ಬಂಟ್ವಾಳ: ಸರ ಕಳವು ಪ್ರಕರಣದ ಆರೋಪಿ ಸೆರೆ

ಬಂಟ್ವಾಳ, ಡಿ. 8: ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶುಕ್ರವಾರ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲಿಸರು ಬಂಧಿಸಿದ್ದಾರೆ.
ಬಂಧಿತನನ್ನು ತೆಂಕಬೆಳ್ಳೂರು ಗ್ರಾಮದ ಕಾವುಗುಡ್ಡೆ ನಿವಾಸಿ ದಿನಕರ (28) ಎಂದು ಗುರುತಿಸಲಾಗಿದೆ. 5 ವರ್ಷಗಳ ಹಿಂದೆ ಸರ ಕಳವು ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬಂಟ್ವಾಳ ಪೇಟೆಯಲ್ಲಿ ತಿರುಗಾಡುತ್ತಿದ್ದ ಈತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story





