Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗುಜರಾತ್ ಚುನಾವಣೆ ಬಳಿಕ ರಾಷ್ಟ್ರೀಯ...

ಗುಜರಾತ್ ಚುನಾವಣೆ ಬಳಿಕ ರಾಷ್ಟ್ರೀಯ ಪಕ್ಷಗಳಲ್ಲಿ ಭಾರಿ ಬದಲಾವಣೆ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ6 Dec 2017 8:38 PM IST
share
ಗುಜರಾತ್ ಚುನಾವಣೆ ಬಳಿಕ ರಾಷ್ಟ್ರೀಯ ಪಕ್ಷಗಳಲ್ಲಿ ಭಾರಿ ಬದಲಾವಣೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಡಿ.6: ಗುಜರಾತ್ ಚುನಾವಣೆ ಫಲಿತಾಂಶದ ನಂತರ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ. ಆನಂತರ, ರಾಷ್ಟ್ರೀಯ ಪಕ್ಷಗಳಿಂದ ಹಲವರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬುಧವಾರ ನಗರದ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಲು ಕಾರಣವಾದ ಅಂಶಗಳನ್ನು ಪಟ್ಟಿ ಮಾಡಿಕೊಂಡಿದ್ದೇವೆ. 105 ಕ್ಷೇತ್ರಗಳ ಪೈಕಿ 70 ರಿಂದ 80 ಸ್ಥಾನಗಳಲ್ಲಿ ಗೆಲ್ಲಲೇಬೇಕು. 20-30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಡುವೆ ಪೈಪೋಟಿ ಇದೆ. ಅಂತಹ ಕಡೆ ಆಕಾಂಕ್ಷಿಗಳ ನಡುವೆ ಸೌಹಾರ್ದತೆ ಮೂಡಿಸಬೇಕು ಎಂದರು.

ಕಳೆದ ಬಾರಿ ಆದ ತಪ್ಪುಗಳು ಮುಂದಿನ ಚುನಾವಣೆಯಲ್ಲಿ ಮರುಕಳಿಸಬಾರದು. ಹಾಗಾಗಿ ಎ, ಬಿ, ಸಿ ಕ್ಯಾಟಗರಿ ಅಂತ ಮಾಡಿಕೊಂಡಿದ್ದೇವೆ. ಈ ಬಾರಿ ನಾವು ಕಷ್ಟಪಡದೆ ಇದ್ದರೂ ಅರವತ್ತರಿಂದ ಎಪ್ಪತ್ತು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಆದರೆ, ಸರಕಾರ ರಚನೆಗೆ ಬೇಕಾದ ಸಂಖ್ಯೆ ತಲುಪುವುದು ನಮ್ಮ ಗುರಿ. 113 ಸ್ಥಾನಗಳಲ್ಲಿ ಗೆದ್ದರಷ್ಟೆ ರಾಜ್ಯಪಾಲರು ನಮಗೆ ಅವಕಾಶ ನೀಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

ಬೇರೆ ಪಕ್ಷದ ಬಾಗಿಲು ತಟ್ಟಲು ನಮಗೆ ಇಷ್ಟ ಇಲ್ಲ. ಸಮ್ಮಿಶ್ರ ಸರಕಾರ ಬಂದರೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿನ ಕಾರ್ಯಕ್ರಮಗಳನ್ನು ಜಾರಿಗೆ ತರುವುದು ಕಷ್ಟ. ಕಳೆದ ಹತ್ತು ವರ್ಷಗಳಲ್ಲಿ ಎರಡು ಸಾರ್ವತ್ರಿಕ ಚುನಾವಣೆ ಎದುರಿಸಿದ್ದೇನೆ. 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಅವರು ತಿಳಿಸಿದರು. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ದುರ್ಬಲವಾಗಿರುವುದು ನಿಜ. ಆದರೆ, ಹಳೆ ಮೈಸೂರು ಭಾಗದಲ್ಲಿ ಗರಿಷ್ಠ ಸೀಟುಗಳನ್ನು ಗೆಲ್ಲುತ್ತೇವೆ. ಹೈದರಾಬಾದ್- ಕರ್ನಾಟಕದಲ್ಲಿ ಪಕ್ಷಕ್ಕೆ ಉತ್ತಮ ವಾತಾವರಣವಿದೆ ಎಂದು ಕುಮಾರಸ್ವಾಮಿ ಹೇಳಿದರು.

ಹಾವೇರಿ, ಗದಗ ಸೇರಿ ಮುಂಬೈ ಕರ್ನಾಟಕ ಭಾಗದಲ್ಲಿ ಸಾಕಷ್ಟು ದುರ್ಬಲವಿದೆ. ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ಹಾಕುತ್ತೇವೆ. ಆಪರೇಷನ್ ಕಮಲದಲ್ಲಿ ಸಿದ್ದರಾಮಯ್ಯ ಪಾತ್ರವಿರುವುದನ್ನು ಪರೋಕ್ಷವಾಗಿ ಅವರೆ ಒಪ್ಪಿಕೊಂಡಂತಾಗಿದೆ. ಅದೆಲ್ಲ ಹತ್ತು ವರ್ಷದ ಹಿಂದೆ ನಡೆದಿದೆ ಅನ್ನೋದು ಗೊತ್ತಿದೆ. ಬಿಜೆಪಿಯವರು ಇದನ್ನು ಬಹಿರಂಗ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಅಂಕಪಟ್ಟಿ ಹಗರಣ: ಮೈಸೂರು ವಿಶ್ವವಿದ್ಯಾಲಯಗಳಲ್ಲಿ ನಡೆದಿದೆ ಎನ್ನಲಾದ ಅಂಕಪಟ್ಟಿಗಳ ಹಗರಣ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಈ ಸರಕಾರದಲ್ಲಿ ಎಲ್ಲವೂ ನಡೆಯುತ್ತದೆ. ಹೊರನೋಟಕ್ಕೆ ಮಾತ್ರ ನಾವು ಒಳ್ಳೆಯವರು ಅಂತ ತೋರಿಸಿಕೊಳ್ಳುತ್ತಾರೆ. ಎನ್‌ಎಸ್‌ಯುಐ ಘಟಕದವರೆ ಈ ಸಂಬಂಧ ಕಾಂಗ್ರೆಸ್ ಉಸ್ತುವಾರಿಗೆ ದೂರು ನೀಡಿದ್ದಾರೆ ಎಂದರು.

ನಾನು ಅದಾನಿ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದೆ. ಆದರೆ, ಈಗ ಅದೇ ಕಂಪೆನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣೆ ಹಾಕಿದ್ದಾರೆ. ಉಡುಪಿ ಬಳಿ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಹಸಿರು ನಿಶಾನೆ ನೀಡಲಾಗಿದೆ. ಇದು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅದಾನಿ ಪಾತ್ರವನ್ನು ಮುಚ್ಚಿಹಾಕುವ ತಂತ್ರವಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X