ಮಹಿಳಾ ಸಮಾವೇಶ: ಪೂರ್ವಭಾವಿ ಸಭೆ
ತುಮಕೂರು, ಡಿ.5: ಕೊರಟಗೆರೆಯಲ್ಲಿ ಡಿ.17ರಂದು ನಡೆಯುವ ಮಹಿಳಾ ಸಬಲೀಕರಣ ಸಮಾವೇಶದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ತರಬೇತಿ ಮತ್ತು ಕೌಶಲಾಭಿವೃದ್ದಿ ಮಂಡಳಿಯ ಅಧ್ಯಕ್ಷ ಮುರುಳೀಧರ ಹಾಲಪ್ಪ ಅವರ ನೇತೃತ್ವದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಮಹಿಳಾ ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡುತ್ತಿರುವ ವಿವಿಧ ಇಲಾಖೆಯಗಳು ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳ ಮುಖ್ಯಸ್ಥರ ಪೂರ್ವಭಾವಿ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಮುರಳೀಧರ ಹಾಲಪ್ಪ ಮಾತನಾಡಿ, ಮಹಿಳೆಯರು ಅದರಲ್ಲಿಯೂ ಗ್ರಾಮೀಣ ಮಹಿಳೆಯರ ಅರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ದಿಯ ಹಿನ್ನೆಲೆಯಲ್ಲಿ ಡಿ.17ರಂದು ಕೊರಟಗೆರೆಯಲ್ಲಿ ಮಹಿಳೆಯರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ.ಸಮಾವೇಶದಲ್ಲಿ ಮಹಿಳೆಯರ ಸಮಗ್ರ ಅಭಿವೃದ್ದಿ ಕುರಿತಂತೆ ಸಂಘ ಸಂಸ್ಥೆಗಳು ಹಾಗೂ ಸರಕಾರ ವಿವಿಧ ಇಲಾಖೆಗಳು,ಸರಕಾರದಿಂದ ದೊರೆಯುಬಹುದಾದ ವಿವಿಧ ರೀತಿಯ ಸಾಲ ಸೌಲಭ್ಯ, ತರಬೇತಿ ಗಳು,ಮಹಿಳೆಯರು ಉದ್ದಿಮೆದಾರರಾಗಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಮಾಹಿತಿ ನೀಡುವ ಕಾರ್ಯಾಗಾರ ನಡೆಯಲಿದೆ ಎಂದರು.
ಸಮಾವೇಶವನ್ನು ಕೆ.ಪಿ.ಸಿ.ಸಿ.ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಲು ಸಲಹೆ ನೀಡಿದರು.
ಈ ಸಂದರ್ಭ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ದೇವರಾಜು,ಲೀಡ್‌ಬ್ಯಾಂಕ್ ಮುಖ್ಯವ್ಯವಸ್ಥಾಪಕ ಜೋತಿಗಣೇಶ್, ಮಕ್ಕಳ ರಕ್ಷಣಾಧಿಕಾರಿ ಉಪ್ಪಾರ್, ನಬಾರ್ಡ್‌ನ ವ್ಯವಸ್ಥಾಪಕ ವೀರಭದ್ರನ್, ವಸಂತನರಸಾಪುರ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಿವಶಂಕರ್, ಮುಖಂಡರಾದ ಮುಸ್ತಾಕ್ ಅಹಮ್ಮದ್ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.







