Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೇರಾ ಕಾಯ್ದೆಗೆ ಜೈ ಎಂದ ಬಾಂಬೆ ಹೈಕೋರ್ಟ್

ರೇರಾ ಕಾಯ್ದೆಗೆ ಜೈ ಎಂದ ಬಾಂಬೆ ಹೈಕೋರ್ಟ್

ನಿರ್ದಿಷ್ಟ ಸನ್ನಿವೇಶಗಳಲ್ಲಿ ಯೋಜನೆಗಳ ಕಾಲಮಿತಿ ವಿಸ್ತರಣೆಗೆ ನ್ಯಾಯಪೀಠ ಸಮ್ಮತಿ

ವಾರ್ತಾಭಾರತಿವಾರ್ತಾಭಾರತಿ7 Dec 2017 11:05 PM IST
share
ರೇರಾ ಕಾಯ್ದೆಗೆ ಜೈ ಎಂದ ಬಾಂಬೆ ಹೈಕೋರ್ಟ್

 ಮುಂಬೈ,ಡಿ.7: ಕಟ್ಟಡ ನಿರ್ಮಾಣ ಉದ್ಯಮವನ್ನು ನಿಯಂತ್ರಿಸಲು ಹಾಗೂ ವಸತಿ ಖರೀದಿದಾರರ ಹಿತಾಸಕ್ತಿಗಳ ರಕ್ಷಣೆಗಾಗಿ ಇತ್ತೀಚೆಗೆ ಜಾರಿಗೆ ಬಂದಿರುವ 2016ರ ರಿಯಲ್ ಎಸ್ಟೇಟ್ ನಿಯಂತ್ರಣ ಹಾಗೂ ಅಭಿವೃದ್ಧಿ ಕಾಯ್ದೆ (ರೇರಾ)ಯ ಸಾಂವಿಧಾನಿಕ ಸಿಂಧುತ್ವವನ್ನು ಬಾಂಬೆ ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ.

 ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಕೆಲವು ನಿವೇಶನಗಳ ಮಾಲಕರು ರೇರಾ ಕಾಯ್ದೆಯ 18 ನಿಯಾವಳಿಗಳನ್ನು ಪ್ರಶ್ನಿಸಿ ಸಲ್ಲಿಸಿದ ಹಲವು ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ನರೇಶ್ ಪಾಟೀಲ್ ಹಾಗೂ ರಾಜೇಶ್ ಕೇತ್ಕರ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ತಳ್ಳಿಹಾಕಿದೆ.

ಆದಾಗ್ಯೂ, ವಿಶೇಷ ಹಾಗೂ ನಿರ್ಬಂಧಿತ ಸನ್ನಿವೇಶಗಳಿಂದಾಗಿ ತಮ್ಮ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸಲು ನಿಗದಿಪಡಿಸಲಾದ ಕಾಲಮಿತಿಗಿಂತ 1 ವರ್ಷ ಹೆಚ್ಚುವರಿಯಾಗಿ ವಿಸ್ತರಿಸಲು ಅವಕಾಶ ನೀಡಬೇಕೆಂಬ ಅರ್ಜಿದಾರರ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ.

  ಬಾಂಬೆ ಹೈಕೋರ್ಟ್‌ನ ಈ ಆದೇಶದಿಂದಾಗಿ, ಬಿಲ್ಡರ್‌ಗಳು ಹಾಗೂ ರಿಯಲ್ ಎಸ್ಟೇಟ್ ಡೆವಲಪರ್‌ಗಳಿಗೆ, ತಮ್ಮ ಕಟ್ಟಡ ನಿರ್ಮಾಣ ಯೋಜನೆಗಳನ್ನು ಪೂರ್ಣ ಗೊಳಿಸಲು ನಿಗದಿತ ಸಮಯದಿಂದ ಒಂದು ವರ್ಷದ ಅಧಿಕ ಕಾಲಾವಕಾಶ ದೊರೆತಿರುವುದು ಅವರು ಸಮಾಧಾನದ ನಿಟ್ಟುಸಿರೆಳೆಯುವಂತೆ ಮಾಡಿದೆ.

 ಆದರೆ ಅಸಾಧಾರಣ ಹಾಗೂ ನಿರ್ಬಂಧಿತ ಸನ್ನಿವೇಶಗಳಲ್ಲಿ ಮಾತ್ರವೇ ಹೆಚ್ಚುವರಿ ಕಾಲಾವಕಾಶ ವಿಸ್ತರಣೆಯನ್ನು ಪ್ರಾಧಿಕಾರವು ನೀಡಬಹುದಾಗಿದೆಯೆಂದು ನ್ಯಾಯ ಪೀಠವು ಸ್ಪಷ್ಟಪಡಿಸಿದೆ.

   ರೇರಾ ಕಾಯ್ದೆಯ ಅನುಷ್ಠಾನದ ಬಗ್ಗೆ ಮುಂಬರುವ ವರ್ಷಗಳಲ್ಲಿ ಅತ್ಯಂತ ನಿಕಟವಾದ ಕಣ್ಗಾವಲು ನಡೆಸುವ ಅಗತ್ಯವಿದೆಯೆಂದು ನ್ಯಾಯಪೀಠವು ಪ್ರತಿಪಾದಿಸಿದೆ. ರೇರಾ ಕಾಯ್ದೆಯು ರಿಯಲ್ ಎಸ್ಟೇಟ್ ಪ್ರವರ್ತಕರನ್ನು ನಿಯಂತ್ರಿಸುವ ಕಾನೂನು ಮಾತ್ರವೇ ಅಲ್ಲ, ರಿಯಲ್ ಎಸ್ಟೇಟ್ ವಲಯವನ್ನು ಅಭಿವೃದ್ಧಿ ಪಡಿಸುವುದು ಅದರಲ್ಲೂ ವಿಶೇಷವಾಗಿ ದೇಶಾದ್ಯಂತ ಪೂರ್ತಿಯಾಗದೆ ಇರುವ ಕಟ್ಟಡ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸುವುದಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

ರಿಯಲ್ ಎಸ್ಟೇಟ್ ವಲಯವು ಅಗಾಧವಾದ ಸಮಸ್ಯೆಗಳನ್ನು ಎದುರಿಸು ತ್ತಿದೆಯೆಂದು ಅಭಿಪ್ರಾಯಿಸಿದ ನ್ಯಾಯಾಲಯವು, ಪ್ರತಿಯೊಬ್ಬ ನಾಗರಿಕನ ಕಣ್ಣೀರನ್ನು ಒರೆಸುವ ಮೂಲಕ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸನ್ನು ಈಡೇರಿಸಲು ಒಂದು ಹೆಜ್ಜೆ ಮುಂದಿಡಬೇಕಾದ ಕಾಲವೀಗ ಸನ್ನಿಹಿತವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ರೇರಾ ಕಾಯ್ದೆಯ ಕಟ್ಟಡ ನಿರ್ಮಾಣ ಯೋಜನೆಗಳನ್ನು ಕಾರ್ಯಗತಗೊಳಿಸಲು ರಿಯಲ್‌ಎಸ್ಟೇಟ್ ಮಾಲಕರಿಗೆ ಕಟ್ಟುಪಾಡುಗಳನ್ನು ವಿಧಿಸುತ್ತದೆ. ಯೋಜನೆಗಳ ಪೂರ್ಣಗೊಳಿಸುವಲ್ಲಿ ವಿಳಂಬವಾದಲ್ಲಿ ಅವರಿಗೆ ದಂಡವಿಧಿಸಲು, ಲಾಭಕೋರ ಬಿಲ್ಡರ್‌ಗಳಿಂದ ಫ್ಲಾಟ್‌ಗಳ ಖರೀದಿದಾರರಿಗೆ ರಕ್ಷಣೆ ನೀಡುವ ಉದ್ದೇಶವನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X