Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ನಮಗೆ ದ್ವೇಷ ಬೇಡ, ಸಾಮರಸ್ಯ...

ಭಟ್ಕಳ: ನಮಗೆ ದ್ವೇಷ ಬೇಡ, ಸಾಮರಸ್ಯ ಬೇಕಾಗಿದೆ- ವೀರೇಂದ್ರ ಶಾನಭಾಗ

ವಾರ್ತಾಭಾರತಿವಾರ್ತಾಭಾರತಿ5 Dec 2017 10:40 PM IST
share
ಭಟ್ಕಳ: ನಮಗೆ ದ್ವೇಷ ಬೇಡ, ಸಾಮರಸ್ಯ ಬೇಕಾಗಿದೆ- ವೀರೇಂದ್ರ ಶಾನಭಾಗ

ಭಟ್ಕಳ, ಡಿ. 5: ನಮ್ಮಲ್ಲಿ ದಿನೆ ದಿನೆ ಅಶಾಂತಿ ವಾತವರಣ ಸೃಷ್ಟಿಯಾಗುತ್ತಿದ್ದು, ಕ್ಷುಲ್ಲಕ ಕಾರಣಗಳಿಗಾಗಿ ಪರಪಸ್ಪರ ಹೊಡೆಡಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ನಮಗೆ ದ್ವೇಷ ಬೇಡ ಶಾಂತಿ ಬೇಕು ಎಂದು ಪ್ರತಿಷ್ಟಿತ ಭಟ್ಕಳ ಎಜ್ಯಕೇಶನ್ ಟ್ರಸ್ಟ್ ನ ನ್ಯೂ ಇಂಗ್ಲಿಷ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ವಿ.ಶಾನಭಾಗ ಹೇಳಿದರು.

ಅವರು ಭಟ್ಕಳ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ 'ಪ್ರವಾದಿ ಮುಹಮ್ಮದ್(ಸ.ಅ.) ಮಾನವತೆಯ ವಕ್ತಾರ' ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಸ್ಪರರ ಹೃದಯಗಳು ಬೆಸೆಯುವಂತಹ ಎಲ್ಲರನ್ನೂ ಅರ್ಥ ಮಾಡಿಕೊಳ್ಳುವ ಸಮಾಜ ಉತ್ತಮ ಸಮಾಜ ಆಗಬಲ್ಲದು ರಾಜಕೀಯ ಕಾರಣಗಳೇ ನಮ್ಮಲ್ಲಿ ಅಶಾಂತಿಯ ನ್ನುಂಟು ಮಾಡುತ್ತಿದ್ದು ವಿದ್ಯಾರ್ಥಿಗಳು ಇಂತಹ ವಿಚಾರಗಳಿಂದ ದೂರವಿರಬೇಕೆಂದು ಕರೆ ನೀಡಿದರು.

ಉಪನ್ಯಾಸ ನೀಡಿದ ಮಂಗಳೂರು ಶಾಂತಿ ಪ್ರಕಾಶನ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ನಮ್ಮ ದೇಹದಲ್ಲಿರುವ ಎಲ್ಲ ಅಂಗಗಳು ಒಂದಕ್ಕೊಂದು ಪರಸ್ಪರ ಸಹಕರಿಸುತ್ತಿವೆ, ಸಮಾಜದ ಎಲ್ಲ ವರ್ಗಗಳು ಪರಸ್ಪರರನ್ನು ಅರಿತು ಸಹಕಾರದಿಂದ ಬದುಕಬೇಕು. ಸಹಕಾರವೇ ಪ್ರಕೃತಿಯ ನಿಯಮವಾಗಿದೆ. ನಮ್ಮಲ್ಲಿರುವ ನಕರಾತ್ಮಕ ಗುಣಗಳ ದೂರಮಾಡಬೇಕು. ಪರಸ್ಪರರನ್ನು ಸಂಶಯ ದೃಷ್ಟಿಕೋನದಿಂದ ನೋಡದೆ ಸಮಾಜದ ಆರೋಗ್ಯವನ್ನು ಕಾಪಾಡಿಕೊಂಡು ಹೋಗಬೇಕು ಎಂದ ಅವರು ಆಧುನಿಕ ಜಗತ್ತಿನ ಘೋಷಣೆ ಮಾನವೀಯತೆಯಾಗಬೇಕು ಎಂದರು. ಪ್ರವಾದಿ ಮುಹಮ್ಮದ್‌ ತಮ್ಮ ಜೀವಿತಾವಧಿಯಲ್ಲಿ ಯಾರನ್ನೂ ದ್ವೇಷಸಲಿಲ್ಲ. ತಮ್ಮ ಶತ್ರುಗಳನ್ನೂ ಅತ್ಯಂತ ಹೆಚ್ಚು ಪ್ರೀತಿಸುತ್ತಿದ್ದರು ಮಾನವೀಯ ಮೌಲ್ಯಗಳೇ ಅವರ ಬದುಕಿನ ಗುರಿಯಾಗಿದ್ದವು ಎಂದರು.

ಇತಿಹಾಸ ಉಪನ್ಯಾಸಕಿ ಶಾಮಲಾ ಕಾಮತ್ ಮಾತನಾಡಿ, ಪ್ರವಾದಿ ಮುಹಮ್ಮದ್ ರ ಜೀವನ, ಅವರು ನಡೆದುಬಂದ ದಾರಿ ಬಗ್ಗೆ ಬೆಳಕು ಚೆಲ್ಲಿದರು. ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ ಪ್ರಸ್ತಾವಿಕವಾಗಿ ಮಾತನಾಡಿ ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮುಜಾಹಿದ್ ಮುಸ್ತಫಾ, ಜಿಲ್ಲಾ ಸಂಚಾಲಕ ತಲ್ಹಾ ಸಿದ್ದಿಬಾಪ, ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಉಪಾಧ್ಯಕ್ಷ ಸೈಯ್ಯದ್ ಅಶ್ರಫ್ ಬರ್ಮಾವರ್ ವೇದಿಕೆಯಲ್ಲಿ ಉಪಸ್ಥಿತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X