Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮೃದ್ಧ ಮಂಗಳೂರು ಅಭಿವೃದ್ಧಿಗಾಗಿ ಸಿಪಿಎಂ...

ಸಮೃದ್ಧ ಮಂಗಳೂರು ಅಭಿವೃದ್ಧಿಗಾಗಿ ಸಿಪಿಎಂ ಪಾದಯಾತ್ರೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 Dec 2017 9:50 PM IST
share

ಮಂಗಳೂರು, ಡಿ.7: ಸಮೃದ್ಧ ಮಂಗಳೂರು ಅಭಿವೃದ್ಧಿಗಾಗಿ ಸಿಪಿಐ(ಎಂ) ಮಂಗಳೂರು ನಗರ ದಕ್ಷಿಣ ಸಮಿತಿ ನೇತೃತ್ವದಲ್ಲಿ ಸೌಹಾರ್ದತೆಯಿಂದ ಅಭಿವೃದ್ಧಿಯೆಡೆಗೆ ಎಂಬ ಘೋಷಣೆಯಡಿ 4 ದಿನಗಳ ಪಾದಾತ್ರೆಗೆ ಇಂದು ಚಾಲನೆ ನೀಡಲಾಯಿತು.

ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ಪಾದಯಾತ್ರೆಯನ್ನು ಉದ್ಘಾಟಿಸಿದ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ. ಬಾಲಕೃಷ್ಣ ಶೆಟ್ಟಿ ನಗರದ ಸಮಗ್ರ ಅಭಿವೃದ್ಧಿ ಪ್ರಶ್ನೆಯಲ್ಲಿ ದಶಕಗಳಿಂದಲೂ ಮಂಗಳೂರು ನಗರಪಾಲಿಕೆಗೆ ಪಕ್ಷವು ಪ್ರತಿಭಟನೆ, ಆಗ್ರಹ, ಪ್ರಸ್ತಾವನೆಗಳನ್ನು ಕಾಲಕಾಲಕ್ಕೆ ಸಲ್ಲಿಸುತ್ತಾ ಬಂದಿದೆ. ಪಾಲಿಕೆ ಆಡಳಿತ ನಡೆಸುತ್ತಿರುವ ಪಕ್ಷಗಳು ಇವುಗಳನ್ನು ಕಡೆಗಣಿಸಿ, ಜನತೆಯ ಹಿತವನ್ನು ಅಲಕ್ಷಿಸಿದೆ. ಈ ನಿಟ್ಟಿನಲ್ಲಿ ಇಂದು ನಗರಪಾಲಿಕೆಯ ವೈಫಲ್ಯವನ್ನು ಮನವರಿಕೆ ಮಾಡಿ ಪರ್ಯಾಯಗಳನ್ನು ಮುಂದಿಡುವ ಸಿಪಿಐ(ಎಂ) ಪಕ್ಷದ ಆಗ್ರಹಗಳಿಗೆ ಜತೆ ಬೆಂಬಲ ನೀಡಬೇಕಾಗಿದೆ ಎಂದರು.

ಹಿಂದಿನ ಬಿಜೆಪಿ ಆಡಳಿತದಲ್ಲೂ ಇಂದಿನ ಕಾಂಗ್ರೆಸ್ ಆಡಳಿತದಲ್ಲೂ ನಗರ ಪಾಲಿಕೆಯ ಸಮಗ್ರ ಅಭಿವೃದ್ಧಿಯ ಚಿಂತನೆ ಇರುವುದಿಲ್ಲ. ಕೇವಲ ಹತುತಿ ವರ್ಷಗಳ ಹಿಂದೆ ಎಡಿಬಿ ಸಾಲ ಪಡೆದು ನಡೆಸಿದ ಒಳಚರಂಡಿ ಕಾಮಗಾರಿಗಳನ್ನು ದುರಸ್ತಿ ಮಾಡುವುದಕ್ಕಾಗಿ ಪಾಲಿಕೆ ಬೇರೊಂದು ಬೃಹತ್ ಸಾಲಕ್ಕೆ ಮುಂದಾಗಿರುವುದು ಇದಕ್ಕೆ ಒಂದು ಉದಾಹರಣೆಯಾಗಿದೆ.

ಮಂಗಳೂರು ನಗರದಲ್ಲಿ ನಿವೇಶನ ರಹಿತರು ಸಾವಿರಾರು ಸಂಖ್ಯೆಯಲ್ಲಿದ್ದು, ಅವರಿಗಾಗಿ ಒಂದು ಕಾರ್ಯಯೋಜನೆ ಪಾಲಿಕೆಯಲ್ಲಿರಲಿಲ್ಲ. ಸಿಪಿಐ(ಎಂ) ಪಕ್ಷ ನಿವೇಶನ ರಹಿತರನ್ನು ಸಂಘಟಿಸಿ ಹಲವಾರು ಬಾರಿ ಹೋರಾಟ ಮಾಡಿದ ಫಲವಾಗಿ, ನಿವೇಶನಕ್ಕಾಗಿ ಪಾಲಿಕೆ ಜಮೀನು ಕಾಯ್ದಿರಿಸಬೇಕಾಯಿತು. ಅಲ್ಲದೆ ಬಹುಮಹಡಿ ವಸತಿ ಸಂಕೀರ್ಣದ ಯೋಜನೆ ತಯಾರಿಸಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಪಾಲಿಕೆ ಆಡಳಿತ ಹಾಗೂ ಸ್ಥಳೀಯ ಶಾಸಕರು ಒಂದೇ ಪಕ್ಷದವರಾಗಿದ್ದರೂ, ಬಡವರ ನಿವೇಶನದ ಬಗ್ಗೆ ನಿರಾಸಕ್ತಿ ವ್ಯಕ್ತಪಡಿಸಿದ್ದರು. ನಗರದಲ್ಲಿ ನೀರಿನ ಪೂರೈಕೆ ಅವ್ಯವಸ್ಥೆ ಹಾಗೂ ದರ ಹೆಚ್ಚಳದ ವಿರುದ್ಧ ಕೂಡಾ ಸಿಪಿಐ(ಎಂ) ನಡೆಸಿದ ಹೋರಾಟದ ಬಳಿಕ ದರ ಪರಿಷ್ಕರಣೆಗೆ ನಗರಪಾಲಿಕೆ ಪ್ರಯತ್ನಿಸಿತಲ್ಲದೆ, ತನ್ನದೇ ಉತ್ಸುಕತೆಯಿಂದ ಅಲ್ಲ ಎಂಬುದಾಗಿ ಜೆ. ಬಾಲಕೃಷ್ಣ ಶೆಟ್ಟಿ ಟೀಕಿಸಿದರು.

ಪಕ್ಷದ ಬಾವುಟವನ್ನು ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ಕುಮಾರ್ ಬಜಾಲ್ ಅವರಿಗೆ ಹಸ್ತಾಂತರಗೊಳಿಸುವ ಮೂಲಕ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಮುನೀರ್ ಕಾಟಿಪಳ್ಳ ಮಾತನಾಡಿ, ಮಂಗಳೂರು ನಗರದಲ್ಲಿ ಒಂದು ರಾಜಕೀಯ ಪರಿವರ್ತನೆ ಆಗಬೇಕಿದ್ದು, ಅದಕ್ಕೆ ಯುವಜನರು ಮುಂದಾಳತ್ವ ವಹಿಸಬೇಕಾಗಿದೆ ಎಂದರು.

ಈಗಾಗಲೇ ಶಾಸಕರಾಗಿರುವವರು ಜನತೆಯ ಹಿತವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಶ್ರೀಮಂತರು ನಿರ್ಮಿಸುವ ಅಪಾರ್ಟ್‌ಮೆಂಟುಗಳ ಭೂಮಿ ಪೂಜೆಗಳಿಗೆ ಎಲ್ಲ ಶಾಸಕರು ಹಾಜರಿರುತಾತಿರೆ. ಆದರೆ ಸಾವಿರಗಟ್ಟಲೆ ನಿವೇಶನರಹಿತರ ಮನೆ ನಿರ್ಮಾಣದ ಬಗ್ಗೆ ಕನಿಷ್ಟ ಕಾಳಜಿಯೂ ಅವರಲ್ಲಿ ಕಂಡು ಬರುವುದಿಲ್ಲ. ಕಮ್ಯುನಿಸ್ಟ್ ಪಕ್ಷದವರು ಕಟ್ಟಿರುವ ಸಂಘಕ್ಕೆ ಸೇರಿಕೊಳ್ಳುವ ನಿವೇಶನರಹಿತರಿಗೆ ಆ ಸಂಘಟನೆಯಿಂದ ನಿಮಗೆ ಮನೆ ಕೊಡಿಸಲು ಸಾಧ್ಯವಿಲ್ಲ ಎಂದೂ ಬೆದರಿಸುತಾತಿರೆ ಎಂಬುದಾಗಿ ವಾಗ್ದಾಳಿ ನಡೆಸಿದರು.

ನಗರ ಕೇಂದ್ರದ ಸೆಂಟ್ರಲ್ ಮಾರ್ಕೆಟನ್ನು ಪುನರ್‌ರಚಿಸಬೇಕು ಎಂಬ ಒತ್ತಾಯ ಹಲವಾರು ವರ್ಷಗಳಿಂದ ಇದ್ದರೂ, ಈಗಿನ ಶಾಸಕರು ಆ ಬಗ್ಗೆ ಕಾರ್ಯ ಪ್ರವೃತ್ತರಾಗಲಿಲ್ಲ. ಅವಶ್ಯಕತೆ ಇಲ್ಲದಿದ್ದರೂ ಸುರತ್ಕಲ್‌ನಲ್ಲಿ ಹೈಟೆಕ್ ಮಾರ್ಕೆಟನ್ನು ನಿರ್ಮಾಣ ಮಾಡಲು ಇನ್ನೊಬ್ಬ ಶಾಸಕರು ಮುತುವರ್ಜಿ ವಹಿಸಿದ್ದಾರೆ.
ಇನ್ನೊಂದೆಡೆ ಬೃಹತ್ ಕಟ್ಟಡ ನಿರ್ಮಾಣದ ವೇಳೆಗೆ ಪಾರ್ಕಿಂಗ್ ಸ್ಥಳಗಳನ್ನು ಕಾದಿರಿಸಬೇಕೆಂಬ ನಿಯಮವಿದ್ದರೂ, ಬಹುತೇಕ ವ್ಯಾಪಾರಿ ಕಟ್ಟಡದ ಒಡೆಯರು ಪಾರ್ಕಿಂಗ್ ಸ್ಥಳ ನಿರ್ಮಿಸದೆ ಅದೇ ಸ್ಥಳದಲ್ಲಿ ವ್ಯಾಪಾರಿ ಮಳಿಗೆ ನಿರ್ಮಿಸಿದ್ದಾರೆ. ಇದರಿಂದಾಗಿ ನಗರದ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ ಹಾಗೂ ಅಕ್ರಮ ಪಾರ್ಕಿಂಗ್‌ಗೆ ಕಾರಣವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳು ನಗರ ಸೌಂದರ್ಯಕ್ಕೆ ಅಡ್ಡಿಯೆಂದು ಅವರನ್ನು ಒಕ್ಕಲೆಬ್ಬಿಸಲು ಪ್ರೇರಣೆ ನೀಡಿ, ಅದರಂತೆ ಪಾಲಿಕೆ ಕ್ರಮ ಕೈಗೊಳ್ಳುತ್ತಿದೆ ಎಂದರು.

ಸಿಪಿಐ(ಎಂ) ಮಂಗಳೂರು ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸುನೀಲ್‌ಕುಮಾರ್ ಬಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿ ಸದಸ್ಯ ಯೋಗೀಶ್ ಜಪ್ಪಿನಮೊಗರು ಸ್ವಾಗತಿಸಿದರು. ಸದಸ್ಯ ಸಂತೋಷ್ ಶಕ್ತಿನಗರ ವಂದಿಸಿದರು. ನಗರ ಪಾಲಿಕೆ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಮಾಜಿ ಕಾರ್ಪೊರೇಟರ್ ಜಯಂತಿ ಬಿ. ಶೆಟ್ಟಿ, ಸಿಪಿಐ(ಎಂ) ಜಿಲ್ಲಾ ಸಮಿತಿಯ ವಾಸುದೇವ ಉಚ್ಚಿಲ, ನಗರ ಸಮಿತಿ ಸದಸ್ಯರು, ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮಿತಿಯಾಜ್ ಪಾದಯಾತ್ರೆ ಉದ್ಘಾಟನಾ ಸಭೆಯಲ್ಲಿ ಭಾಗವಹಿಸಿದ್ದರು.

ಪಾದಯಾತ್ರೆಯು 4 ದಿನ ನಗರದ 38 ವಾರ್ಡುಗಳಲ್ಲಿ ಸಾಗಿ, ಡಿ.10ರ ಸಾಯಂಕಾಲ ಶಕ್ತಿನಗರದಲ್ಲಿ ಸಮಾರೋಪಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X