Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಚುನಾವಣೆ: ಬಿಜೆಪಿಗೆ ‘ನೋಟಾ’ದ...

ಗುಜರಾತ್ ಚುನಾವಣೆ: ಬಿಜೆಪಿಗೆ ‘ನೋಟಾ’ದ ಭೀತಿ !

ವಾರ್ತಾಭಾರತಿವಾರ್ತಾಭಾರತಿ6 Dec 2017 8:35 PM IST
share
ಗುಜರಾತ್ ಚುನಾವಣೆ: ಬಿಜೆಪಿಗೆ ‘ನೋಟಾ’ದ ಭೀತಿ !

ಅಹ್ಮದಾಬಾದ್, ಡಿ.6: ಮುಂಬರುವ ಗುಜರಾತ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತದಾರರಿಗೆ ಪ್ರಪ್ರಥಮ ಬಾರಿಗೆ ‘ನೋಟಾ’ ಮತ (ಇದರಲ್ಲಿ ಯಾರೂ ಅಲ್ಲ ಎಂಬ ಆಯ್ಕೆ ಮಾಡುವ ವ್ಯವಸ್ಥೆ) ಚಲಾವಣೆಗೆ ಅವಕಾಶ ನೀಡಲಾಗಿದ್ದು’ ಇದು ಬಿಜೆಪಿಯ ಆತಂಕಕ್ಕೆ ಕಾರಣವಾಗಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

 ಜಿಎಸ್‌ಟಿ ಅನುಷ್ಠಾನದಿಂದ ಬಿಜೆಪಿ ಕುರಿತು ಅಸಮಾಧಾನಗೊಂಡಿರುವ ಕೆಲವು ಸಮುದಾಯದವರು ಹಾಗೂ ಸಣ್ಣ ಮತ್ತು ಮಧ್ಯಮ ವ್ಯವಹಾರಸ್ತರು ‘ನೋಟಾ’ ಅವಕಾಶ ಬಳಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. 2012ರ ವಿಧಾನಸಭೆ ಚುನಾವಣೆಯಲ್ಲಿ ಈ ಅವಕಾಶ ಲಭ್ಯವಿರಲಿಲ್ಲ.

 ಆದರೆ ಇದನ್ನು ಬಿಜೆಪಿ ನಿರಾಕರಿಸಿದ್ದು, ರಾಜ್ಯದ ಜನತೆ ಬಿಜೆಪಿಯ ಮೇಲೆ ಭರವಸೆ ಇಟ್ಟಿರುವುದು ಇತ್ತೀಚಿನ ಪಂಚಾಯತ್ ಚುನಾವಣೆಯ ಫಲಿತಾಂಶದಿಂದ ಸಾಬೀತಾಗಿದೆ ಎಂದಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಗುಜರಾತ್‌ನಲ್ಲಿ 4.20 ಲಕ್ಷಕ್ಕೂ ಹೆಚ್ಚು ಮತದಾರರು ‘ನೋಟ’ ಆಯ್ಕೆ ಮಾಡಿಕೊಂಡಿದ್ದರು ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ. ಆ ಸಂದರ್ಭದಲ್ಲಿ ಮಧ್ಯ ಮತ್ತು ಪಶ್ಚಿಮ ಭಾರತದಲ್ಲಿ ಬಲವಾದ ಆಡಳಿತ ವಿರೋಧಿ ಅಲೆಯಿದ್ದು ಕಾಂಗ್ರೆಸ್ ಆಗ ರಾಜಕೀಯವಾಗಿ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿ ಎದುರಿಸುತ್ತಿತ್ತು. ಆದರೂ 4.20 ಲಕ್ಷ ಮತದಾರರು ಬಿಜೆಪಿಯ ಬದಲು ‘ನೋಟಾ’ವನ್ನು ಆಯ್ಕೆ ಮಾಡಿಕೊಂಡಿರುವುದು ಗಮನಾರ್ಹವಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

 ಈ ಹಿಂದೆ ಬಿಜೆಪಿಯನ್ನು ಬೆಂಬಲಿಸಿದ್ದ ಕೆಲವು ಸಾಮಾಜಿಕ , ಆರ್ಥಿಕ ವಿಭಾಗಗಳು, ಸಣ್ಣ ಮತ್ತು ಮಧ್ಯಮ ವ್ಯವಹಾರಸ್ತರು ಜಿಎಸ್‌ಟಿ ವಿಷಯದಲ್ಲಿ ಬಿಜೆಪಿಯ ಬಗ್ಗೆ ಅಸಮಾಧಾನಗೊಂಡಿರುವ ಕಾರಣ ‘ನೋಟಾ’ ಅವಕಾಶ ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

 ಆದರೆ ಬಿಜೆಪಿ ಮುಖಂಡರ ಪ್ರಕಾರ ಕಳೆದ ಐದು ವರ್ಷಗಳಲ್ಲಿ ಯುವ ಮತದಾರರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು ಯುವಜನತೆ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಸಂತುಷ್ಟರಾಗಿದ್ದಾರೆ. ಕೆಲವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವ ಬದಲು ‘ನೋಟಾ’ವನ್ನು ಆಯ್ಕೆ ಮಾಡಬಹುದು. ಆದರೆ ತಮಗೆ ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡವರ ಬೆಂಬಲವಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ‘ನೋಟಾ’ ಮತ ಕೇವಲ ಬಿಜೆಪಿಗೆ ಮಾತ್ರವಲ್ಲ, ಎಲ್ಲಾ ಪ್ರಮುಖ ಪಕ್ಷಗಳಿಗೂ ಒಂದು ಹಿನ್ನಡೆಯಾಗಲಿದೆ ಎಂದವರು ಹೇಳಿದ್ದಾರೆ.

  ಈ ಮಧ್ಯೆ, ರಾಜ್ಯದಲ್ಲಿ ಕಾಂಗ್ರೆಸ್ 182 ಸ್ಥಾನಗಳ ಪೈಕಿ 78 ಸ್ಥಾನ ಗೆಲ್ಲುವ ಸಾಧ್ಯತೆಯಿರುವುದಾಗಿ ಹೊಸ ಸಮೀಕ್ಷೆ ತಿಳಿಸಿದೆ. ಬಿಜೆಪಿ ವಿರೋಧಿ ಮತಗಳು, ಬಿಜೆಪಿ ಹೊರತಾದ ಮತಗಳು ಹಾಗೂ ‘ನೋಟ’ ಮತಗಳಿಂದ ಕಾಂಗ್ರೆಸ್ ಇನ್ನೂ ಕೆಲವು ಸ್ಥಾನಗಳಲ್ಲಿ ಜಯ ಗಳಿಸುವ ವಿಶ್ವಾಸವನ್ನು ಕಾಂಗ್ರೆಸ್ ಮುಖಂಡರು ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಪಾಟಿದಾರ್ ಸಮುದಾಯದ ಮತಗಳನ್ನು ಸೆಳೆಯಲು ಹಾರ್ದಿಕ್ ಪಟೇಲ್, ಒಬಿಸಿ ಮತಗಳನ್ನು ಸೆಳೆಯಲು ಅಲ್ಪೇಶ್ ಠಾಕೂರ್ ಮತ್ತು ಜಿಗ್ನೇಶ್ ಮೆವಾನಿ ಪ್ರಯತ್ನ ನಡೆಸಿರುವುದೂ ಬಿಜೆಪಿಯ ನಿದ್ದೆಗೆಡಿಸಿದೆ. ಒಟ್ಟಿನಲ್ಲಿ ಈ ಬಾರಿಯ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಅಷ್ಟೊಂದು ಸುಲಭವಲ್ಲ ಎಂಬುದಂತೂ ಸ್ಪಷ್ಟವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X