ಸಾಲಬಾಧೆ: ಗೃಹಿಣಿ ಆತ್ಮಹತ್ಯೆ

ಮಂಡ್ಯ, ಡಿ.5: ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ಸಾಲಬಾಧೆಯಿಂದ ಗೃಹಿಣಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಗುತ್ತಿಗೆದಾರ ರಮೇಶ್ ಎಂಬವರ ಪತ್ನಿ ಲೋಲಾಕ್ಷಿ(32) ಆತ್ಮಹತ್ಯೆ ಮಾಡಿಕೊಂಡಿದ್ದು, ಅವರು ಚೀಟಿ ವ್ಯವಹಾರ ನಡೆಸುತ್ತಿದ್ದು, ಸಾಲದ ಸುಳಿಗೆ ಸಿಲುಕಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡರೆನ್ನಲಾಗಿದೆ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





