊದಲು ಜನರಿಗೆ ನನ್ನ ಕೆಲಸ ಕಾರ್ಯಗಳ ಬಗ್ಗೆ ಹೆಚ್ಚಿಗೆ ಗೊತ್ತಿರಲಿಲ್ಲ. ಶಾಸಕನಾದ ನಂತರ ನಾನು ಏನು ಕೆಲಸ ಮಾಡಿದ್ದೇನೆ ಎನ್ನುವುದು ಕ್ಷೇತ್ರದ ಜನರ ಅರಿವಿಗೆ ಬಂದಿದೆ ಎಂದು ಕೊಳ್ಳುತ್ತೇನೆ ಎಂದರು.

ಡಿ.6ರಂದು ಭಟ್ಕಳದಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮ ಸರಕಾರಿ ಕಾರ್ಯಕ್ರಮವಾಗಿದ್ದು, ಪಕ್ಷದ ಕಾರ್ಯಕ್ರಮವಲ್ಲ. ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರೂ ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆ ಇದೆ. ಜನರು ಪಕ್ಷಭೇದ ಮರೆತು ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ವಿನಂತಿಸಿಕೊಂಡರು.

ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ತಾಪಂ ಅಧ್ಯಕ್ಷ ಈಶ್ವರ ನಾಯ್ಕ, ಪುರಸಭಾ ಅಧ್ಯಕ್ಷ ಸಾದೀಕ್ ಮಟ್ಟಾ, ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಅಬ್ದುರ್ರಹೀಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ್ ನಾಯ್ಕ, ತಾಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ವಿಷ್ಣು ದೇವಡಿಗ, ಎಪಿಎಮ್‌ಸಿ ಅಧ್ಯಕ್ಷ ಗೋಪಾಲ ನಾಯ್ಕ, ಶಿರಾಲಿ ಗ್ರಾಪಂ ಅಧ್ಯಕ್ಷ ವೆಂಕಟೇಶ ನಾಯ್ಕ, ಪುರಸಭಾ ಉಪಾಧ್ಯಕ್ಷ ಕೆ.ಎಮ್.ಆಶ್ಪಾಕ್, ತಾಪಂ ಸದಸ್ಯ ಮಹಾಬಲೇಶ್ವರ ನಾಯ್ಕ, ಸುರೇಶ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಭೀಮಣ್ಣ ನಾಯ್ಕ ಪರ ಮಂಕಾಳ್ ಒಲವು

ಮುಂಬರುವ ಚುನಾವಣೆಯಲ್ಲಿ ಶಿರಸಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಯ್ಕರೇ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮಾಂಕಾಳು ವೈದ್ಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಹೊರ ಹಾಕಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯಲ್ಲಿ ಒಂದು ಕಾರ್ಯಕ್ರಮವನ್ನು ಹಾಕಿಕೊಳ್ಳುವ ಯೋಜನೆ ರೂಪಿಸಿಕೊಂಡಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕಿ ಶಾರದಾ ಶೆಟ್ಟಿ, ಸತೀಶ ಸೈಲ್, ಶಿವರಾಮ ಹೆಬ್ಬಾರ ನಾವೆಲ್ಲರೂ ಶಾಸಕರು ಸೇರಿ ನಮಗೆ ಪ್ರತ್ಯೇಕವಾದ ಕಾರ್ಯಕ್ರಮ ಬೇಕು ಎಂದು ಮನವಿ ಮಾಡಿಕೊಂಡ ಕಾರಣ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಶಿರಸಿಯ ಮುಂದಿನ ಕ್ಯಾಂಡಿಡೇಟ್ ಆಗಿರುವ ಭೀಮಣ್ಣ ನಾಯ್ಕರ ವಿನಂತಿಗೂ ಅವರು ಕಿವಿಗೊಟ್ಟಿದ್ದಾರೆ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X