Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿಅರೇಬಿಯದಲ್ಲಿ ಕರಾವಳಿಯ ಮೂವರು...

ಸೌದಿಅರೇಬಿಯದಲ್ಲಿ ಕರಾವಳಿಯ ಮೂವರು ಕಾರ್ಮಿಕರು ಸಂಕಷ್ಟದಲ್ಲಿ

ತವರಿಗೆ ಮರಳಿಸಲು ಸೋಶಿಯಲ್ ಫೋರಮ್ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ7 Dec 2017 10:54 PM IST
share
ಸೌದಿಅರೇಬಿಯದಲ್ಲಿ ಕರಾವಳಿಯ ಮೂವರು ಕಾರ್ಮಿಕರು ಸಂಕಷ್ಟದಲ್ಲಿ

ದಮಾಮ್, ಡಿ.7: ಮಂಗಳೂರಿನ ಏಜೆನ್ಸಿಯೊಂದರ ಮೂಲಕ ಸೌದಿಅರೇಬಿಯದ ದಮಾಮ್ ನಗರಕ್ಕೆ ಉದ್ಸೋಗಕ್ಕೆ ತೆರಳಿದ ಅವಿಭಜಿತ ದ.ಕ.ಜೆಲ್ಲೆಯ ಮೂವರು ಯುವಕರು ಸಂಕಷ್ಟಕ್ಕೀಡಾಗಿದ್ದಾರೆಂದು ಇಂಡಿಯನ್ ಸೋಶಿಯಲ್ ಫೋರಂನಪ್ರಕಟನೆ ತಿಳಿಸಿದೆ.ಉಡುಪಿಯ ಸಚಿನ್ ಕುಮಾರ್, ಉಪ್ಪಿನಂಗಡಿಯ ಅಬ್ದುಲ್ ರಶೀದ್ ಹಾಗೂ ಬೆಳ್ತಂಗಡಿಯ ಸಂತೋಷ್ ಶೆಟ್ಟಿ ಎಂಬವರೇ ಉದ್ಯೋಗ ವಂಚನೆಗೊಳಗಾದ ಯುವಕರು.

ಇವರು 2017ರ ಮಾರ್ಚ್ 24ರಂದು ಮಂಗಳೂರು ಮೂಲದ ವೀಸಾ ಏಜೆನ್ಸಿಯ ಮೂಲಕ ಮುಂಬೈ ಮಾರ್ಗವಾಗಿ ಸೌದಿಅರೇಬಿಯದ ದಮಾಮ್ ನಗರಕ್ಕೆ ತೆರಳಿದ್ದರು.ಸಂತ್ರಸ್ತ ಯುವಕರು ಎಲೆಕ್ಟ್ರಿಶಿಯನ್ ವೀಸಾದಲ್ಲಿ ಸೌದಿಅರೇಬಿಯಕ್ಕೆ ತೆರಳಿದ್ದರು. ಅವರಿಗೆ ಉತ್ತಮ ವೇತನದ ಭರವಸೆಯನ್ನೂ ನೀಡಲಾಗಿತ್ತು. ಆದರೆ ಕಂಪೆನಿಯು ನೀಡಿದ್ದ ಭರವಸೆಯಂತೆ ಉದ್ಯೋಗವನ್ನಾಗಲಿ, ವಾಸ್ತವ್ಯ, ಆಹಾರ ಯಾವುದೇ ವ್ಯವಸ್ಥೆ ನೀಡದೆ ಸತಾಯಿಸಿತು.

ನಮಗೆ ಎಲೆಕ್ಟ್ರಿಶಿಯನ್ ಉದ್ಯೋಗವೇ ಬೇಕೆಂದು ಪಟ್ಟುಹಿಡಿದಾಗ ಕಾಟಾಚಾರಕ್ಕೆ ಉದ್ಯೋಗ ಸಂದರ್ಶನಕ್ಕೆ ಕರೆದುಕೊಂಡು ಹೋಗಿ ಸಂದರ್ಶನದಲ್ಲಿ ಫೇಲ್ ಮಾಡುತ್ತಿದ್ದರು. ಕೆಲವು ತಿಂಗಳು ರೂಮಿನಲ್ಲಿಯೇ ಇರಬೇಕಾಯಿತು ಎಂದು ಸಂತ್ರಸ್ತ ಯುವಕರು ಇಂಡಿಯನ್ ಸೋಶಿಯಲ್ ಫೋರಮ್ ಪ್ರತಿನಿಧಿ ನೌಶಾದ್ ಅವರಲ್ಲಿ ಅವಲತ್ತುಕೊಂಡಿರುವುದಾಗಿ ಪ್ರಕಟನೆ ತಿಳಿಸಿದೆ.

ಇಂಡಿಯನ್ ಸೋಶಿಯಲ್ ಫೋರಮ್ ಈ ವಿಚಾರವನ್ನು ಭಾರತೀಯ ರಾಯಭಾರ ಕಚೇರಿಗೆ ತಿಳಿಸಿ ಪ್ರಕರಣ ದಾಖಲಿಸಿತ್ತು. ರಾಯಭಾರ ಕಚೇರಿಯ ಸಹಕಾರದೊಂದಿಗೆ ನೌಶಾದ್ ಅವರು ಏಜೆನ್ಸಿ ಮತ್ತು ಕಂಪೆನಿಯೊಂದಿಗೆ ಮಾತುಕತೆ ನಡೆಸಿ ಸಂತ್ರಸ್ತ ಯುವಕರಿಗೆ ಈವರೆಗಿನ ವೇತನ ನೀಡುವಂತೆ ಮತ್ತು ಅವರಿಗೆ ಸೂಕ್ತ ಉದ್ಯೋಗ ಕಲ್ಪಿಸಲು ಸಾಧ್ಯವಾಗದಿದ್ದರೆ ತವರಿಗೆ ವಾಪಾಸಾಗಲು ಬೇಕಾದ ನಿರ್ಗಮನ ಪತ್ರ ನೀಡುವಂತೆ ಸೂಚಿಸಿದ್ದಾರೆ.ಇದಕ್ಕೆ ಪೂರಕವಾಗಿ ಅಗತ್ಯ ದಾಖಲೆಗಳನ್ನು ತಲುಪಿಸುವಲ್ಲಿ ಎಸ್‌ಡಿಪಿಐ ದ.ಕ. ಜಿಲ್ಲಾ ಮುಖಂಡರು ಸೋಶಿಯಲ್ ಫೋರಮ್ ಗೆ ಸಹಕರಿಸಿದ್ದರು.

ಪ್ರಸಕ್ತ ಸಂತ್ರಸ್ತ ಯುವಕರಿಗೆ ಆಹಾರ ಮತ್ತು ವಾಸ್ತವ್ಯ ಹಾಗೂ ಟಿಕೇಟು ವ್ಯವಸ್ಥೆಯನ್ನು ಇಂಡಿಯನ್ ಸೋಶಿಯಲ್ ಫೋರಮ್ ವತಿಯಿಂದ ನೀಡಲಾಗುತ್ತಿದೆ. ಸೋಶಿಯಲ್ ಫೋರಮ್ನ ನಿರಂತರ ಪ್ರಯತ್ನದ ಫಲವಾಗಿ ಸಚಿನ್, ರಶೀದ್ ಮತ್ತು ಸಂತೋಷ್ ಜೊತೆಯಾಗಿಯೇ ತವರಿಗೆ ಮರಳಲಿದ್ದು,ಡಿ.9ದಂದು ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ ಎಂದು ಇಂಡಿಯನ್ ಸೋಶಿಯಲ್ ಫೋರಮ್ ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X