‘ಸಾರ್ವಜನಿಕ ಶಿಕ್ಷಣ ಎದುರಿಸುತ್ತಿರುವ ಸವಾಲುಗಳು’ ಡಿ.9ರಂದು ವಿಚಾರ ಸಂಕಿರಣ
ಮಂಗಳೂರು, ಡಿ. 8: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ‘ಸಾರ್ವಜನಿಕ ಶಿಕ್ಷಣ ಎದುರಿಸುತ್ತಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣವು ಡಿ.9ರಂದು ಮಧ್ಯಾಹ್ನ 2:30ಕ್ಕೆ ನಗರದ ಸಹೋದಯ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಮುಹಮ್ಮದ್ ತಪ್ಸೀರ್ ವಹಿಸಲಿದ್ದಾರೆ.
ಹಂಪಿ ವಿಶ್ವವಿದ್ಯಾನಿಲಯದ ಕನ್ನಡ ಅಭಿವೃದ್ಧಿ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಡಾ. ಎಚ್.ಡಿ.ಪ್ರಶಾಂತ್ ಹಾಗೂ ಕ್ಯಾಂಪಸ್ ಫ್ರಂಟ್ ರಾಷ್ಟ್ರಾಧ್ಯಕ್ಷ ಪಿ.ಶುಹೈಬ್ ವಿಷಯ ಮಂಡನೆಯನ್ನು ಮಾಡಲಿದ್ದಾರೆ.ವಿಚಾರ ಸಂಕಿರಣದಲ್ಲಿ ಕೇಂದ್ರ ಸರಕಾರವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಿದ್ಧಪಡಿಸುತ್ತಿದ್ದು, ಕೆಲವೇ ತಿಂಗಳುಗಳಲ್ಲಿ ಅದನ್ನು ಜಾರಿಗೆ ತರಲು ಅಣಿಯಾಗುತ್ತಿದೆ. ಹೊಸ ನೀತಿಯ ಬಗ್ಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಚರ್ಚೆಗಳನ್ನು ನಡೆಸದೆ ಜಾರಿಗೆ ತರಲು ಸಿದ್ಧವಾಗುತ್ತಿರುವಾಗ, ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸುವುದು ಅನಿವಾರ್ಯವಾಗಿದೆ. ಇದರ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದೇಶಾದ್ಯಂತ ಸೆಮಿನಾರ್, ಶಿಕ್ಷಕರ ಸಮ್ಮಿಲನದಂತಹ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಪಿ.ಜೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.





