Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ಡಿ.9ರಂದು ಮೊದಲಹಂತದ ಮತದಾನ

ಗುಜರಾತ್: ಡಿ.9ರಂದು ಮೊದಲಹಂತದ ಮತದಾನ

ಬಿಜೆಪಿ-ಕಾಂಗ್ರೆಸ್ ನಡುವೆ ಬಿಗ್‌ಫೈಟ್ ಆರಂಭ

ವಾರ್ತಾಭಾರತಿವಾರ್ತಾಭಾರತಿ8 Dec 2017 7:39 PM IST
share
ಗುಜರಾತ್: ಡಿ.9ರಂದು ಮೊದಲಹಂತದ ಮತದಾನ

ಅಹ್ಮದಾಬಾದ್, ಡಿ.8: ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆಗೆ ಸಾಕ್ಷಿಯಾಗಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಶನಿವಾರ ಮೊದಲ ಹಂತದ ಮತದಾನ ನಡೆಯಲಿದೆ. ಸೌರಾಷ್ಟ್ರ ಹಾಗೂ ದಕ್ಷಿಣ ಗುಜರಾತ್ ಪ್ರಾಂತದ 89 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದ್ದು, 977 ಅಭ್ಯರ್ಥಿಗಳ ಚುನಾ ವಣಾ ಭವಿಷ್ಯ ನಿರ್ಧಾರವಾಗಲಿದೆ. 2.12 ಕೋಟಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ.

  ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ನಾಳೆ ಚುನಾವಣಾ ಭವಿಷ್ಯ ನಿರ್ಧಾರವಾಗಲಿರುವ ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಕಾಂಗ್ರೆಸ್ ನಾಯಕ ಶಕ್ತಿ ಸಿನ್ಹಾ ಗೋಹಿಲ್ ಹಾಗೂ ಪರೇಶ್ ಧನಾನಿ ಪ್ರಮುಖರಾಗಿದ್ದಾರೆ.

 ತವರು ರಾಜ್ಯವಾದ ಗುಜರಾತ್‌ನ ವಿಧಾನಸಭಾ ಚುನಾವಣೆಯು ಪ್ರಧಾನಿ ಮೋದಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೆ, ಶೀಘ್ರದಲ್ಲೇ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿರುವ ರಾಹುಲ್‌ಗಾಂಧಿಗೆ ಸತ್ವ ಪರೀಕ್ಷೆಯಾಗಿ ಪರಿಣಮಿಸಿದೆ.

ಮೊದಲ ಹಂತದ ಚುನಾವಣೆ ನಡೆಯಲಿರುವ ಸೌರಾಷ್ಟ್ರ ಹಾಗೂ ದಕ್ಷಿಣ ಗುಜರಾತ್‌ನಲ್ಲಿ ಪ್ರಧಾನಿ ಮೋದಿ, 15ಕ್ಕೂ ಅಧಿಕ ಬಿಜೆಪಿಯ ಚುನಾವಣಾ ಪ್ರಚಾರ ರ್ಯಾಲಿ ಗಳಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೂಡಾ ಹಲವಾರು ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದರು. ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಅರುಣ್ ಜೇಟ್ಲಿ, ರಾಜನಾಥ್‌ಸಿಂಗ್, ನಿರ್ಮಲಾ ಸೀತಾರಾಮನ್,ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಬಿಜೆಪಿಯ ಚುನಾವಣಾ ಪ್ರಚಾರದ ಮುಂಚೂಣಿಯಲ್ಲಿದ್ದರು.

ರಾಹುಲ್ ಅವರನ್ನು ಹೊರತುಪಡಿಸಿ, ಕಾಂಗ್ರೆಸ್ ಪರವಾಗಿ ಚುನಾವಣಾ ನಡೆಸಿದವರಲ್ಲಿ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್, ಜ್ಯೋತಿರಾದಿತ್ಯ ಸಿಂಧ್ಯಾ, ಸಚಿನ್ ಪೈಲಟ್ ಪ್ರಮುಖರು.

ಪಾಟೀದಾರ್ ಆಂದೋಲನದ ನಾಯಕ ಹಾರ್ದಿಕ್ ಪಟೇಲ್, ದಲಿತ ನಾಯಕ ಜಿಗ್ನೇಶ್ ಮೆವಾನಿ ಹಾಗೂ ಓಬಿಸಿ ನಾಯಕ ಅಲ್ಪೇಶ್ ಠಾಕೂರ್, ಕಾಂಗ್ರೆಸ್‌ನ್ನು ಬೆಂಬಲಿಸಿರುವುದು, ಸತತ 6ನೇ ಬಾರಿಗೆ ಅಧಿಕಾರಕ್ಕೇರಲು ತವಕಿಸುತ್ತಿರುವ ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಡಿಸೆಂಬರ್ 14ರಂದು ಎರಡನೆ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ರಂದು ಮತಏಣಿಕೆ ನಡೆಯಲಿದೆ.

ಮೊದಲ ಹಂತದ ಚುನಾವಣೆ

99 ಕ್ಷೇತ್ರಗಳು

927 ಅಭ್ಯರ್ಥಿಗಳು

2.12 ಕೋಟಿ ಮತದಾರರು

ಪ್ರಮುಖ ಅಭ್ಯರ್ಥಿಗಳು

ಮುಖ್ಯಮಂತ್ರಿ ವಿಜಯ್ ರೂಪಾನಿ (ರಾಜ್‌ಕೋಟ್-ಪಶ್ಚಿಮ), ಕಾಂಗ್ರೆಸ್ ನಾಯಕರಾದ ಶಕ್ತಿ ಸಿನ್ಹಾ ಗೋಯಲ್ (ಮಾಂಡ್ವಿ) ಹಾಗೂ ಪರೇಶ್ ಧನಾನಿ (ಆಮ್ರೇಲಿ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X