Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಧ್ಯ ಮತ್ತು ಮಾಧಕ ವಸ್ತುಗಳ...

ಮಧ್ಯ ಮತ್ತು ಮಾಧಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 Dec 2017 11:46 PM IST
share
ಮಧ್ಯ ಮತ್ತು ಮಾಧಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮ

ಬಾಗೇಪಲ್ಲಿ,ಡಿ.7:  ಮಹಿಳೆಯರು ಮನಸು ಮಾಡಿದರೆ  ತಮ್ಮ ಗಂಡದಿರನ್ನು ಕುಡಿತದ ಚಟದಿಂದ ಮುಕ್ತರನ್ನಾಗಿಸಲು ಸಾಧ್ಯವಾಗುತ್ತೆ ಎಂದು ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹೆಚ್.ಸಿ ರುದ್ರಪ್ಪ ತಿಳಿಸಿದರು.

ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ  ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ಶ್ರೀ ಕ್ಷೇತ್ರ ಧರ್ಮಾಭಿವೃದ್ದಿ ಯೋಜನೆ ಹಾಗೂ ಕನ್ನಡ ಸೇನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಧ್ಯ ಮತ್ತು ಮಾಧಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜನಜಾಗೃತಿ  ಮತ್ತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು  ಅನಾಧಿಕಾಲದಿಂದಲ್ಲೂ ದೇಶದಲ್ಲಿ ಮಧ್ಯ ಸೇವನೆ ಮಾಡಿಕೊಂಡು ಬರುತ್ತಿದ್ದಾರೆ, ಆದರೆ ಮಧ್ಯ ಸೇವನೆಯಿಂದ ದುಶ್ಚಟಗಳಿಗೆ ಬಲಿಯಾಗಿ ಅವರು ಕುಟುಂಬಗಳು ಬೀಧಿಪಾಲಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ದೇಶದ ಹಲವು ರಾಜ್ಯಗಳಲ್ಲಿ ಮಧ್ಯ ನಿಷೇಧವನ್ನು ಮಾಡಲಾಗಿದೆ ನಮ್ಮ ರಾಜ್ಯದಲ್ಲಿಯೂ ಸಹ  ಮಧ್ಯ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಗಮನಕ್ಕೆ ಮಹಿಳೆಯರು ತಂದರೆ ಅವರು ಖಮಡಿತವಾಗಿ ಒಪ್ಪಿಗೆಯನ್ನು ಸೂಚಿಸುತ್ತಾರೆ. ನಮ್ಮ ರಾಜ್ಯದಲ್ಲಿ ಅಬಕಾರಿ ಇಲಾಖೆಗೆ 19ಸಾವಿರ ಕೋಟಿ ಆದಾಯ ಗಳಿಸುತ್ತಿದ್ದರೂ ಮಧ್ಯ ನಿಷೇಧ ಮಾಡಬೇಕೆಂದು ಹಲವಾರು ವರ್ಷಗಳ ಬೇಡಿಕೆ ಇದೆ. 12 ಕೋಟಿ ಜನಸಂಖ್ಯೆ ಹೊಂದಿರುವ ಬಿಹಾರ್ ದಂತಹ ದೊಡ್ಡ ರಾಜ್ಯದಲ್ಲಿಯೇ ಮಧ್ಯ ನಿಷೇಧ ಮಾಡಲಾಗಿದೆ, 6 ಕೋಟಿ ಜನಸಂಖ್ಯೆ ಹೊಂದಿರುವ ನಮ್ಮ ರಾಜ್ಯದಲ್ಲಿಯೂ ಸಹ ಮಹಿಳೆಯರು ಬೇಡಿಕೆ ಸಲ್ಲಿಸಿದರೆ ಮಧ್ಯ ನಿಷೇಧಕ್ಕೆ ಹಸಿರು ನಿಶಾನೆ ದೊರೆಯಬಹುದು, ಯಾವ ಮಹಿಳೆಯರು ತಮ್ಮ ಗಂಡಂದಿರನ್ನ ಮಧ್ಯದಿಂದ ವಿಮುಕ್ತಗೊಳಿಸಿದರೆ ಅಂತಹವರಿಗೆ ನಮ್ಮ ಮಂಡಳಿವತಿಯಿಂದ ಸಿ.ಎಂ. ಸಿದ್ದರಾಮಯ್ಯ ಮೂಲಕ 1 ಲಕ್ಷ ನಗದು ಹಣ ನೀಡಿ ಪ್ರಶಸ್ತಿ ಪತ್ರವನ್ನು ನೀಡಲಾಗುವುದು ಎಂದರು.

ಕರ್ನಾಟಕ ಮಧ್ಯಪಾನ ಸಂಯಮ ಮಂಡಳಿಯ ನಿದೇರ್ಶಕ ತೋಳ್ಳಪಲ್ಲಿ ಟಿ.ಎನ್.ರವಿಚಂದ್ರಾರೆಡ್ಡಿ ಮಾತನಾಡಿ, ಡಾ.ಡಿ.ಎಂ.ನಂಜುಂಡಪ್ಪ ವರಧಿಯಂತೆ ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರವು ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು ಇಲ್ಲಿ ಜನರ ಜೀವನ ಸಂಕಷ್ಟದಲ್ಲಿ ನಡೆಯುತ್ತಿದ್ದು ಬಹುತೇಕ ತಾಂಡಗಳು, ಪ.ಜಾ ಮತ್ತು ಪ.ಪಂಗಳ ಕಾಲೇನಿಗಳಲ್ಲಿ ಮಧ್ಯಪಾನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು  ಈ ಭಾಗದ ಬಹುತೇಕ ಪೋಷಕರು ಮಧ್ಯದ ವ್ಯಸನಗಳಿಗೆ ಒಳಗಾಗಿ ತಮ್ಮ ಮಕ್ಕಳು ಸಹ ಅದೇ ದಾರಿ ಹಿಡಿಯುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಅವರು  ಹೆಣ್ಣು ಮಕ್ಕಳಾದ ನೀವು ಕಾಟಾಚಾರಕ್ಕಾಗಿ ಕಾರ್ಯಕ್ರಮಕ್ಕೆ ಬಂದಿದ್ದೇವೆ ಎಂಬುದನ್ನು ಮರೆತು ಈಗನಿಂದಲ್ಲೇ ನಿಮ್ಮ ಗಂಡಂದಿರನ್ನು ಮನಪರಿವರ್ತನೆ ಮಾಡುವುದು ನಿಮ್ಮೆಲ್ಲರ ಕರ್ತವ್ಯ ಎಂದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತ ಗೋಪಿ ನಾಯ್ಕ್ ಮತ್ತು ಅವರ ತಂಡದಿಂದ ಮಧ್ಯಪಾನದಿಂದಾಗುವ ದುಷ್ಪರಿಣಾಮಗಳ ಬಗ್ಗೆ  ಗೀತೆಗಳ ಗಾಯನ ಮಾಡಿದರು.

ಈ ಸಂದರ್ಭದಲ್ಲಿ  ಲಂಕೇಶ್ ಪತ್ರಿಕೆಯ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥ ರಾಜಶೇಖರನಾಯ್ಡು, ಮಧ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ವಿ.ಪಾತರಾಜು, ಅಬಕಾರಿ ಇಲಾಖೆಯ ಡಿವೈಎಸ್‍ಪಿ ಲಕ್ಷ್ಮೀನಾರಾಯಣ, ನಿರೀಕ್ಷಕ ಬಿ.ಕೃಷ್ಣಮೂರ್ತಿ, ತಾ.ಪಂ ಉಪಾದ್ಯಕ್ಷೆ ಸರಸ್ಪತಮ್ಮ, ಸದಸ್ಯ ಕೆ.ಆರ್.ಸುಧಾಕರ್‍ರೆಡ್ಡಿ, ಶ್ರೀಕ್ಷೇತ್ರದ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಬಿ.ದಿನೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಎಂ.ರಮೇಶ್, ತಾಲೂಕು ವೈದ್ಯಾಧಿಕಾರಿ ಸತ್ಯನಾರಾಯಣರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟರವಣಪ್ಪ, ಜಿಲ್ಲಾ ಕಾರ್ಯದರ್ಶಿ ಸಿ.ವೆಂಕಟರಾಯಪ್ಪ, ನರೇಗಾ ಯೋಜನೆಯ ಎಇಇ ರವೀಂದ್ರ, ಸಾಕ್ಷರತಾ ಸಂಯೋಜಕ ಎನ್.ಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X