ಡಿ.10: ವಿಶ್ವ ಮಾನವ ಹಕ್ಕುಗಳ ದಿನಾಚರಣೆ
ಚಿತ್ರದುರ್ಗ, ಡಿ.8: ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯಿಂದ ಡಿ.10ರಂದು ಬೆಳಗ್ಗೆ 11:30ಕ್ಕೆ ಗುರುಭವನದಲ್ಲಿ ವಿಶ್ವಮಾನವ ಹಕ್ಕುಗಳ ದಿನಾಚರಣೆ ಹಾಗೂ ಕೊಳಗೇರಿ ನಿವಾಸಿಗಳಿಗೆ, ಬಡವರಿಗೆ ಉಚಿತ ಹೊದಿಕೆ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಸೈಟ್ ಶಾಮಣ್ಣ ಹೊದಿಕೆಗಳನ್ನು ವಿತರಿಸಲಿದ್ದಾರೆ. ಕೆಕೆಎನ್‌ಎಸ್‌ಎಸ್ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯ ಸಮಿತಿಯ ಗೌರವಾಧ್ಯಕ್ಷ ಎನ್.ಪಿ.ಸ್ವಾಮಿ, ಮಾಜಿ ಶಾಸಕ ಎ.ವಿ.ಉಮಾಪತಿ, ಕಾಂಗ್ರೆಸ್ ಮುಖಂಡ ಮೆಹಬೂಬ್ ಪಾಷ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಾತ್ಯರಾಜನ್, ಗೋ.ತಿಪ್ಪೇಶ್, ನಗರಸಭೆೆ ಮಾಜಿ ಅಧ್ಯಕ್ಷ ಡಿ.ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಅಬ್ದುಲ್ ಜಬ್ಬಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





