Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿಯಲ್ಲಿ ಕರಾಳ ದಿನ, ವಿಜಯೋತ್ಸವ:...

ಮಡಿಕೇರಿಯಲ್ಲಿ ಕರಾಳ ದಿನ, ವಿಜಯೋತ್ಸವ: ಸಮಯಪ್ರಜ್ಞೆ ಮೆರೆದ ಪೊಲೀಸರು

ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ 25 ವರ್ಷ

ವಾರ್ತಾಭಾರತಿವಾರ್ತಾಭಾರತಿ6 Dec 2017 9:31 PM IST
share
ಮಡಿಕೇರಿಯಲ್ಲಿ ಕರಾಳ ದಿನ, ವಿಜಯೋತ್ಸವ: ಸಮಯಪ್ರಜ್ಞೆ ಮೆರೆದ ಪೊಲೀಸರು

ಮಡಿಕೇರಿ, ಡಿ.6: ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ 25 ವರ್ಷಗಳು ತುಂಬಿದ ದಿನವಾದ ಬುಧವಾರ ಸಂಘಪರಿವಾರ ವಿಜಯೋತ್ಸವ ಆಚರಿಸಿದರೆ, ಇದಕ್ಕೆ ಪ್ರತಿಯಾಗಿ ಎಸ್‌ಡಿಪಿಐ ಕಪ್ಪು ಬಾವುಟದೊಂದಿಗೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲಾ ಕೇಂದ್ರದಲ್ಲಿ ನಡೆಯಿತು.

ಇಂದು ಬೆಳಗ್ಗೆಯೇ ನಗರದ ಕಾಲೆೇಜು ರಸ್ತೆಯ ಪೇಟೆ ರಾಮಮಂದಿರದ ಮುಂಭಾಗ ಸಂಘಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಕಾರ್ಯಕರ್ತರು ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೇ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮೆರವಣಿಗೆ ನಡೆಸುವ ಪ್ರಯತ್ನ ನಡೆಸಿದರಾದರೂ ಪೊಲೀಸರು ಅದಕ್ಕೆ ಅವಕಾಶವನ್ನು ನೀಡಲಿಲ್ಲ.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ, ಬಜರಂಗದಳದ ಜಿಲ್ಲಾ ಸಂಚಾಲಕ ಅಜಿತ್‌ಕುಮಾರ್, ಸಹಸಂಚಾಲಕ ಚೇತನ್, ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಕುಕ್ಕೇರ ಅಜಿತ್, ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಧನಂಜಯ, ನಗರಾಧ್ಯಕ್ಷ ಮಹೇಶ್ ಜೈನಿ, ಬಿ.ಕೆ. ಜಗದೀಶ್, ಅರಣ್ ಶೆಟ್ಟಿ, ಕಾಳಚಂಡ ಅಪ್ಪಣ್ಣ, ಬಜರಂಗದಳದ ಬಿ.ಎಂ. ರಾಜೇಶ್, ವಿಹಿಂಪ ಪ್ರಮುಖರಾದ ಕರವಂಡ ಕುಶಾಲಪ್ಪಮತ್ತಿತರ ಪ್ರಮುಖರು ಈ ಸಂದರ್ಭ ಇದ್ದರು.

ಎಸ್‌ಡಿಪಿಐ ಪ್ರತಿಭಟನೆ: ನಗರದ ಕಾಲೆೇಜು ರಸ್ತೆಯ ಪೇಟೆ ರಾಮಮಂದಿರದ ಬಳಿ ಸಂಘಪರಿವಾರ ಸಂಭ್ರಮಾಚರಣೆ ನಡೆಸುವ ಸಂದರ್ಭದಲ್ಲೆ ಇಂದಿರಾಗಾಂಧಿ ವೃತ್ತದ ಬಳಿ ಎಸ್‌ಡಿಪಿಐ ಕಾರ್ಯಕರ್ತರು ಕಪ್ಪುಧ್ವಜದೊಂದಿಗೆ ಆಗಮಿಸಿ ಕರಾಳ ದಿನಾಚರಣೆಯ ಪ್ರತಿಪಾದನೆ ಮಾಡಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ನಗರಸಭಾ ಸದಸ್ಯ ಮನ್ಸೂರ್ ಸೇರಿದಂತೆ ಕಾರ್ಯಕರ್ತರು ಕಪ್ಪುಬಾವುಟ ಮತ್ತು ಎಸ್‌ಡಿಪಿಐ ಧ್ವಜ ಹಿಡಿದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಸಂಘಪರಿವಾರಕ್ಕೆ ಸಂಭ್ರಮಾಚರಣೆ ಮಾಡಲು ಅವಕಾಶ ನೀಡಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್ ಮಾತನಾಡಿ, ಸಂಭ್ರಮಾಚರಣೆ ಮಾಡಿದವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿವಾದ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ ಸಂಘಪರಿವಾರ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ ಎಂದು ಆರೋಪಿಸಿದರು. ಸಂಭ್ರಮಾಚರಣೆ ಅಥವಾ ಮೆರವಣಿಗೆ ನಡೆಸಿದರೆ ನಾವೂ ಮೆರವಣಿಗೆ ನಡೆಸುವುದಾಗಿ ಎಸ್‌ಡಿಪಿಐ ಕಾರ್ಯಕರ್ತರು ಪಟ್ಟು ಹಿಡಿದರು. ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲು ಅವಕಾಶ ನೀಡಿದ ಪೊಲೀಸರ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಮುನ್ನುಗ್ಗಲು ಯತ್ನ: ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತಾದರೂ ಉಭಯ ಕಡೆಯ ಗುಂಪು ಒಂದು ಹಂತದಲ್ಲಿ ಮುನ್ನುಗಲು ಯತ್ನಿಸಿತು. ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿತು.

ಈ ಸಂದರ್ಭ ಸಮಯ ಪ್ರಜ್ಞೆ ಮೆರೆದ ಪೊಲೀಸರು ಎರಡೂ ಕಡೆಯವರನ್ನು ಹರಸಾಹಸದಿಂದ ಸಮಾಧಾನಪಡಿಸಿ, ಪರಿಸ್ಥಿತಿ ತಿಳಿಗೊಳ್ಳುವಂತೆ ಮಾಡಿದರು. ಡಿವೈಎಸ್ಪಿ ಸುಂದರರಾಜ್ ಹಾಗೂ ವೃತ್ತ ನಿರೀಕ್ಷಕ ಐ.ಪಿ. ಮೇದಪ್ಪ ನೇತೃತ್ವದಲ್ಲಿ ಪೇಟೆ ರಾಮಮಂದಿರ, ಇಂದಿರಾಗಾಂಧಿ ವೃತ್ತ ಸೇರಿದಂತೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X