ಮಾನನಷ್ಟ ಮೊಕದ್ದಮೆ: ಬಿಜೆಪಿ ಸಂಸದ ಸುಭಾಷ್ ಚಂದ್ರಗೆ ನೋಟಿಸ್

ಹೊಸದಿಲ್ಲಿ, ಡಿ.7: ತನ್ನ ವಿರುದ್ಧ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಬೇಕೆಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಸಲ್ಲಿಸಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಭಾಷ್‌ಚಂದ್ರ ಹಾಗೂ ದಿಲ್ಲಿ ಪೊಲೀಸರಿಗೆ ದಿಲ್ಲಿ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ನೋಟು ಅಮಾನ್ಯಗೊಂಡ ವಿಷಯದಲ್ಲಿ ತನ್ನ ಬಗ್ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ದೂರಿ ಕಳೆದ ವರ್ಷದ ನ.17ರಂದು ಸುಭಾಷ್‌ಚಂದ್ರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ವಿಚಾರಣಾ ನ್ಯಾಯಾಲಯವೊಂದರಲ್ಲಿ ಡಿ.11ರಂದು ನಡೆಯಲಿದ್ದು ಆಗ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ಕೋರಿ ಕೇಜ್ರೀವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ಜನವರಿ 22ಕ್ಕೆ ನಿಗದಿಗೊಳಿಸಿದೆ.
Next Story





