Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರೀಯ ಹೆದ್ದಾರಿಗೆ ಕೇಂದ್ರ...

ರಾಷ್ಟ್ರೀಯ ಹೆದ್ದಾರಿಗೆ ಕೇಂದ್ರ ಸರಕಾರದಿಂದ ರೂ. 500 ಕೋಟಿ ಅನುದಾನ : ಕಟೀಲ್

ಬಿ.ಸಿ.ರೋಡ್-ಸುರತ್ಕಲ್ ಹೆದ್ದಾರಿ ಕಾಂಕ್ರೀಟಿಕರಣ

ವಾರ್ತಾಭಾರತಿವಾರ್ತಾಭಾರತಿ6 Dec 2017 6:56 PM IST
share

ಪುತ್ತೂರು,ಡಿ6:  ಬಿ.ಸಿ. ರೋಡ್-ಸುರತ್ಕಲ್ ರಾಷ್ಟ್ರೀಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸಿ ಸಂಪೂರ್ಣ ಕಾಂಕ್ರಿಟೀಕರಣಗೊಳಿಸಲು ಕೇಂದ್ರ ಸರಕಾರ ರೂ. 500 ಕೋಟಿ ಅನುದಾನ ಮಂಜೂರು ಮಾಡಿದೆ. ಡಿ.ಪಿ.ಆರ್. ಮೂಲಕ ಟೆಂಡರ್ ಕರೆಯಲಾಗಿದೆ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು. 

ಪುತ್ತೂರಿನಲ್ಲಿ ಸುದ್ದಿಗಾರಗೊಂದಿಗೆ ಮಾತನಾಡಿದ ಅವರು ಬಿ.ಸಿ.ರೋಡ್-ಅಡ್ಡಹೊಳೆ ನಡುವಣ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚತುಷ್ಪಥ ಕಾಮಗಾರಿಯನ್ನು ನಡೆಸಲು ಈಗಾಗಲೇ ಗುತ್ತಿಗೆದಾರ ಸಂಸ್ಥೆ ಕಾಮಗಾರಿಗಳನ್ನು ಆರಂಭಿಸಿದೆ. ಜನವರಿ 1ರಿಂದ ಶಿರಾಡಿ ಘಾಟ್ ರಸ್ತೆಯ 3ನೇ ಹಂತದ ಕಾಂಕ್ರೀಟ್ ಕಾಮಗಾರಿ ಆರಂಭವಾಗಲಿದೆ. 13 ಕಿ.ಮೀ. ಉದ್ದ ಘಾಟ್ ರಸ್ತೆಯು ರೂ. 120ಕೋಟಿ ವೆಚ್ಚದಲ್ಲಿ ಸಂಪೂರ್ಣ ಕಾಂಕ್ರಿಟೀಕರಣಗೊಳ್ಳಲಿದೆ ಎಂದರು. 

ಕಾಂಞಗಾಡ್-ಕಲ್ಲಡ್ಕ ಅಂತರಾಜ್ಯ ಲೋಕೋಪಯೋಗಿ ರಸ್ತೆಗೆ ಮತ್ತು ಗುಂಡ್ಯ-ಸುಬ್ರಹ್ಮಣ್ಯ ಲೋಕೋಪಯೋಗಿ ರಸ್ತೆಯ ಅಭಿವೃದ್ಧಿ ಕಾಮಗಾರಿಗಾಗಿ ಕೇಂದ್ರ ಸರಕಾರವು ಅನುದಾನ ಬಿಡುಗಡೆಗೊಳಿಸಿದೆ. ಕುಲಶೇಖರ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಲು ರೂ. 17 ಕೋಟಿ ಅನುದಾನವನ್ನು ಕೇಂದ್ರ ಸರಕಾರ ಬಿಡುಗಡೆಗೊಳಿಸಿದೆ. ಈ ರಸ್ತೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಒಪ್ಪಿಗೆ ನೀಡಿದ್ದು, ಭೂಸ್ವಾಧೀನ ಕುರಿತಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಕಡತ ದ.ಕ. ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿದೆ ಎಂದು ವಿವರಿಸಿದರು. 

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯು ರಾಷ್ಟ್ರೀಯ ಹೆದ್ದಾರಿಗೆ ಮೇಲ್ದರ್ಜೆಗೇರಿರುವ ಹಿನ್ನಲೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಾಣಿ-ಸಂಪಾಜೆ ನಡುವಣ ಹೆದ್ದಾರಿಯ ರಸ್ತೆಯ ಇಕ್ಕೆಲಗಳಲ್ಲಿನ ಪೊದೆಗಳನ್ನು ತೆರವುಗೊಳಿಸುವ ಮತ್ತು ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನವರಿ 1ರ ಮೊದಲು ಈ ಕಾಮಗಾರಿಗಳನ್ನು ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ ಎಂದು ಸಂಸದ ನಳಿನ್ ಹೇಳಿದರು. 

ಈ ಸಂದರ್ಭದಲ್ಲಿ ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ತಾಲೂಕು ಪಂಚಾಯತ್ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಸಹಕಾರಿ ಮುಂದಾಳು ಕಂಟ್ರಮಜಲು ಭಾಸ್ಕರ ರೈ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X