Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸುರತ್ಕಲ್-ಬಿ.ಸಿ.ರೋಡ್ ಚತುಷ್ಪಥ...

‘ಸುರತ್ಕಲ್-ಬಿ.ಸಿ.ರೋಡ್ ಚತುಷ್ಪಥ ಮೇಲ್ದರ್ಜೆಗೆ 800 ಕೋಟಿ ರೂ. ವೆಚ್ಚದ ಅಂದಾಜುಪಟ್ಟಿ ಸಿದ್ಧ’

ವಾರ್ತಾಭಾರತಿವಾರ್ತಾಭಾರತಿ8 Dec 2017 10:40 PM IST
share

ಮಂಗಳೂರು, ಡಿ. 9: ಸಾಗರ್‌ಮಾಲಾ ಯೋಜನೆಯಡಿ ಸುರತ್ಕಲ್, ಕೊಟ್ಟಾರ ಮತ್ತು ಬಿ.ಸಿ.ರೋಡ್‌ನಲ್ಲಿ ಸಮಾನಾಂತರ ಫ್ಲೈ ಓವರ್ ನಿರ್ಮಾಣ ಸಹಿತ 800 ಕೋಟಿ ರೂ.ವೆಚ್ಚದಲ್ಲಿ ಸುರತ್ಕಲ್-ಬಿ.ಸಿ.ರೋಡ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ 66 ಮೇಲ್ದರ್ಜೆಗೇರಿಸುವ ಕಾಮಗಾರಿಗಳ ಅಂದಾಜುಪಟ್ಟಿ ಸಿದ್ಧ ಸಿದ್ಧಪಡಿಸಲಾಗಿದೆ. ಈ ಹೆದ್ದಾರಿಯ ತುರ್ತು ನಿರ್ವಹಣೆಗೆ 10 ಕೋಟಿ ರೂ. ಬಿಡುಗಡೆಯಾಗಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸುರತ್ಕಲ್-ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಸಮಗ್ರ ಅಭಿವೃದ್ಧಿಯಾಗಲಿದ್ದು, 30 ಕಿ.ಮೀ. ಉದ್ದದ ಹೊಸ ಸರ್ವಿಸ್ ರಸ್ತೆ ನಿರ್ಮಾಣವಾಗಲಿದೆ. ಇದರಲ್ಲಿ ಬೈಕಂಪಾಡಿಯಿಂದ ಕುಂಟಿಕಾನದವರೆಗೆ 7 ಕಿ.ಮೀ. ಕಾಂಕ್ರಿಟ್ ಷಟ್ಪಥ ರಸ್ತೆ ನಿರ್ಮಾಣವಾಗಲಿದೆ. ನಂತೂರಿನಲ್ಲಿ ಓವರ್ ಪಾಸ್, ಕೂಳೂರಿನಲ್ಲಿ ಹೊಸ ಸೇತುವೆ, ಹೊನ್ನಕಟ್ಟೆ ಮತ್ತು ಪಣಂಬೂರಿನಲ್ಲಿ ಅಂಡರ್ ಪಾಸ್, ಪಡೀಲ್ ಜಂಕ್ಷನ್ ಅಭಿವೃದ್ಧಿ, ಬ್ರಹ್ಮರಕೂಟ್ಲುನಲ್ಲಿ ಕಿರು ಸೇತುವೆ ಕಾಮಗಾರಿ ಒಳಗೊಂಡಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಗುರುಪುರ ಹೊಸ ಸೇತುವೆಕುಲಶೇಖರ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ನವೀಕರಣ ಕಾಮಗಾರಿಗೆ 17.50 ಕೋಟಿ ರೂ. ಹಾಗೂ ಗುರುಪುರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ 50 ಕೋಟಿ ರೂ.ಬಿಡುಗಡೆಯಾಗಿದೆ. ಈ ಹೆದ್ದಾರಿ 45 ಮೀ. ಅಗಲೀಕರಣಕ್ಕೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಶೀಘ್ರ ಭೂ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ.ಚಾರ್ಮಾಡಿ ರಸ್ತೆಬಿ.ಸಿ.ರೋಡ್-ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ ದ್ವಿಪಥ ಅಗಲೀಕರಣ ಮತ್ತು ಅಭಿವೃದ್ದಿಗಾಗಿ (ಕಿ.ಮೀ.19.80ರಿಂದ 40)159.70 ಕೋಟಿ ರೂ. ಅಂದಾಜು ಪಟ್ಟಿಯನ್ನು ಅನುಮೋದನೆಗಾಗಿ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಈ ಹೆದ್ದಾರಿಯ ಮಣಿಹಳ್ಳ, ನಿಡಿಗಲ್ ಮತ್ತು ಚಾರ್ಮಾಡಿಹಳ್ಳ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಯ ಟೆಂಡರ್ ಅನುಮೋದನೆಗೆ ಸಲ್ಲಿಕೆಯಾಗಿದೆ. 2017-18 ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗೆ (ಕಿ.ಮೀ. 40ರಿಂದ 75) 290 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆಯಾಗಿದೆ. ಸಿ.ಆರ್.ಎಫ್ ಕಾಮಗಾರಿಸಿಆರ್‌ಎಫ್ ಕಾಮಗಾರಿಯಲ್ಲಿ ಮೊದಲ ಹಂತದಲ್ಲಿ 14 ಕಾಮಗಾರಿಗಳಿಗೆ 65.40 ಕೋಟಿ ರೂ. ಮತ್ತು ದ್ವಿತೀಯ ಹಂತದಲ್ಲಿ 8 ಕಾಮಗಾರಿಗಳಿಗೆ 55.5 ಕೋಟಿ ರೂ.ಅನುದಾನ ಮಂಜೂರಾಗಿದೆ. ಸಿಆರ್‌ಎಫ್ ಯೋಜನೆಯಡಿ ಹೆಚ್ಚಿನ ಅನುದಾನಕ್ಕಾಗಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ಶೀಘ್ರ ಹೆಚ್ಚುವರಿ ಅನುದಾನ ಬಿಡುಗಡೆಯಾಗಲಿದೆ ಎಂದು ಸಂಸದರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X