Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ನಿಯ ಶವ ತಲೆ ಮೇಲೆ ಹೊತ್ತು ಸಾಗಿಸಿದವ...

ಪತ್ನಿಯ ಶವ ತಲೆ ಮೇಲೆ ಹೊತ್ತು ಸಾಗಿಸಿದವ ಈಗ ಸಿರಿವಂತ

ವಾರ್ತಾಭಾರತಿವಾರ್ತಾಭಾರತಿ8 Dec 2017 8:49 PM IST
share
ಪತ್ನಿಯ ಶವ ತಲೆ ಮೇಲೆ ಹೊತ್ತು ಸಾಗಿಸಿದವ ಈಗ ಸಿರಿವಂತ

ಕಟಕ್, ಡಿ.8: ಕಳೆದ ವರ್ಷ ಒಡಿಶಾದ ಬುಡಕಟ್ಟು ಸಮುದಾಯದ ನಿವಾಸಿ ದಾನಾ ಮಾಝಿ ಎಂಬಾತ ತನ್ನ ಪತ್ನಿಯ ಶವವನ್ನು 10 ಕಿ.ಮೀ. ದೂರ ತಲೆಯ ಮೇಲೆ ಹೊತ್ತುಕೊಂಡು ಸಾಗಿ ಅಂತ್ಯಸಂಸ್ಕಾರ ನಡೆಸಿದ ಘಟನೆಯ ವೀಡಿಯೊ ದೃಶ್ಯ ಪ್ರಸಾರವಾಗಿ ಇಡೀ ದೇಶದಲ್ಲಿ ತಲ್ಲಣ ಮೂಡಿಸಿತ್ತು. ವಾಹನದಲ್ಲಿ ಶವ ಕೊಂಡೊಯ್ಯಲು ಹಣ ಇಲ್ಲದ ಬಡಪಾಯಿ ದಾನಾ ಮಾಝಿಯ ನೆರವಿಗೆ ಆ್ಯಂಬುಲೆನ್ಸ್‌ನವರು ಕೂಡಾ ಬಂದಿರಲಿಲ್ಲ.

ಈ ಘಟನೆ ಕಳೆದು ಒಂದು ವರ್ಷವಾಗುತ್ತಾ ಬಂದಂತೆ ಇದೀಗ ಮಾಝಿಯ ಅದೃಷ್ಟ ಖುಲಾಯಿಸಿದೆ. ತನ್ನ ಪತ್ನಿಯ ಶವವನ್ನು ಹೊತ್ತುಕೊಂಡು ಸಾಗಿದ ಅದೇ ಬೀದಿಯಲ್ಲಿ ಕಳೆದ ಮಂಗಳವಾರ ಮಾಝಿ ಹೊಚ್ಚ ಹೊಸದಾದ, 65,000 ರೂ. ಕೊಟ್ಟು ಖರೀದಿಸಿದ ಹೋಂಡಾ ಬೈಕ್‌ನಲ್ಲಿ ಬಂದಿಳಿದು ತನ್ನ ಅದೃಷ್ಟ ಬದಲಾಗಿರುವುದನ್ನು ತೋರಿಸಿಕೊಟ್ಟಿದ್ದಾನೆ.

ಇದೆಲ್ಲಾ ಹೇಗಾಯಿತು ಎಂಬ ಪ್ರಶ್ನೆಗೆ ಮಾಝಿ ನೀಡುವ ಉತ್ತರ - ದಾನಿಗಳ, ಸಹೃದಯಿಗಳ ಮತ್ತು ಸರಕಾರದ ನೆರವು. ಪತ್ನಿಯ ಶವವನ್ನು ಹೊತ್ತುಕೊಂಡು ಸಾಗುವ ವೀಡಿಯೊ ದೃಶ್ಯಾವಳಿ ಪ್ರಸಾರವಾದ ಬಳಿಕ ಮಾಝಿಗೆ ಹಲವಾರು ದಾನಿಗಳು ನೆರವು ನೀಡಿದ್ದಾರೆ. ಬಹ್ರೈನ್‌ನ ಪ್ರಧಾನಿ ಖಲೀಫ ಬಿನ್ ಸಲ್ಮಾನ್ ಅಲ್ ಖಲೀಫ 9 ಲಕ್ಷ ರೂ. ಹಣ ನೀಡಿದ್ದಾರೆ. ಈ ಹಿಂದೆ ಬ್ಯಾಂಕ್‌ನಲ್ಲಿ ಖಾತೆ ಕೂಡಾ ಹೊಂದಿರದ ಮಾಝಿ ಈಗ ಸಾಕಷ್ಟು ಪ್ರಮಾಣದಲ್ಲಿ ಠೇವಣಿ ಹೊಂದಿದ್ದಾನೆ. ಭುವನೇಶ್ವರದ ವಸತಿ ಶಾಲೆಯಲ್ಲಿ ಮಾಝಿಯ ಮೂವರು ಪುತ್ರಿಯರಿಗೆ ಉಚಿತ ಶಿಕ್ಷಣದ ಅವಕಾಶ ದೊರೆತಿದೆ.

  ಮತ್ತೆ ವಿವಾಹವಾಗಿರುವ ಮಾಝಿಗೆ ಪ್ರಧಾನಮಂತ್ರಿ ಗ್ರಾಮೀಣ ವಸತಿ ಯೋಜನೆಯಡಿ ವಸತಿಯೊಂದು ಮಂಜೂರಾಗಿದ್ದು ಅದು ನಿರ್ಮಾಣ ಹಂತದಲ್ಲಿದೆ.ಹೀಗೆ ಬರಿಗೈ ದಾಸಯ್ಯನಾಗಿದ್ದ ಮಾಝಿಯ ಅದೃಷ್ಟ ವರ್ಷ ಕಳೆಯುವಷ್ಟರಲ್ಲಿ ಖುಲಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X