Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳೆಯರ ಸಬಲೀಕರಣಕ್ಕೆ ಸ್ತ್ರೀ ಶಕ್ತಿ...

ಮಹಿಳೆಯರ ಸಬಲೀಕರಣಕ್ಕೆ ಸ್ತ್ರೀ ಶಕ್ತಿ ಸಂಘಗಳು ಸಕ್ರಿಯವಾಗಲಿ: ಸಚಿವೆ ಉಮಾಶ್ರೀ

ವಾರ್ತಾಭಾರತಿವಾರ್ತಾಭಾರತಿ7 Dec 2017 10:03 PM IST
share
ಮಹಿಳೆಯರ ಸಬಲೀಕರಣಕ್ಕೆ ಸ್ತ್ರೀ ಶಕ್ತಿ ಸಂಘಗಳು ಸಕ್ರಿಯವಾಗಲಿ: ಸಚಿವೆ ಉಮಾಶ್ರೀ

ಬೆಂಗಳೂರು, ಡಿ.7: ಮಹಿಳೆಯರು ಸಬಲೀಕರಣದಲ್ಲಿ ಸ್ತ್ರೀ ಶಕ್ತಿ ಸಂಘಗಳು ಮಹತ್ವದ ಪಾತ್ರ ವಹಿಸಲಿ ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಉಮಾಶ್ರೀ ಆಶಯ ವ್ಯಕ್ತಪಡಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಸಂಯುಕ್ತ ಆಶ್ರಯದಲ್ಲಿ ನಗರದ ಮಲ್ಲೇಶ್ವರಂನಲ್ಲಿರುವ ವಿವೇಕಾನಂದ ಆಟದ ಮೈದಾನದಲ್ಲಿ ಆಯೋಜಿಸಿದ್ದ ಕರ್ಮಣಿ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಣ್ಣನ್ನು ಸಮಾಜದಲ್ಲಿ ಅತ್ಯಂತ ಕೀಳಾಗಿ ಕಾಣುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈಗಲೂ ಅದು ಮುಂದುವರಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಹಿಳೆಯರು ಆರ್ಥಿಕವಾಗಿ ಸಬಲೀಕರಣವಾದರೆ ಸಮಾಜದಲ್ಲಿ ಅವರನ್ನು ಗುರುತಿಸುವ ಸ್ಥಿತಿ ಬದಲಾಗುತ್ತದೆ. ಈ ನಿಟ್ಟಿನಲ್ಲಿ ಸ್ತ್ರೀ ಶಕ್ತಿ ಸಂಘಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿವೆ ಎಂದ ಅವರು, ರಾಜ್ಯ ಸರಕಾರದಿಂದ ನೀಡುತ್ತಿರುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಹೆಣ್ಣು ಗೌರವಯುತವಾದ ಜೀವನ ನಡೆಸಲು ಮುಂದಾಗಬೇಕು ಎಂದರು. ರಾಜ್ಯ ಸರಕಾರದಿಂದ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಅದರ ಜೊತೆಗೆ, 25 ಸಾವಿರ ಸಹಾಯ ಧನವನ್ನು ನೀಡಲಾಗುತ್ತಿದೆ. ಹೀಗಾಗಿ, ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡುವುದು, ಗುಡಿ ಕೈಗಾರಿಕೆ ಮಾಡುವವರು ಸರಕಾರದಿಂದ ಸಾಲ ಪಡೆಯಿರಿ ಎಂದ ಅವರು, ಸ್ತ್ರೀ ಶಕ್ತಿ ಸಂಘಗಳು, ಸಾಮಾಜಿಕ ಬಹಿಷ್ಕೃತರು, ವಿಧವೆಯರು, ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರು ಸೇರಿದಂತೆ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಶಾಸಕ ಎನ್.ಎ.ಹಾರಿಸ್ ಮಾತನಾಡಿ, ಆಸಿಡ್ ದಾಳಿ ಸಂತ್ರಸ್ಥ ಮಹಿಳೆಯರಿಗೆ ನೀಡುವ ಪರಿಹಾರದ ರೀತಿಯಲ್ಲಿಯೇ ಅಡುಗೆ ಅನಿಲ ಸಿಡಿತಕ್ಕೆ ಒಳಗಾಗುವ ಮಹಿಳೆಯರಿಗೂ ಸಹಾಯ ಧನ ನೀಡಬೇಕು. ಹಾಗೂ ಅತ್ಯಾಚಾರ ಸಂತ್ರಸ್ಥರಿಗೂ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಭಾರತಿ ಶಂಕರ್ ಮಾತನಾಡಿ, ಒಂದು ಪಕ್ಷದಲ್ಲಿ ಕೆಲಸ ಮಾಡುತ್ತಾ, ಅಲ್ಲಿ ಏನು ಸಿಗಲಿಲ್ಲ ಎಂದು ಮತ್ತೊಂದು ಪಕ್ಷಕ್ಕೆ ಹೋಗುತ್ತಿದ್ದರೆ ಎಲ್ಲಿಯೂ ಏನು ಸಿಗುವುದಿಲ್ಲ. ಎಲ್ಲಿ ಇರುತ್ತೇವೆಯೋ ಅಲ್ಲಿಯೇ ನಿಷ್ಠಾವಂತರಾಗಿ ದುಡಿದರೆ ಮುಂದೊಂದು ದಿನ ಒಳ್ಳೆ ಸ್ಥಾನ ಸಿಗುತ್ತದೆ. ಅದಕ್ಕೆ ನಾನೇ ನಿದರ್ಶನವಾಗಿದ್ದು, ಏಳೆಂಟು ವರ್ಷದಿಂದ ಪಕ್ಷಕ್ಕಾಗಿ ದುಡಿದೆ. ಹೀಗಾಗಿ, ನನಗೆ ಈ ಸ್ಥಾನ ಸಿಗಲು ಸಾಧ್ಯವಾಯಿತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಎಸ್.ಟಿ.ಸೋಮಶೇಖರ್, ಪಾಲಿಕೆ ಸದಸ್ಯ ಕೇಶವಮೂರ್ತಿ, ಸಂಗೀತ ನಿರ್ದೇಶಕ ಲತಾ ಹಂಸಲೇಖ, ಮಂಡಳಿ ಸದಸ್ಯರಾದ ಅಶ್ವಿನಿ, ಸುಶೀಲ ನಂಜಪ್ಪ, ಭಾಗ್ಯ ಭೀಮಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವಿವಿಧ ಸ್ವ ಸಹಾಯ ಸಂಘಗಳಿಂದ 25-30 ಸ್ಟಾಲ್‌ಗಳನ್ನು ನಿರ್ಮಿಸಲಾಗಿತ್ತು. ಇದರಲ್ಲಿ ವಿವಿಧ ರೀತಿಯ ಆಹಾರ ಉತ್ಪನ್ನಗಳು, ಅಡುಗೆ ಪದಾರ್ಥಗಳು, ಸೀರೆ, ಬಳೆ ಸೇರಿದಂತೆ ಹಲವು ವಸ್ತುಗಳನ್ನು ಪ್ರದರ್ಶನಕ್ಕಿಡಲಾಗಿದೆ. ಇಂದಿನಿಂದ ಆರಂಭವಾದ ಪ್ರದರ್ಶನ ಮತ್ತು ಮಾರಾಟ ಇನ್ನೂ ಎರಡು ದಿನಗಳ ಕಾಲ ನಡೆಯುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X