ವೆನ್ಲಾಕ್ ಜಿಲ್ಲಾ ಆಸ್ಪತ್ರೆ ವತಿಯಿಂದ ರಶೀದ್ ವಿಟ್ಲರಿಗೆ ಸನ್ಮಾನ

ಮಂಗಳೂರು, ಡಿ. 9: ವೆನ್ಲಾಕ್ ಜಿಲ್ಲಾ ಆಸ್ಪತ್ರೆ ವತಿಯಿಂದ ಮಂಗಳೂರು ಐ.ಎಂ.ಎ. ಸಭಾಂಗಣದಲ್ಲಿ ಶನಿವಾರ ಜರುಗಿದ 'ಕಾಯಕಲ್ಪೋತ್ಸವ' ಕಾರ್ಯ ಕ್ರಮದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ಸಾಮಾಜಿಕ ಸಂಘಟಕ, ಮಂಗಳೂರು ಎಂ.ಫ್ರೆಂಡ್ಸ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ ಅವರನ್ನು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಸ್. ಸನ್ಮಾನಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್, ವೆನ್ಲಾಕ್ ಜಿಲ್ಲಾ ಆರೋಗ್ಯ ಅಧೀಕ್ಷಕರಾದ ಡಾ. ರಾಜೇಶ್ವರಿ ದೇವಿ, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಅಧೀಕ್ಷಕರಾದ ಡಾ. ಸವಿತ, ಖ್ಯಾತ ವೈದ್ಯರಾದ ಡಾ. ಚಕ್ರಪಾಣಿ, ಡಾ. ಅಶ್ವತ್ ಸುಬ್ಬರಾವ್ ಮೊದಲಾದವರು ಉಪಸ್ಥಿತರಿದ್ದರು.
Next Story





