ಉಡುಪಿ ಶ್ರೀಕೃಷ್ಣ ಮಠದಲ್ಲಿ ಝಾಕೀರ್ ಹುಸೇನ್‌ರಿಂದ ತಬ್ಲಾ ವಾದನ

ಉಡುಪಿ, ಡಿ.6: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬುಧವಾರ ನಡೆದ ತಬಲ ಮಾಂತ್ರಿಕ ಉಸ್ತಾದ್ ಝಾಕೀರ್ ಹುಸೇನ್ ಅವರ ‘ನಾದಲ ಯಾಮೃತ’ ತಬ್ಲಾ ವಾದನ ಕಾರ್ಯಕ್ರಮವು ಸಂಗೀತ ಪ್ರೇಮಿಗಳ ಮನಸೂರೆ ಗೊಳಿಸಿತು.
ವಿದ್ವಾನ್ ಕಮರೇಶ್ ಪೀಟಿಲು ಮತ್ತು ವಿದೂಷಿ ಜಯಂತಿ ಕಮರೇಶ್ ವೀಣಾ ವಾದನದಲ್ಲಿ ಸಹಕರಿಸಿದರು. ಈ ಕಾರ್ಯಕ್ರಮವನ್ನು ವೀಕ್ಷಿಸಲು ಉಡುಪಿ ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆ ಹಾಗೂ ರಾಜ್ಯಗಳ ಸಾವಿರಾರು ಸಂಖ್ಯೆಯ ಸಂಗೀತ ಪ್ರೇಮಿಗಳು ರಾಜಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದರು.
ಪರ್ಯಾಯ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ, ಸೋದೆ ಶ್ರೀ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ಈ ತಬ್ಲಾ ವಾದನವನ್ನು ಸಂಪೂರ್ಣವಾಗಿ ವೀಕ್ಷಿಸಿ ಅಸ್ವಾಧಿಸಿದರು.
ಶ್ರೀಕೃಷ್ಣಮಠಕ್ಕೆ ಭೇಟಿ: ಇದಕ್ಕೂ ಮುನ್ನ ಉಸ್ತಾದ್ ಝಾಕಿರ್ ಹುಸೇನ್ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ತದನಂತರ ಅವರು ಪರ್ಯಾಯ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಸ್ವಾಮೀಜಿ ಝಾಕಿರ್ ಹುಸೇನ್ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.





