ಕೆರೆಗೆ ಬಿದ್ದು ರೈತ ಸಾವು
ಶಿವಮೊಗ್ಗ, ಡಿ. 8: ನೀರು ಕುಡಿಯಲು ಕೆರೆಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ರೈತರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂರಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜನಾಯ್ಕಾ(73) ಮೃತಪಟ್ಟ ರೈತ ಎಂದು ಗುರುತಿಸಲಾಗಿದೆ. ಕಾನ್‌ಕೆರೆಯಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
Next Story





