ಇಬ್ಬರು ಮಹನೀಯರ ಹೆಸರಿನಲ್ಲಿ ಭವನಗಳ ನಿರ್ಮಾಣಕ್ಕೆ ಆಗ್ರಹ
ಕೃಷ್ಣರಾಜಪೇಟೆ, ಡಿ. 5: ನಗರದ ಪುರಸಭೆ ವ್ಯಾಪ್ತಿಯ ಟಿಬಿ ಬಡಾವಣೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಬಾಬು ಜಗಜೀವನ್‌ರಾಂ ಭವನಗಳ ನಿರ್ಮಾಣಕ್ಕೆ ಜಿಲ್ಲಾಡಳಿತವು ಅನುವು ಮಾಡಿಕೊಡುವಂತೆ ಶಾಸಕ ನಾರಾಯಣಗೌಡ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಪುರಸಭೆಯ ವಶದಲ್ಲಿರುವ ಟಿಬಿ ಬಡಾವಣೆಯಲ್ಲಿನ ನಿವೇಶನಗಳ ಪೈಕಿ 100್ಡ100 ಅಳತೆಯ ಎರಡು ನಿವೇಶನಗಳನ್ನು ಇಬ್ಬರು ಮಹನೀಯರ ಹೆಸರಿನಲ್ಲಿ ಭವನಗಳನ್ನು ನಿರ್ಮಿಸಲು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಂಡು ಅಂಬೇಡ್ಕರ್‌ಭವನ ಹಾಗೂ ಬಾಬು ಜಗಜೀವನ್‌ರಾಂ ಭವನಕ್ಕೆ ಸೇರಿದ ನಿವೇಶನಗಳೆಂದು ಎರಡು ವರ್ಷಗಳ ಹಿಂದೆಯೇ ನಾಮಫಲಕವನ್ನು ಹಾಕಲಾಗಿದೆ. ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆ ಪುರಸಭೆಯ ಸದಸ್ಯರ ನಿರ್ಲಕ್ಷ್ಯದಿಂದಾಗಿ ಈವರೆಗೆ ನಿವೇಶನಗಳನ್ನು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ ಮಾಡಿ ಭವನದ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಇಬ್ಬರು ಮಹನೀಯರ ಹೆಸರಿನಲ್ಲಿ ನಿರ್ಮಾಣ ಮಾಡುತ್ತಿರುವ ಕಟ್ಟಡಗಳಿಗೆ ಇರುವ ನಿವೇಶನದ ಸಮಸ್ಯೆಯನ್ನು ಹೋಗಲಾಡಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಪಂ ಸದಸ್ಯರಾದ ರಾಮದಾಸ್, ಪುರಸಭೆಯ ಸದಸ್ಯರಾದ ಎಚ್.ಆರ್.ಲೋಕೇಶ್, ಕೆ.ಆರ್.ಹೇಮಂತಕುಮಾರ್, ತಾಪಂ ಉಪಾಧ್ಯಕ್ಷ ಜಾನಕೀರಾಂ, ರಾಮಕೃಷ್ಣೇಗೌಡ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಸಂತೋಷ್‌ಕುಮಾರ್, ಕಬ್ಬು ಬೆಳೆಗಾರರ ಸಂಘದ ಗೌರವಾಧ್ಯಕ್ಷ ಕೆ.ಜೆ.ಅಣ್ಣಯ್ಯ ಮತ್ತಿತರರು ಉಪಸ್ಥಿತರಿದ್ದರು.





