Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೂರಿಗಾಗಿ ಹೆತ್ತ ತಾಯಿ ಹೊತ್ತು...

ಸೂರಿಗಾಗಿ ಹೆತ್ತ ತಾಯಿ ಹೊತ್ತು ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಗ !

ಬಸವ ವಸತಿಯಡಿ ಮನೆಗೆ ಅಡ್ಡಿಯಾದ ಆಧಾರ್

ವಾರ್ತಾಭಾರತಿವಾರ್ತಾಭಾರತಿ8 Dec 2017 11:15 PM IST
share
ಸೂರಿಗಾಗಿ ಹೆತ್ತ ತಾಯಿ ಹೊತ್ತು ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಗ !

ಮಂಗಳೂರು, ಡಿ.8: ಹೆತ್ತ ತಾಯಿಯ ಆಸೆಯನ್ನು ನೆರವೇರಿಸುವ ಸಲುವಾಗಿ ಮಗನೊಬ್ಬ ಕಾಯಿಲೆಯಿಂದ ಬಳಲುತ್ತಿರುವ ತನ್ನ ತಾಯಿಯನ್ನು ತಾಯಿಯನ್ನು ಹೊತ್ತು ತಂದ ಘಟನೆಗೆ ಜಿಲ್ಲಾಧಿಕಾರಿ ಕಚೇರಿ ಸಾಕ್ಷಿಯಾಯಿತು.

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಗೇರುಕಟ್ಟೆ ನಿವಾಸಿ ಸುಬ್ರಹ್ಮಣ್ಯ ಸ್ವಂತ ಸೂರಿಗಾಗಿ ಸಕ್ಕರೆ ಕಾಯಿಲೆಯಿಂದ ಹಾಸಿಗೆ ಹಿಡಿದಿರುವ 72ರ ವಯೋವೃದ್ಧೆ ತಾಯಿಯನ್ನು ಹೊತ್ತುಕೊಂಡೇ ಅಲೆದಾಡುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿವೇಶನಕ್ಕಾಗಿ ಹೋರಾಟ ನಡೆಸುತ್ತಿರುವ ಅವರು ಶುಕ್ರವಾರ ತಾಯಿಯನ್ನು ಹೊತ್ತುಕೊಂಡೇ ಜಿಲ್ಲಾಧಿಕಾರಿ ಕಚೇರಿಯ ಮೂರನೇ ಮಹಡಿಗೆ ಬಂದಿದ್ದರು. ಡೀಸಿ ಕಚೇರಿ ಮುಂಭಾಗವೇ ಅನಾರೋಗ್ಯ ಪೀಡಿತ ತಾಯಿಯನ್ನು ಮಲಗಿಸಿ ತಮಗೆ ಸೂರು ಒದಗಿಸಬೇಕೆಂದು ಬೇಡಿಕೊಂಡರು.

ಪಾರೆಂಕಿಯ ಬಂಗೇರುಕಟ್ಟೆಯಲ್ಲಿ 2.75 ಸೆಂಟ್ಸ್ ಸ್ವಂತ ಭೂಮಿ ಹೊಂದಿರುವ ಅವರು ಹಕ್ಕುಪತ್ರವನ್ನೂ ಹೊಂದಿದ್ದಾರೆ. ಬಸವ ವಸತಿ ಯೋಜನೆಯಡಿ ಮನೆಗಾಗಿ ಸ್ಥಳೀಯ ಪಂಚಾಯತ್‌ಗೆ ಅರ್ಜಿ ಸಲ್ಲಿಸಿದ್ದರೂ ಮನೆ ನಿರ್ಮಾಣವಾಗಿಲ್ಲ. ಇದಕ್ಕೆ ಕಾರಣ ಆಧಾರ್ ಸಂಖ್ಯೆ ಸಮಸ್ಯೆ. ಇದರಿಂದಾಗಿ ಸುಬ್ರಹ್ಮಣ್ಯ ತಮ್ಮ ತಾಯಿಯೊಂದಿಗೆ ದೇವಸ್ಥಾನ, ಬಸ್ ನಿಲ್ದಾಣವನ್ನೇ ಆಶ್ರಯಿಸಿಕೊಂಡಿದ್ದಾರೆ.

ಹಿಂದಿನ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಅವರು ಮನೆಯೊದಗಿಸುವ ಎಲ್ಲಾ ವ್ಯವಸ್ಥೆಯನ್ನು ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್‌ಗೆ ಸೂಚನೆಯನ್ನೂ ನೀಡಿದ್ದಾರೆ. ಆದರೆ ಪಂಚಾಯತ್ ನಿರ್ಲಕ್ಷ್ಯ ತೋರುತ್ತಿದೆ. ಅನಾರೋಗ್ಯ ಪೀಡಿತ ತಾಯಿಯನ್ನು ಬಿಟ್ಟು ಎಲ್ಲೂ ಹೋಗದ ಸ್ಥಿತಿ ತನ್ನದು. ಅದಕ್ಕಾಗಿ ತಾಯಿಯನ್ನು ಹೊತ್ತುಕೊಂಡೇ ಎಲ್ಲಾ ಕಡೆ ಅಲೆದಾಡುತ್ತಿದ್ದೇನೆ. ಇದೀಗ ನ್ಯಾಯಕ್ಕಾಗಿ ಮತ್ತೊಮ್ಮೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದೇನೆ ಎಂದು ಸುಬ್ರಹ್ಮಣ್ಯ ಮಾಧ್ಯಮದವರ ಜತೆ ಹೇಳುತ್ತಿದ್ದರೆ, ಮಲಗಿದ್ದ ತಾಯಿ ಸರೋಜಮ್ಮರ ಕಣ್ಣಗಳು ತೇವಗೊಂಡಿದ್ದವು.

ಅಪರ ಜಿಲ್ಲಾಧಿಕಾರಿ ಸ್ಪಂದನೆ
ಬೆಳಗ್ಗೆ 8.30ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಅವರು 12 ಗಂಟೆಯವರೆಗೂ ಅಲ್ಲೇ ಇದ್ದರೂ ಯಾರೂ ಗಮನಿಸಿರಲಿಲ್ಲ. ಬಳಿಕ ಪತ್ರಕರ್ತರು ಅಪರ ಜಿಲ್ಲಾಧಿಕಾರಿ ಕುಮಾರ್ ಅವರನ್ನು ಸಂಪರ್ಕಿಸಿ ಪರಿಸ್ಥಿತಿಯನ್ನು ವಿವರಿಸಿದಾಗ ತಕ್ಷಣ ಸ್ಪಂದಿಸಿದ ಅವರು ಮನೆಯೊದಗಿಸುವ ಭರವಸೆ ನೀಡಿದರಲ್ಲದೆ ಸರೋಜಮ್ಮರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಬೆಳ್ತಂಗಡಿ ಆಸ್ಪತ್ರೆಗೆ  ದಾಖಲಿಸುವ ವ್ಯವಸ್ಥೆ ಮಾಡಿದರು.

ಈ ಹಿಂದೆ ಸರೋಜಮ್ಮರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಜಿಲ್ಲಾಡಳಿತವೇ ಮಾಡಿದೆ. ಕಚೇರಿಯ ಸಿಬ್ಬಂದಿ ಕಂಪ್ಯೂಟರ್‌ನೊಂದಿಗೆ ಆಸ್ಪತ್ರೆಗೇ ತೆರಳಿ ಆಧಾರ್ ಮಾಡಿಸಲು ನೆರವಾಗಿದ್ದಾರೆ. ಜಿಲ್ಲಾಡಳಿತ ಅತಿ ಕಾಳಜಿಯಿಂದ ಈ ಕೆಲಸ ಮಾಡಿದೆ. ಅವರಿಗೆ ಸ್ವಂತ ಸೂರು ಶೀಘ್ರವೇ ದೊರೆಯಲಿದೆ. ಸ್ಥಳೀಯ ಪಂಚಾಯತ್‌ಗೂ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ಕುಮಾರ್ ತಿಳಿಸಿದರು.

ಆಧಾರ್ ಇಲ್ಲದ ಕಾರಣದಿಂದಾಗಿ ಈ ಕುಟುಂಬಕ್ಕೆ ಬಸವ ವಸತಿ ಯೋಜನೆಯಡಿ ಮನೆಯೊದಗಿಸಲು ಸಮಸ್ಯೆಯಾಗಿತ್ತು. ಜಿಲ್ಲಾಡಳಿತವೇ ಮುಂದೆ ನಿಂತು ಇವರಿಗೆ ಆಧಾರ್ ಮಾಡಿಸಿಕೊಟ್ಟಿದೆ. ಇದೀಗ ಆಧಾರ್ ಸಂಖ್ಯೆ ದೊರೆತಿದ್ದು, ಶೀಘ್ರದಲ್ಲಿ ಮನೆಯೊದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X